Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:6 - ಕನ್ನಡ ಸಮಕಾಲಿಕ ಅನುವಾದ

6 ಜನರೆಲ್ಲರೂ ಪ್ರತಿಯೊಬ್ಬನು ತನ್ನ ಪುತ್ರಪುತ್ರಿಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು, ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ, ಅವನು ಬಹಳ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದನು. ಆದರೂ ದಾವೀದನು ಯೆಹೋವ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೈನ್ಯದಲ್ಲಿದ್ದ ಎಲ್ಲರೂ ದುಃಖತಪ್ತರಾಗಿದ್ದರು ಮತ್ತು ಕೋಪಗೊಂಡಿದ್ದರು; ಯಾಕೆಂದರೆ ಅವರ ಗಂಡು ಮತ್ತು ಹೆಣ್ಣುಮಕ್ಕಳೆಲ್ಲ ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದರು. ದಾವೀದನನ್ನು ಕಲ್ಲುಗಳಿಂದ ಕೊಲ್ಲಬೇಕೆಂದು ಅವರು ಮಾತಾಡಿಕೊಳ್ಳುತ್ತಿದ್ದರು. ದಾವೀದನು ಇದರಿಂದ ತಳಮಳಗೊಂಡರೂ ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:6
51 ತಿಳಿವುಗಳ ಹೋಲಿಕೆ  

ನಾನು ದೇವರಲ್ಲಿ ಭರವಸೆಯಿಡುವೆನು. ನಾನು ಭಯಪಡುವುದಿಲ್ಲ. ಮಾನವನು ನನಗೇನು ಮಾಡುವನು?


ಹೌದು, ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ. ನನ್ನ ನಿರೀಕ್ಷೆಯು ದೇವರಿಂದಲೇ.


ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.


ನನ್ನ ಹೃದಯದ ಕಷ್ಟಗಳನ್ನು ಪರಿಹರಿಸಿರಿ; ನೀವು ನನ್ನ ಸಂಕಟಗಳಿಂದ ನನ್ನನ್ನು ಬಿಡಿಸಿರಿ.


ಆದ್ದರಿಂದ, “ಕರ್ತದೇವರು ನನ್ನ ಸಹಾಯಕರು, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?” ಎಂದು ನಾವು ಧೈರ್ಯವಾಗಿ ಹೇಳುವೆವು.


ಅವನು ತನಗೆ ದೇವರಿಂದ ಹೇಳಲಾದ ನಿರೀಕ್ಷೆಗೆ ಯಾವ ಆಸ್ಪದವು ಇಲ್ಲದಿರುವಾಗಲೂ ನಿರೀಕ್ಷೆಯಿಂದ ನಂಬಿ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಇರುವುದು,” ಎಂಬ ಹೇಳಿಕೆಯಂತೆ ಅವನು ಅನೇಕ ಜನಾಂಗಗಳಿಗೆ ತಂದೆಯಾದನು.


“ನಾನು ಬಹಳ ಕುಗ್ಗಿ ಹೋಗಿದ್ದೇನೆ,” ಎಂದು ನಾನು ದೇವರಲ್ಲಿ ಭರವಸೆ ಇಟ್ಟಾಗ ಹೇಳಿದೆ.


ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ಆಗ ಮೋಶೆಯು ಯೆಹೋವ ದೇವರಿಗೆ ಮೊರೆಯಿಟ್ಟು, “ಈ ಜನರಿಗೆ ನಾನೇನು ಮಾಡಲಿ? ಅವರು ಬಹಳಮಟ್ಟಿಗೆ ನನಗೆ ಕಲ್ಲೆಸೆಯುವುದಕ್ಕಿದ್ದಾರೆ,” ಎಂದನು.


ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.


ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು; ಅವರು ನಿನ್ನ ಹೃದಯವನ್ನು ದೃಢಪಡಿಸುವರು; ಯೆಹೋವ ದೇವರಿಗಾಗಿ ಕಾದಿರು.


ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಜಜ್ಜಿಹೋಗಲಿಲ್ಲ, ನಾವು ಚಂಚಲರಾಗಿದ್ದರೂ ನಿರಾಶರಾಗಲಿಲ್ಲ.


ಅವಳು ಬಹಳ ಮನಗುಂದಿದವಳಾಗಿ ಯೆಹೋವ ದೇವರನ್ನು ಪ್ರಾರ್ಥಿಸಿ, ಅತ್ತು ಒಂದು


ಆಗ ಅವರು ಯೇಸುವಿನ ಮೇಲೆ ಎಸೆಯಲು ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟು ಹೋದರು.


ಆಗ ಸಭೆಯವರೆಲ್ಲರೂ ಅವರಿಗೆ ಕಲ್ಲೆಸೆಯಬೇಕೆಂದಿದ್ದರು. ಯೆಹೋವ ದೇವರ ಮಹಿಮೆಯು ದೇವದರ್ಶನ ಗುಡಾರದಲ್ಲಿ ಇಸ್ರಾಯೇಲರಿಗೆಲ್ಲಾ ಪ್ರತ್ಯಕ್ಷವಾಯಿತು.


ನಾವು ಮಕೆದೋನ್ಯಕ್ಕೆ ಬಂದಿದ್ದಾಗ ನಮ್ಮ ದೇಹಕ್ಕೆ ವಿಶ್ರಾಂತಿ ದೊರೆಯಲಿಲ್ಲ. ಎಲ್ಲಾ ವಿಧದಲ್ಲಿಯೂ ಒತ್ತಡಗಳು: ಹೊರಗೆ ಹೋರಾಟ, ಒಳಗೆ ಅಂಜಿಕೆ.


ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ದೇವರು ನನ್ನನ್ನು ಕೊಂದರೂ, ನಾನು ದೇವರ ಮೇಲೆ ನಿರೀಕ್ಷೆಯಿಂದಿರುವೆನು; ನಾನು ನಿಶ್ಚಯವಾಗಿ ನನ್ನ ನಡತೆಯ ಒಳ್ಳೆಯತನವನ್ನು ದೇವರ ಮುಂದೆ ಸ್ಥಾಪಿಸುವೆನು.


ನಮಗೆ ಕಷ್ಟಸಂಕಟಗಳು ಬಂದರೆ, ಅದು ನಿಮ್ಮ ಆದರಣೆ ಮತ್ತು ರಕ್ಷಣೆಗೋಸ್ಕರವೇ ಇರುತ್ತದೆ. ನಾವು ಸಂತೈಸುವಿಕೆಯನ್ನು ಹೊಂದಿರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ಆ ಆದರಣೆಯು ನಮ್ಮಂತೆ ನೀವು ಅನುಭವಿಸುವ ಕಷ್ಟಸಂಕಟಗಳನ್ನು ಸಹನೆಯಿಂದ ಅನುಭವಿಸುವಂತೆ ಮಾಡುವುದು.


ಅವನು ದೇವರು ಮಾಡಿದ ವಾಗ್ದಾನಕ್ಕೆ ವಿರುದ್ಧ ಅಪನಂಬಿಕೆಯಿಂದ ಚಂಚಲಚಿತ್ತನಾಗದೆ, ನಂಬಿಕೆಯಿಂದ ಶಕ್ತಿವಂತನಾಗಿ ದೇವರಿಗೆ ಮಹಿಮೆಯನ್ನು ಸಲ್ಲಿಸಿದನು.


ಪಿಲಾತನು ಅವರಿಗೆ, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಅವರೆಲ್ಲರೂ, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಹೇಳಿದರು.


ಯೇಸುವಿನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು, “ದಾವೀದನ ಪುತ್ರನಿಗೆ ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಮಹೋನ್ನತದಲ್ಲಿ ಜಯ!” ಎಂದು ಘೋಷಿಸಿದರು.


ನೀವು ದೀನರಿಗೆ ಕೋಟೆಯೂ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ, ಭೀಕರರ ಶ್ವಾಸವು ಬಿಸಿಲಿಗೆ ನೆರಳೂ, ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋಸ್ಕರ ಆಶ್ರಯವೂ ಆಗಿದ್ದೀರಿ.


ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ, ನನ್ನ ರಕ್ಷಣೆಯು ದೇವರಿಂದಲೇ.


ನಿಮ್ಮ ಜಲಪಾತಗಳ ಶಬ್ದವು ಒಂದು ಪ್ರವಾಹವು ಮತ್ತೊಂದು ಪ್ರವಾಹಕ್ಕೆ ಕರೆಯುವಂತಿದೆ. ಅದರಂತೆಯೇ ನಿಮ್ಮ ಎಲ್ಲಾ ಅಲೆಗಳೂ ತೆರೆಗಳೂ ನನ್ನ ಮೇಲೆ ಹಾದು ಹೋದಂತಿವೆ.


ಆದರೆ ದಾನನ ಮಕ್ಕಳು ಅವನಿಗೆ, “ಕೋಪಿಷ್ಟರು ನಿನ್ನ ಮೇಲೆ ಬೀಳದ ಹಾಗೆ ನೀನು ನಿನ್ನ ಪ್ರಾಣವನ್ನೂ, ನಿನ್ನ ಮನೆಯವರ ಪ್ರಾಣವನ್ನೂ ಕಳೆದುಕೊಳ್ಳದ ಹಾಗೆ ನಿನ್ನ ಶಬ್ದ ನಮಗೆ ಕೇಳಿಸದೆ ಇರಲಿ,” ಎಂದರು.


ಆಗ ಯಾಕೋಬನು ಬಹಳವಾಗಿ ಭಯಪಟ್ಟು, ತನ್ನ ಸಂಗಡ ಇದ್ದ ಜನರನ್ನೂ, ಕುರಿಗಳನ್ನೂ, ದನಗಳನ್ನೂ, ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.


ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.


ಹೂಷೈ, “ನಿನ್ನ ತಂದೆಯೂ, ಅವನ ಮನುಷ್ಯರೂ ಪರಾಕ್ರಮಶಾಲಿಗಳು. ಅವರು ಅಡವಿಯಲ್ಲಿ ಮರಿಗಳನ್ನು ಕಳೆದುಕೊಂಡ ಕರಡಿಯ ಹಾಗೆಯೇ ಕೋಪವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು. ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವುದಿಲ್ಲ.


ಅವಳು ಬೆಟ್ಟಕ್ಕೆ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಿ ಹಾಕಲು ಗೇಹಜಿಯು ಹತ್ತಿರ ಬಂದದ್ದರಿಂದ ದೇವರ ಮನುಷ್ಯನು, “ಅವಳನ್ನು ಬಿಡು. ಏಕೆಂದರೆ ಅವಳ ಹೃದಯವು ಬಹಳ ನೋವಿನಿಂದ ತುಂಬಿದೆ. ಯೆಹೋವ ದೇವರು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾರೆ,” ಎಂದನು.


ಆಗ ಸೌಲನ ಮಗ ಯೋನಾತಾನನು ಎದ್ದು ಮರುಭೂಮಿಯಲ್ಲಿರುವ ದಾವೀದನ ಬಳಿಗೆ ಹೋಗಿ, ಅವನನ್ನು ದೇವರಲ್ಲಿ ಬಲಪಡಿಸಿ ಸಹಾಯಮಾಡಿದನು.


ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ; ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ನನ್ನ ಉನ್ನತವಾದ ದುರ್ಗ ಆಗಿದ್ದಾರೆ.


ಯೆಹೋವ ದೇವರಲ್ಲಿ ನಿರೀಕ್ಷಿಸುವವರೆಲ್ಲರೂ ದೃಢವಾಗಿರಿ; ನಿಮ್ಮ ಹೃದಯವು ಧೈರ್ಯದಿಂದ ಇರಲಿ.


ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವವನ ಮತ್ತು ಕ್ರೂರನ ಕೈಗೂ ನನ್ನನ್ನು ಸಿಕ್ಕಿಸದಿರಿ.


ಸಾರ್ವಭೌಮ ಯೆಹೋವ ದೇವರೇ, ನೀವು ನನ್ನ ನಿರೀಕ್ಷೆ ಆಗಿದ್ದೀರಿ. ನನ್ನ ಯೌವನದಿಂದ ನನ್ನ ಭರವಸೆಯೂ ಆಗಿದ್ದೀರಿ.


ಅವನು ಹೀಗೆ ಹೇಳಿದನು: “ನಾನು ನನ್ನ ವ್ಯಥೆಯಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟೆನು. ಅವರು ನನ್ನ ಕೂಗನ್ನು ಕೇಳಿದರು. ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ನಾನು ಕೂಗಿದೆನು, ಆಗ ನನ್ನ ಕರೆಯನ್ನು ನೀವು ಕೇಳಿದಿರಿ.


ಇಸ್ರಾಯೇಲರಾದ ಜನರು ಬಲಗೊಂಡು, ಮೊದಲನೆಯ ದಿವಸ ಯುದ್ಧಕ್ಕೆ ವ್ಯೂಹ ಕಟ್ಟಿದ ಸ್ಥಳದಲ್ಲಿ ತಿರುಗಿ ವ್ಯೂಹ ಕಟ್ಟಿದರು.


ಆಗ ಸಮುಯೇಲನು ಸೌಲನಿಗೆ, “ನೀನು ನನ್ನನ್ನು ಇಲ್ಲಿ ಬರಮಾಡಿ ವಿಶ್ರಾಂತಿ ಕೆಡಿಸಿದೆ,” ಎಂದನು. ಅದಕ್ಕೆ ಸೌಲನು, “ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ. ಏಕೆಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಮಾಡುತ್ತಾರೆ. ಆದರೆ ದೇವರು ನನ್ನನ್ನು ಬಿಟ್ಟುಹೋದರು. ಅವರು ಪ್ರವಾದಿಗಳ ಮುಖಾಂತರವಾದರೂ, ಸ್ವಪ್ನದ ಮುಖಾಂತರವಾದರೂ ನನಗೆ ಉತ್ತರ ಕೊಡಲಿಲ್ಲ. ಆದ್ದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು,” ಎಂದನು.


ನಾನು ಕರೆದಾಗ ನೀವು ನನಗೆ ಉತ್ತರಕೊಟ್ಟಿರುವಿರಿ. ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು, ನನ್ನನ್ನು ಬಲಪಡಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು