Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:6 - ಕನ್ನಡ ಸಮಕಾಲಿಕ ಅನುವಾದ

6 ಅವರ ಆರ್ಭಟವು ಫಿಲಿಷ್ಟಿಯರಿಗೆ ಕೇಳಿದಾಗ, “ಹಿಬ್ರಿಯರ ಪಾಳೆಯದ ಈ ಮಹಾ ಆರ್ಭಟವೇನು?” ಎಂದು ವಿಚಾರಿಸಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಫಿಲಿಷ್ಟಿಯರು ಇದನ್ನು ಕೇಳಿ, “ಇಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೇನು ಕಾರಣ” ಎಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಫಿಲಿಷ್ಟಿಯರು ಇದನ್ನು ಕೇಳಿ, “ಹಿಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೆ ಏನು ಕಾರಣ?” ಎಂದು ವಿಚಾರಿಸಿದರು. ಸರ್ವೇಶ್ವರನ ಮಂಜೂಷವು ಪಾಳೆಯಕ್ಕೆ ಬಂದದ್ದೇ ಕಾರಣವೆಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಫಿಲಿಷ್ಟಿಯರು ಇದನ್ನು ಕೇಳಿ - ಇಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೇನು ಕಾರಣವೆಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇಸ್ರೇಲರ ಆರ್ಭಟವು ಫಿಲಿಷ್ಟಿಯರಿಗೆ ಕೇಳಿಸಿತು. “ಇಬ್ರಿಯರ ಪಾಳೆಯದಲ್ಲಿ ಆಗುತ್ತಿರುವ ಆರ್ಭಟಕ್ಕೆ ಕಾರಣವೇನು?” ಎಂದು ಅವರು ಕೇಳಿದರು. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಇಸ್ರೇಲರ ಪಾಳೆಯಕ್ಕೆ ತಂದಿರುವುದೇ ಅವರ ಆರ್ಭಟಕ್ಕೆ ಕಾರಣವೆಂದು ಫಿಲಿಷ್ಟಿಯರಿಗೆ ತಿಳಿದು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:6
4 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ, ಇಸ್ರಾಯೇಲರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.


“ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು, ಫಿಲಿಷ್ಟಿಯರು ಭಯಪಟ್ಟು, ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.


ಆಗ ಫಿಲಿಷ್ಟಿಯರ ಅಧಿಪತಿಗಳು, “ಈ ಹಿಬ್ರಿಯರು ಏಕೆ?” ಎಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ, “ಇಸ್ರಾಯೇಲಿನ ಅರಸನಾದ ಸೌಲನ ದಾಸನಾದ ಈ ದಾವೀದನು ಇಷ್ಟು ದಿವಸಗಳೂ, ಇಷ್ಟು ವರ್ಷಗಳೂ ನನ್ನ ಸಂಗಡ ಇದ್ದಾನೆ? ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಅವನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು