Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:3 - ಕನ್ನಡ ಸಮಕಾಲಿಕ ಅನುವಾದ

3 ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು, “ಈ ಹೊತ್ತು ಯೆಹೋವ ದೇವರು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿದ್ದೇನು? ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ, ನಾವು ಅದನ್ನು ಶೀಲೋವಿನಿಂದ ತರಿಸೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ, “ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ತಪ್ಪಿಸಲಿ” ಎಂದು ಆಲೋಚನೆ ಹೇಳಿದ್ದರಿಂದ ಅವರು ಜನರನ್ನು ಕಳುಹಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರೊಡನೆ ಅವರ ಹಿರಿಯರು, “ಸರ್ವೇಶ್ವರ ಈ ದಿನ ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶಿಲೋವಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತರೋಣ; ಅವರು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ರಕ್ಷಿಸಲಿ,” ಎಂದು ಸಮಾಲೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ - ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಗೆ ನಮ್ಮನ್ನು ತಪ್ಪಿಸಲಿ ಎಂದು ಆಲೋಚನೆ ಹೇಳಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲರ ಸೈನಿಕರು ಪಾಳೆಯಕ್ಕೆ ಹಿಂದಿರುಗಿದರು. ಇಸ್ರೇಲರ ಹಿರಿಯರು, “ಫಿಲಿಷ್ಟಿಯರು ನಮ್ಮನ್ನು ಸೋಲಿಸಲು ಯೆಹೋವನು ಅವಕಾಶ ನೀಡಿದ್ದೇಕೆ? ಶೀಲೋವಿನಿಂದ ಯೆಹೋವನ ಪವಿತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ತರಿಸೋಣ. ಈ ರೀತಿ ದೇವರು ನಮ್ಮೊಂದಿಗೆ ಯುದ್ಧರಂಗಕ್ಕೆ ಬರಲಿ. ಆತನು ನಮ್ಮನ್ನು ಶತ್ರುಗಳಿಂದ ರಕ್ಷಿಸುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:3
34 ತಿಳಿವುಗಳ ಹೋಲಿಕೆ  

ಇದನ್ನು ನೀವು ಈಗಾಗಲೇ ಒಂದು ಸಾರಿ ತಿಳಿದವರಾಗಿದ್ದೀರಿ. ಆದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವುದೆಂದರೆ: ಕರ್ತದೇವರು ತಮ್ಮ ಪ್ರಜೆಯನ್ನು ಈಜಿಪ್ಟ್ ದೇಶದೊಳಗಿಂದ ರಕ್ಷಿಸಿದರೂ ತರುವಾಯ ಅವರೊಳಗೆ ನಂಬದೆ ಹೋದವರನ್ನು ಸಂಹಾರ ಮಾಡಿದರು.


ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.


ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.


ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು. ಇಂಥವರನ್ನು ಬಿಟ್ಟು ಪ್ರತ್ಯೇಕವಾಗಿರು.


“ಇವುಗಳೇ ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ,” ಎಂದು ಹೇಳುವ ಮೋಸಕರ ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.


ನೀವು ದೇಶದಲ್ಲಿ ಅಭಿವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷವು,’ ಎಂದು ಇನ್ನು ಮೇಲೆ ಅವರು ಹೇಳದಿರುವರು. ಅದು ಮನಸ್ಸಿಗೆ ಬರುವುದಿಲ್ಲ, ಯಾರು ಅದನ್ನು ಸ್ಮರಿಸುವುದಿಲ್ಲ, ಅದರ ಬಗ್ಗೆ ವಿಚಾರಿಸುವುದೂ ಇಲ್ಲ; ಇನ್ನು ಮೇಲೆ ಸರಿಯಾಗುವುದಿಲ್ಲ ಎಂದು ಯೆಹೋವ ದೇವರು ನುಡಿಯುತ್ತಾರೆ.


‘ನಾವು ಉಪವಾಸ ಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸಲಿಲ್ಲ?’ ‘ನಮ್ಮ ಪ್ರಾಣವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ?’ ಎಂದು ಅವರು ಅಂದುಕೊಳ್ಳುತ್ತಾರೆ. “ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ಇಷ್ಟದ ಕೆಲಸವನ್ನು ನಡೆಸಿ ಮತ್ತು ನಿಮ್ಮ ಕೆಲಸದವರನ್ನು ದುಡಿತಕ್ಕೆ ಎಳೆಯುತ್ತೀರಿ.


ಯೆಹೋವ ದೇವರು ಹೇಳುವುದೇನೆಂದರೆ, “ನಾನು ಬಿಟ್ಟುಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೆನು? ನಿಮ್ಮ ಪಾಪಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ. ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.


ಏಕೆ ನಿಮ್ಮ ಕೈಯನ್ನು, ನಿಮ್ಮ ಬಲಗೈಯನ್ನು ಸಹ ಹಿಂದೆಳೆಯುತ್ತೀರಿ? ನಿಮ್ಮ ಎದೆಯೊಳಗಿಂದ ಅದನ್ನು ಹೊರಗೆ ತೆಗೆದು ಅವರನ್ನು ದಂಡಿಸಿರಿ.


ದೇವರೇ, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಟ್ಟದ್ದೇಕೆ? ನಿಮ್ಮ ಮೇವಿನ ಕುರಿಮಂದೆಯ ವಿಷಯವಾಗಿ ಬೇಸರಗೊಳ್ಳುವುದು ಏಕೆ?


ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ, ಒಂದು ದಿನ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.


ಆಗ ಅರಸನು ಚಾದೋಕನಿಗೆ, “ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರುಗಿ ತೆಗೆದುಕೊಂಡು ಹೋಗು. ಯೆಹೋವ ದೇವರ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ, ಅವರು ತಿರುಗಿ ನನ್ನನ್ನು ಬರಮಾಡಿ ಅದನ್ನೂ, ಅದರ ವಾಸಸ್ಥಳವನ್ನೂ ನನಗೆ ತೋರಿಸುವರು.


ಆಗ ಸೌಲನು ಅಹೀಯನಿಗೆ, “ನೀನು ದೇವರ ಮಂಜೂಷವನ್ನು ತೆಗೆದುಕೊಂಡು ಬಾ,” ಎಂದನು. ಏಕೆಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲರ ಬಳಿಯಲ್ಲಿತ್ತು.


ಇದಲ್ಲದೆ ಯೆಹೋಶುವನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ನಮ್ಮನ್ನು ಅಮೋರಿಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕಾಗಿ ನೀವು ಈ ಜನರನ್ನು ಯೊರ್ದನ್ ನದಿ ದಾಟಿಸಿದ್ದು ಏಕೆ? ನಾವು ಯೊರ್ದನ್ ನದಿ ಆಚೆಯಲ್ಲಿ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.


ನೀವು ಅವರಿಗೆ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯೊರ್ದನ್ ನದಿಯ ನೀರು ವಿಭಾಗವಾಯಿತು. ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿಯನ್ನು ದಾಟುವಾಗ, ಯೊರ್ದನ್ ನದಿಯ ನೀರು ನಿಂತುಹೋಯಿತು. ಈ ಕಲ್ಲುಗಳು ಇಸ್ರಾಯೇಲರಿಗೆ ಎಂದೆಂದಿಗೂ ಜ್ಞಾಪಕಾರ್ಥವಾದ ಗುರುತು,’ ಎಂದು ಉತ್ತರಕೊಡಬೇಕು,” ಎಂದನು.


“ದೇವರ ನಿಯಮದ ಈ ಗ್ರಂಥವನ್ನು ತೆಗೆದುಕೊಂಡು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿ ಇಡಿರಿ. ಅದು ನಿಮಗೆ ವಿರೋಧವಾದ ಸಾಕ್ಷಿಯಾಗಿ ಅಲ್ಲಿ ಇರಲಿ.


ಆಗ ಎಲ್ಲಾ ದೇಶದವರೂ, “ಯೆಹೋವ ದೇವರು ಈ ದೇಶಕ್ಕೆ ಏಕೆ ಹೀಗೆ ಮಾಡಿದ್ದಾರೆ? ಈ ದೊಡ್ಡ ಕೋಪಾಗ್ನಿಗೆ ಕಾರಣವೇನು?” ಎಂದು ಕೇಳುವರು.


ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿರುವ ಅವರನ್ನೂ ಯಾಜಕನಾದ ಎಲಿಯಾಜರನ ಮಗ ಫೀನೆಹಾಸನನ್ನೂ ಪರಿಶುದ್ಧ ಸಲಕರಣೆಗಳ ಸಂಗಡವೂ ಸೂಚಿಸುವದಕ್ಕೋಸ್ಕರ ತುತೂರಿಗಳ ಸಂಗಡವೂ ಯುದ್ಧಕ್ಕೆ ಕಳುಹಿಸಿದನು.


ಇದಲ್ಲದೆ ಮಂಜೂಷವು ಹೊರಡುವಾಗ ಮೋಶೆಯು ಹೀಗೆ ಹೇಳುತ್ತಿದ್ದನು, “ಯೆಹೋವ ದೇವರೇ, ಎದ್ದೇಳಿರಿ, ನಿಮ್ಮ ಶತ್ರುಗಳು ಚದರಿಹೋಗಲಿ. ನಿಮ್ಮನ್ನು ಹಗೆ ಮಾಡುವವರು ನಿಮ್ಮ ಎದುರಿನಿಂದ ಓಡಿಹೋಗಲಿ.”


ಅವರು ಯೆಹೋವ ದೇವರ ಪರ್ವತದ ಬಳಿಯಿಂದ ಮೂರು ದಿವಸಗಳವರೆಗೆ ಪ್ರಯಾಣಮಾಡಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರಿಗೆ ಇಳಿದುಕೊಳ್ಳುವ ಸ್ಥಳವನ್ನು ಹುಡುಕುವುದಕ್ಕೆ ಅವರ ಮೂರು ದಿವಸಗಳ ಪ್ರಯಾಣದಲ್ಲಿ ಅವರ ಮುಂದಾಗಿ ಹೋಯಿತು.


ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ. ಏಳುಮಂದಿ ಯಾಜಕರು ಏಳು ಟಗರು ಕೊಂಬುಗಳ ತುತೂರಿಗಳೊಂದಿಗೆ ಯೆಹೋವ ದೇವರ ಮಂಜೂಷದ ಮುಂದೆ ಹೋಗಲಿ,” ಎಂದನು.


ಯೆಹೋವ ದೇವರೇ, ಈಗ ಇಸ್ರಾಯೇಲರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದರಲ್ಲಾ. ನಾನು ಏನು ಹೇಳಲಿ.


ಅವನು ಎದೆಹಾಲು ಕುಡಿಯುವುದನ್ನು ಬಿಟ್ಟ ತರುವಾಯ, ಅವನನ್ನು ತನ್ನ ಸಂಗಡ ತೆಗೆದುಕೊಂಡು, ಮೂರು ವರ್ಷದ ಹೋರಿಯೊಂದನ್ನೂ, ಸುಮಾರು ಹದಿನಾರು ಕಿಲೋಗ್ರಾಂ ಹಿಟ್ಟನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಯೆಹೋವ ದೇವರ ಮನೆಗೆ ಹೋದಳು.


ಫಿಲಿಷ್ಟಿಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧಮಾಡಿದಾಗ, ಇಸ್ರಾಯೇಲರು ಫಿಲಿಷ್ಟಿಯರ ಮುಂದೆ ಸೋತರು. ಫಿಲಿಷ್ಟಿಯರು ಯುದ್ಧ ರಂಗದಲ್ಲಿ ಹೆಚ್ಚು ಕಡಿಮೆ ನಾಲ್ಕು ಸಾವಿರ ಜನರನ್ನು ಹತಮಾಡಿದರು.


ಯೆಹೋವ ದೇವರ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳಲಾರದ ಹಾಗೆ ಮಂದವಾಗಿಲ್ಲ.


ನಿಮ್ಮ ಅಕ್ರಮಗಳೇ, ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿವೆ. ನಿಮ್ಮ ಪಾಪಗಳೇ, ಆತನು ಹೇಳಿದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಸಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು