Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 31:5 - ಕನ್ನಡ ಸಮಕಾಲಿಕ ಅನುವಾದ

5 ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹೊರುವವನು ಕಂಡಾಗ, ಅವನೂ ತನ್ನ ಖಡ್ಗದ ಮೇಲೆ ಬಿದ್ದು, ಅವನ ಸಂಗಡ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೌಲನು ಮರಣ ಹೊಂದಿರುವುದನ್ನು ಅವನ ಆಯುಧವಾಹಕನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಅಲ್ಲಿಯೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸೌಲನು ಸತ್ತದ್ದನ್ನು ಅವನ ಆಯುಧವಾಹಕನು ಕಂಡು ತಾನೂ ಕತ್ತಿಯ ಮೇಲೆ ಬಿದ್ದು ಅಲ್ಲಿಯೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸೌಲನು ಸತ್ತದ್ದನ್ನು ಆಯುಧವಾಹಕನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಅಲ್ಲಿಯೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೌಲನು ಸತ್ತುಹೋದದ್ದನ್ನು ಕಂಡ ಆಯುಧವಾಹಕನೂ ತನ್ನ ಖಡ್ಗದಿಂದ ತಾನೂ ಆತ್ಮಹತ್ಯೆ ಮಾಡಿಕೊಂಡನು. ಅವನು ಸೌಲನೊಂದಿಗೆ ಅಲ್ಲಿಯೇ ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 31:5
5 ತಿಳಿವುಗಳ ಹೋಲಿಕೆ  

ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹೊರುವವನು ಕಂಡಾಗ, ಅವನೂ ತನ್ನ ಖಡ್ಗದ ಮೇಲೆ ಬಿದ್ದು, ಅವನ ಸಂಗಡ ಸತ್ತನು.


ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕನನ್ನು ಕರೆದು ಅವನಿಗೆ, “ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಖಡ್ಗದಿಂದ ಇರಿದು, ನನ್ನನ್ನು ಕೊಲ್ಲು,” ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು. ಅವನು ಮರಣಹೊಂದಿದನು.


ಆದಕಾರಣ ಅವನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ ನೀನು ನಿನ್ನ ಖಡ್ಗವನ್ನು ಹಿರಿದು, ನನ್ನನ್ನು ತಿವಿ,” ಎಂದನು. ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.


ಹೀಗೆ ಸೌಲನೂ, ಅವನ ಮೂರು ಮಂದಿ ಪುತ್ರರೂ, ಅವನ ಆಯುಧ ಹೊರುವವನೂ, ಅವನ ಸಮಸ್ತ ಜನರೂ ಅದೇ ದಿನ ಸತ್ತರು.


ಪಟ್ಟಣವು ವಶವಾದದ್ದನ್ನು ಕಂಡಾಗ, ಜಿಮ್ರಿಯು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ, ತನ್ನ ಅರಮನೆಯನ್ನು ಬೆಂಕಿಯಿಂದ ಸುಟ್ಟು ತಾನೂ ಸತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು