Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 31:7 - ಕನ್ನಡ ಸಮಕಾಲಿಕ ಅನುವಾದ

7 ಇಸ್ರಾಯೇಲರ ಸೈನಿಕರು ಸೋತು ಹೋದರೆಂದೂ, ಸೌಲನೂ, ಅವನ ಪುತ್ರರೂ ಸತ್ತರೆಂದೂ, ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕಂಡಾಗ, ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲರ ಭಟರು ಸೋತುಹೋದರು. ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲ್ ಯೋಧರು ಸೋತರು; ಸೌಲನೂ ಅವನ ಮಕ್ಕಳೂ ಸತ್ತರು ಎಂಬ ಸಮಾಚಾರವನ್ನು ಕಣಿವೆಯ ಆಚೆಯಲ್ಲೂ ಜೋರ್ಡನಿನ ಆಚೆಯಲ್ಲೂ ವಾಸವಾಗಿದ್ದ ಇಸ್ರಯೇಲರು ಕೇಳಿ ತಮ್ಮ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ ಭಟರು ಸೋತರು, ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲ್ಯರು ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು; ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲರ ಸೈನ್ಯವು ಓಡಿಹೋಗುತ್ತಿರುವುದನ್ನು ಕಣಿವೆಯ ಮತ್ತೊಂದು ಪಕ್ಕದಲ್ಲಿ ವಾಸಮಾಡುತ್ತಿದ್ದ ಇಸ್ರೇಲರು ನೋಡಿದರು. ಸೌಲನು ಮತ್ತು ಅವನ ಮಕ್ಕಳು ಸತ್ತದ್ದನ್ನೂ ಅವರು ನೋಡಿದರು. ಆದ್ದರಿಂದ ಆ ಇಸ್ರೇಲರು ತಮ್ಮ ನಗರಗಳನ್ನು ಬಿಟ್ಟು ಓಡಿಹೋದರು. ನಂತರ ಫಿಲಿಷ್ಟಿಯರು ಬಂದು ಆ ನಗರಗಳನ್ನು ವಶಪಡಿಸಿಕೊಂಡು ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 31:7
8 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದದ್ದರಿಂದ ತಾವು ಇಕ್ಕಟ್ಟಿನಲ್ಲಿ ಇರುವುದನ್ನು ಕಂಡು, ಗವಿಗಳಲ್ಲಿಯೂ, ಮುಳ್ಳಿನ ಪೊದೆಗಳಲ್ಲಿಯೂ, ಗುಡ್ಡಗಳಲ್ಲಿಯೂ, ಕುಣಿಗಳಲ್ಲಿಯೂ ಬಾವಿಗಳಲ್ಲಿಯೂ ಅಡಗಿಕೊಂಡರು.


ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದ್ದರಿಂದ ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಬಂಡೆಯ ಬಿರುಕುಗಳನ್ನೂ, ಗವಿಗಳನ್ನೂ, ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.


ನಿಮ್ಮ ಭೂಮಿಯ ಫಲವನ್ನೂ, ನಿಮ್ಮ ಎಲ್ಲಾ ಆದಾಯವನ್ನೂ ನಿಮ್ಮನ್ನರಿಯದ ಜನರು ತಿಂದುಬಿಡುವರು. ನೀವು ಯಾವಾಗಲೂ ಬಲಾತ್ಕಾರವನ್ನೂ, ಸಂಕಟವನ್ನೂ ಅನುಭವಿಸುವಿರಿ.


“ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.


ನಾನು ದೇಶವನ್ನು ಹಾಳುಮಾಡುವೆನು. ಅದರಲ್ಲಿ ವಾಸವಾಗುವ ನಿಮ್ಮ ಶತ್ರುಗಳೂ ಅದಕ್ಕೆ ಆಶ್ಚರ್ಯಪಡುವರು.


ಹೀಗೆ ಸೌಲನೂ, ಅವನ ಮೂರು ಮಂದಿ ಪುತ್ರರೂ, ಅವನ ಆಯುಧ ಹೊರುವವನೂ, ಅವನ ಸಮಸ್ತ ಜನರೂ ಅದೇ ದಿನ ಸತ್ತರು.


ಮಾರನೆಯ ದಿವಸದಲ್ಲಿ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳಲು ಬಂದಾಗ, ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವ ಸೌಲನನ್ನೂ, ಅವನ ಮೂವರು ಪುತ್ರರನ್ನೂ ಕಂಡರು.


ಇದಲ್ಲದೆ ಹಿಬ್ರಿಯರಲ್ಲಿ ಕೆಲವರು ಯೊರ್ದನನ್ನು ದಾಟಿ, ಗಾದ್ ದೇಶಕ್ಕೂ, ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು. ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು