1 ಸಮುಯೇಲ 31:1 - ಕನ್ನಡ ಸಮಕಾಲಿಕ ಅನುವಾದ1 ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಮಾಡಿದರು. ಆಗ ಇಸ್ರಾಯೇಲರು ಫಿಲಿಷ್ಟಿಯರಿಂದ ಸೋತು ಓಡಿಹೋಗಿ, ಗಿಲ್ಬೋವ ಬೆಟ್ಟದಲ್ಲಿ ಹತರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡಿದರು. ಇಸ್ರಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡಿದರು. ಇಸ್ರಾಯೇಲ್ಯರು ಅವರಿಂದ ಅಪಜಯ ಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಫಿಲಿಷ್ಟಿಯರು ಇಸ್ರೇಲರ ವಿರುದ್ಧ ಹೋರಾಡಿದರು. ಇಸ್ರೇಲರು ಫಿಲಿಷ್ಟಿಯರಿಂದ ಸೋತು ಓಡಿಹೋದರು. ಬಹಳ ಜನ ಇಸ್ರೇಲರು ಗಿಲ್ಬೋವ ಶಿಖರದಲ್ಲಿ ಹತರಾದರು. ಅಧ್ಯಾಯವನ್ನು ನೋಡಿ |
ಆಗ ಸಮುಯೇಲನು ಸೌಲನಿಗೆ, “ನೀನು ನನ್ನನ್ನು ಇಲ್ಲಿ ಬರಮಾಡಿ ವಿಶ್ರಾಂತಿ ಕೆಡಿಸಿದೆ,” ಎಂದನು. ಅದಕ್ಕೆ ಸೌಲನು, “ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ. ಏಕೆಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಮಾಡುತ್ತಾರೆ. ಆದರೆ ದೇವರು ನನ್ನನ್ನು ಬಿಟ್ಟುಹೋದರು. ಅವರು ಪ್ರವಾದಿಗಳ ಮುಖಾಂತರವಾದರೂ, ಸ್ವಪ್ನದ ಮುಖಾಂತರವಾದರೂ ನನಗೆ ಉತ್ತರ ಕೊಡಲಿಲ್ಲ. ಆದ್ದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು,” ಎಂದನು.