Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 31:12 - ಕನ್ನಡ ಸಮಕಾಲಿಕ ಅನುವಾದ

12 ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು, ರಾತ್ರಿಯೆಲ್ಲಾ ನಡೆದುಹೋಗಿ, ಬೇತ್ ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶವವನ್ನೂ, ಅವನ ಪುತ್ರರ ಶವಗಳನ್ನೂ ತೆಗೆದುಕೊಂಡು ಯಾಬೇಷಿಗೆ ಬಂದು, ಅವುಗಳನ್ನು ಅಲ್ಲಿ ದಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು, ಅಲ್ಲಿ ಅವುಗಳನ್ನು ದಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರಲ್ಲಿದ್ದ ಶೂರರೆಲ್ಲರೂ ಹೊರಟು ರಾತ್ರಿಯೆಲ್ಲಾ ನಡೆದುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ಯಾಬೆಷಿನ ಸೈನಿಕರೆಲ್ಲ ಬೇತ್‌ಷೆಯಾನಿಗೆ ಹೋದರು. ಅವರು ರಾತ್ರಿಯೆಲ್ಲಾ ನಡೆದರು! ನಂತರ ಅವರು ಬೇತ್‌ಷೆಯಾನಿನ ಗೋಡೆಯಲ್ಲಿದ್ದ ಸೌಲನ ದೇಹವನ್ನು ಇಳಿಸಿದರು. ನಂತರ ಅವರು ಸೌಲನ ಗಂಡುಮಕ್ಕಳ ದೇಹಗಳನ್ನೂ ಇಳಿಸಿದರು. ನಂತರ ಅವರು ಆ ದೇಹಗಳನ್ನು ಯಾಬೇಷಿಗೆ ತೆಗೆದುಕೊಂಡು ಹೋದರು. ಸೌಲ ಮತ್ತು ಅವನ ಮೂವರು ಗಂಡುಮಕ್ಕಳ ದೇಹಗಳನ್ನು ಯಾಬೇಷಿನ ಜನರು ಅಲ್ಲಿ ದಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 31:12
6 ತಿಳಿವುಗಳ ಹೋಲಿಕೆ  

ಅವನು ತನಗೋಸ್ಕರ ದಾವೀದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು. ಅವರು ತೈಲಗಾರರ ವಿದ್ಯೆಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ, ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಿದ ಶವ ಪೆಟ್ಟಿಗೆಯಲ್ಲಿ ಅವನನ್ನು ಇಟ್ಟರು. ಅವನ ಗೌರವಕ್ಕಾಗಿ ಮಹಾ ಅಗ್ನಿಕುಂಡವನ್ನೇರ್ಪಡಿಸಿದರು.


ನೀನು ಶಾಂತಿಯುತವಾಗಿ ಸಾಯುವೆ. ನಿನಗಿಂತ ಮೊದಲು ಆಳಿದ ನಿನ್ನ ಪಿತೃಗಳಾದ ಅರಸರನ್ನು ಗೌರವಿಸಲು ಬೆಂಕಿಯನ್ನು ಹೊತ್ತಿಸಿದ ಪ್ರಕಾರ ನಿನಗೂ ಹಾಕುವರು. “ಅಯ್ಯೋ, ಒಡೆಯನೇ,” ಎಂದು ಹೇಳಿ ನಿನಗೋಸ್ಕರ ಗೋಳಾಡುವರು. ನಾನೇ ಈ ವಾಗ್ದಾನವನ್ನು ಮಾಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.’ ”


ಮತ್ತು ಸಂಬಂಧಿಯೊಬ್ಬರು ಮೃತ ದೇಹಗಳನ್ನು ಸುಡಲು ಆ ಮನೆಯಿಂದ ಹೊರತೆಗೆಯಲು ಬಂದಾಗ ಮತ್ತು ಅಲ್ಲಿ ಅಡಗಿಕೊಂಡಿದ್ದ ವ್ಯಕ್ತಿಯನ್ನು, “ನಿಮ್ಮೊಂದಿಗೆ ಬೇರೆ ಯಾರಾದರೂ ಇದ್ದಾರೆಯೇ?” ಎಂದು ಕೇಳಲು ಅವನು ಇಲ್ಲ ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ನಾವು ಯೆಹೋವ ದೇವರ ಹೆಸರನ್ನು ತೆಗೆದುಕೊಳ್ಳಬಾರದು.”


ಸೌಲನ ಆಯುಧಗಳನ್ನು ಅಷ್ಟೋರೆತ್ ಮಂದಿರದಲ್ಲಿ ಇಟ್ಟು, ಅವನ ಶವವನ್ನು ಬೇತ್ ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು.


ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶವವನ್ನೂ, ಅವನ ಪುತ್ರರ ಶವಗಳನ್ನೂ ತೆಗೆದುಕೊಂಡು ಯಾಬೇಷಿಗೆ ಬಂದು, ಅವರ ಎಲುಬುಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು