Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:4 - ಕನ್ನಡ ಸಮಕಾಲಿಕ ಅನುವಾದ

4 ಕೆರೂಬಿಗಳ ಮಧ್ಯದಲ್ಲಿರುವ ಸೇನಾಧೀಶ್ವರ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬರಲು ಶೀಲೋವಿಗೆ ಜನರನ್ನು ಕಳುಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂತೆಯೇ ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನರಾಗಿರುವ ಸೇನಾಧೀಶ್ವರನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೈನ್ಯಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಕಾರಣಕ್ಕಾಗಿ ಶೀಲೋವಿಗೆ ಜನರನ್ನು ಕಳುಹಿಸಿದರು. ಸರ್ವಶಕ್ತನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ತಂದರು. ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಅವುಗಳು ಯೆಹೋವನು ಕುಳಿತುಕೊಳ್ಳುವ ಸಿಂಹಾಸನದಂತಿದ್ದವು; ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಪೆಟ್ಟಿಗೆಯ ಜೊತೆಯಲ್ಲಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:4
18 ತಿಳಿವುಗಳ ಹೋಲಿಕೆ  

ಆ ಕೆರೂಬಿಗಳ ನಡುವೆ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರ ಹೆಸರಿನಿಂದ ಕರೆಯಲಾದ ದೇವರ ಮಂಜೂಷವನ್ನು ತೆಗೆದುಕೊಂಡು ಬರಲು ತನ್ನ ಸಂಗಡ ಇದ್ದ ಸಮಸ್ತ ಜನರನ್ನು ಕರೆದುಕೊಂಡು, ಯೆಹೂದದ ಬಾಲಾ ಎಂಬಲ್ಲಿಗೆ ಹೊರಟನು.


ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ.


ಮೋಶೆಯು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಾಗ, ಅವನು ಒಡಂಬಡಿಕೆಯ ಮಂಜೂಷದ ಮೇಲೆ ಇರುವ ಕರುಣಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವ ಧ್ವನಿಯನ್ನು ಮೋಶೆಯು ಕೇಳಿದನು. ಹೀಗೆ ದೇವರು ಅವನ ಸಂಗಡ ಮಾತನಾಡಿದರು.


ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ.


ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.


“ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ. ನಿಮ್ಮ ಕೈಗಳಿಂದ ಅಂಥ ಅರ್ಪಣೆಯನ್ನು ಅವರು ಸ್ವೀಕರಿಸುವರೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಏಲಿಯು ಬಹಳ ವೃದ್ಧನಾಗಿದ್ದನು. ಅವನು ತನ್ನ ಪುತ್ರರು ಇಸ್ರಾಯೇಲ್ ಜನರಿಗೆ ಮಾಡುವುದೆಲ್ಲವನ್ನೂ, ಅವರು ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬುದನ್ನೂ ಕೇಳಿ ಅವರಿಗೆ,


“ಆರೋನನು ಮತ್ತು ಅವನ ಪುತ್ರರು ಪರಿಶುದ್ಧ ಸ್ಥಳವನ್ನೂ, ಪರಿಶುದ್ಧಸ್ಥಳದ ಎಲ್ಲಾ ಸಲಕರಣೆಗಳನ್ನೂ ಮುಚ್ಚಿದ ಮೇಲೆ, ಪಾಳೆಯವು ಹೊರಡುವಾಗ ಕೊಹಾತ್ಯರು ಅದನ್ನು ಹೊತ್ತುಕೊಂಡು ಹೋಗುವುದಕ್ಕೆ ಪ್ರವೇಶಿಸಬೇಕು. ಆದರೆ ಅವರು ಸಾಯದೆ ಇರಬೇಕಾದರೋ, ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ದೇವದರ್ಶನದ ಗುಡಾರದಲ್ಲಿ ಕೊಹಾತ್ಯನ ಪುತ್ರರ ಹೊರೆಗಳು ಇವೇ ಆಗಿವೆ.


ಜನರು ಹೊರಡುವಾಗ, ಆರೋನನೂ, ಅವನ ಮಕ್ಕಳೂ ಒಳಗೆ ಹೋಗಿ ಪರದೆಯನ್ನು ಇಳಿಸಿ, ಅದರಿಂದ ಒಡಂಬಡಿಕೆಯ ಮಂಜೂಷವನ್ನು ಮುಚ್ಚಿ,


ಅವನು ಎದೆಹಾಲು ಕುಡಿಯುವುದನ್ನು ಬಿಟ್ಟ ತರುವಾಯ, ಅವನನ್ನು ತನ್ನ ಸಂಗಡ ತೆಗೆದುಕೊಂಡು, ಮೂರು ವರ್ಷದ ಹೋರಿಯೊಂದನ್ನೂ, ಸುಮಾರು ಹದಿನಾರು ಕಿಲೋಗ್ರಾಂ ಹಿಟ್ಟನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಯೆಹೋವ ದೇವರ ಮನೆಗೆ ಹೋದಳು.


ಚಾದೋಕನೂ, ಅವನ ಸಂಗಡ ಇರುವ ಸಮಸ್ತ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಅಬಿಯಾತರನು, ಜನರೆಲ್ಲರು ಪಟ್ಟಣದಿಂದ ದಾಟಿಹೋಗುವವರೆಗೆ ಯಜ್ಞ ಸಮರ್ಪಿಸುತ್ತಾ ಮುಂದೆ ನಡೆಯುತ್ತಿದ್ದನು.


“ಸೇನಾಧೀಶ್ವರ ಯೆಹೋವ ದೇವರೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.


ಆಗ ಏಲಿಯ ಮಗ ಫೀನೆಹಾಸನ ಮಗ ಈಕಾಬೋದನ ಸಹೋದರ ಅಹೀಟೂಬನ ಮಗ ಅಹೀಯನು ಶೀಲೋವಿನಲ್ಲಿ ಏಫೋದನ್ನು ಧರಿಸಿಕೊಂಡು ಯೆಹೋವ ದೇವರ ಯಾಜಕನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು.


ಎಫ್ರಾಯೀಮ್, ಬೆನ್ಯಾಮೀನ್, ಮನಸ್ಸೆಯರ ಮುಂದೆ ನಿಮ್ಮ ಪರಾಕ್ರಮವನ್ನು ತೋರಿಸಲು ಬಂದು ನಮ್ಮನ್ನು ರಕ್ಷಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು