Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:7 - ಕನ್ನಡ ಸಮಕಾಲಿಕ ಅನುವಾದ

7 ಆಗ ದಾವೀದನು ಅಹೀಮೆಲೆಕನ ಮಗ ಅಬಿಯಾತರನೆಂಬ ಯಾಜಕನಿಗೆ, “ನೀನು ದಯಮಾಡಿ ಏಫೋದನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದನು. ಹಾಗೆಯೇ ಅಬ್ಯತಾರನು ಏಫೋದನ್ನು ದಾವೀದನ ಬಳಿಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದು ಹೇಳಲು ಅವನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೂ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿ ಧೈರ್ಯ ತಂದುಕೊಂಡನು. ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ‘ಏಫೋದ’ನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿದನು. ಅವನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ - ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ ಎಂದು ಹೇಳಲು ಅವನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ತೆಗೆದುಕೊಂಡು ಬಾ” ಎಂದನು. ಅವನು ಎಫೋದನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:7
8 ತಿಳಿವುಗಳ ಹೋಲಿಕೆ  

ಯಾಜಕನಾದ ಅಬಿಯಾತರನಿಗೆ ಅರಸನು, “ನೀನು ಅನಾತೋತಿನಲ್ಲಿರುವ ನಿನ್ನ ಹೊಲಗಳಿಗೆ ಹೋಗು. ಏಕೆಂದರೆ ನೀನು ಸಾವಿಗೆ ಪಾತ್ರನಾಗಿದ್ದೀಯೆ. ಆದರೆ ನೀನು ಸಾರ್ವಭೌಮ ಯೆಹೋವ ದೇವರ ಮಂಜೂಷವನ್ನು ನನ್ನ ತಂದೆ ದಾವೀದನ ಮುಂದೆ ಹೊತ್ತದ್ದರಿಂದಲೂ, ನನ್ನ ತಂದೆಯ ಎಲ್ಲಾ ಕಷ್ಟಗಳಲ್ಲಿ ನೀನು ಪಾಲುಗಾರನಾಗಿದ್ದರಿಂದಲೂ, ನಾನು ಈಗ ನಿನ್ನನ್ನು ಸಾಯಿಸುವುದಿಲ್ಲ,” ಎಂದನು.


ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ, ದೇವರ ಆಲಯದೊಳಗೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ನಿಯಮ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನು,” ಎಂದರು.


ಆಗ ಸೌಲನು ಅಹೀಯನಿಗೆ, “ನೀನು ದೇವರ ಮಂಜೂಷವನ್ನು ತೆಗೆದುಕೊಂಡು ಬಾ,” ಎಂದನು. ಏಕೆಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲರ ಬಳಿಯಲ್ಲಿತ್ತು.


“ಏಫೋದನ್ನು ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸ ಮಾಡಬೇಕು.


ಆದ್ದರಿಂದ ಅವರು, “ಅವನು ಇನ್ನು ಇಲ್ಲಿ ಬರುವನೋ?” ಎಂದು ಯೆಹೋವ ದೇವರನ್ನು ವಿಚಾರಿಸಿದರು. ಯೆಹೋವ ದೇವರು, “ಇಗೋ, ಅವನು ಸಲಕರಣೆಗಳಲ್ಲಿ ಅಡಗಿಕೊಂಡಿದ್ದಾನೆ,” ಎಂದು ಹೇಳಿದರು.


ಸೌಲನು ಯಾಜಕನ ಸಂಗಡ ಇನ್ನೂ ಮಾತನಾಡುತ್ತಿರುವಾಗ, ಫಿಲಿಷ್ಟಿಯರ ದಂಡಿನಲ್ಲಿ ಕೋಲಾಹಲವು ಹೆಚ್ಚಾಯಿತು. ಆದ್ದರಿಂದ ಸೌಲನು ಯಾಜಕನಿಗೆ, “ನಿನ್ನ ಕೈ ಹಿಂದೆ ತೆಗೆದುಕೋ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು