1 ಸಮುಯೇಲ 4:18 - ಕನ್ನಡ ಸಮಕಾಲಿಕ ಅನುವಾದ18 ವೃದ್ಧನೂ ಸ್ಥೂಲಕಾಯನೂ ಆದ ಏಲಿಯು ದೇವರ ಮಂಜೂಷದ ಮಾತನ್ನು ಕೇಳಿದಾಗ, ಆಸನದ ಮೇಲಿಂದ ಬಾಗಿಲಿನ ಕಡೆಗೆ ಹಿಂದಕ್ಕೆ ಬಿದ್ದು, ಕುತ್ತಿಗೆ ಮುರಿದು ಮರಣಹೊಂದಿದನು. ಅವನು ನಾಲ್ವತ್ತು ವರುಷ ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮುದುಕನೂ, ಸ್ಥೂಲಕಾಯನೂ ಆದ ಏಲಿಯು ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದೊಡನೆಯೇ ಪೀಠದಿಂದ ಹಿಂದಕ್ಕೆ ಬಾಗಿಲಿನ ಕಡೆಗೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಅವನು ಇಸ್ರಾಯೇಲರನ್ನು ನಲ್ವತು ವರ್ಷ ಪಾಲಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮುದುಕನೂ ಸ್ಥೂಲಕಾಯನೂ ಆದ ಏಲಿ ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದ್ದೇ, ಪೀಠದಿಂದ ಹಿಂದಕ್ಕೆ, ಬಾಗಿಲಿನ ಕಡೆಗೆ ಬಿದ್ದು, ಕುತ್ತಿಗೆ ಮುರಿದು ಸತ್ತನು. ಏಲಿ ಇಸ್ರಯೇಲರನ್ನು ನಾಲ್ವತ್ತು ವರ್ಷ ಪಾಲಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮುದುಕನೂ ಸ್ಥೂಲಕಾಯನೂ ಆದ ಏಲಿಯು ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದೊಡನೆ ಪೀಠದಿಂದ ಹಿಂದಕ್ಕೆ ಬಾಗಲಿನ ಕಡೆಗೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಅವನು ಇಸ್ರಾಯೇಲ್ಯರನ್ನು ನಾಲ್ವತ್ತು ವರುಷ ಪಾಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೋವನ ಪವಿತ್ರ ಪೆಟ್ಟಿಗೆಯ ವಿಚಾರವನ್ನು ಬೆನ್ಯಾಮೀನ್ಯನು ತಿಳಿಸಿದಾಗ, ಏಲಿಯು ಕುರ್ಚಿಯಿಂದ ಹಿಂದಕ್ಕೆ ಬಾಗಿಲಿನ ಸಮೀಪದಲ್ಲಿ ಬಿದ್ದನು; ಅವನ ಕುತ್ತಿಗೆಯು ಮುರಿದು ಬಿತ್ತು. ಏಲಿಯು ಮುದುಕನೂ ಬೊಜ್ಜುಳ್ಳವನೂ ಆಗಿದ್ದುದರಿಂದ ಸತ್ತನು. ಅವನು ಇಸ್ರೇಲರನ್ನು ನಲವತ್ತು ವರ್ಷ ನಡೆಸಿದನು. ಅಧ್ಯಾಯವನ್ನು ನೋಡಿ |