Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:22 - ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ಅವಳು, “ದೇವರ ಮಂಜೂಷವು ಶತ್ರು ವಶವಾಗಿ ಹೋದದ್ದರಿಂದ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ದೇವರ ಮಂಜೂಷವು ಶತ್ರುವಶವಾದ್ದರಿಂದಲೇ ಇಸ್ರಾಯೇಲರ ಮಹಿಮೆಯು ಹೊರಟುಹೋಯಿತೆಂದು” ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೇವರ ಮಂಜೂಷ ಶತ್ರುವಶವಾದ್ದರಿಂದಲೇ ಇಸ್ರಯೇಲರ ಮಹಿಮೆ ಮಾಯವಾಯಿತೆಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೇವರ ಮಂಜೂಷವು ಶತ್ರುವಶವಾದದರಿಂದಲೇ ಇಸ್ರಾಯೇಲ್ಯರ ಮಹಿಮೆಯು ಹೋಯಿತೆಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಫಿಲಿಷ್ಟಿಯರು ತೆಗೆದುಕೊಂಡು ಹೋದದ್ದರಿಂದ ಆಕೆಯು, “ಇಸ್ರೇಲರ ವೈಭವ ಇಲ್ಲವಾಯಿತು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:22
8 ತಿಳಿವುಗಳ ಹೋಲಿಕೆ  

ಯೇಸುವಿನ ಶಿಷ್ಯರು, “ನಿನ್ನ ಆಲಯದ ಮೇಲಿನ ಆಸಕ್ತಿಯು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,” ಎಂದು ಪವಿತ್ರ ವೇದದಲ್ಲಿ ಬರೆದಿರುವುದನ್ನು ಜ್ಞಾಪಕಮಾಡಿಕೊಂಡರು.


ಆದರೆ ಅವಳು ಅದಕ್ಕೆ ಉತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರು ವಶವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಮರಣಹೊಂದಿದರಿಂದಲೂ ದೇವರ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು ಎಂದು ಹೇಳಿ, ಆ ಕೂಸಿಗೆ, “ಈಕಾಬೋದ್,” ಎಂದು ಹೆಸರಿಟ್ಟಳು.


ಫಿಲಿಷ್ಟಿಯರು ದೇವರ ಮಂಜೂಷವನ್ನು ತೆಗೆದುಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.


“ ‘ಇದಲ್ಲದೆ ನಿನಗೆ ಗುರುತಾಗಿ ಹೊಫ್ನಿಯು, ಫೀನೆಹಾಸನು ಎಂಬ ಇಬ್ಬರು ಮಕ್ಕಳು ಒಂದೇ ದಿವಸದಲ್ಲಿ ಸಾಯುವರು.


ಏಕೆಂದರೆ ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ. ನಾನು ಆರಂಭಿಸಿದ ಹಾಗೆ ಅಂತ್ಯವನ್ನು ಮಾಡುವೆನು.


ಅವರ ಯಾಜಕರು ಖಡ್ಗದಿಂದ ಸಂಹಾರವಾದರು. ಅವರ ವಿಧವೆಯರು ಗೋಳಾಡಲಿಲ್ಲ.


ಕರ್ತದೇವರು ಹೇಗೆ ತಮ್ಮ ಕೋಪದ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದರು. ತನ್ನ ಕೋಪದ ದಿನದಲ್ಲಿ, ತನ್ನ ಪಾದಪೀಠವನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು