Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 5:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಆ ಇಡೀ ಪಟ್ಟಣಕ್ಕೆ ಮರಣಾಂತಿಕ ವಿನಾಶ ಉಂಟಾಗಿ, ದೇವರ ಕೈ ಅಲ್ಲಿ ಮಹಾಬಾಧಕವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟುಗೂಡಿಸಿ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ, ನಮ್ಮ ಜನರನ್ನೂ ಕೊಂದು ಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರುಗಿ ಹೋಗುವಂತೆ ಕಳುಹಿಸಿಬಿಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರ ಹಸ್ತವು ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ, “ಇಸ್ರಾಯೇಲಿನ ದೇವರ ಮಂಜೂಷವನ್ನು ಹಾಗೆಯೇ ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವರ ಹಸ್ತ ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ರಾಜರೆಲ್ಲರನ್ನು ಕೂಡಿಸಿ, “ಇಸ್ರಯೇಲ್ ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವರ ಹಸ್ತವು ಅವರಿಗೂ ಬಾಧಕವಾಗಿದ್ದದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ - ಇಸ್ರಾಯೇಲ್‍ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಕ್ರೋನಿನ ಜನರು ಫಿಲಿಷ್ಟಿಯರ ಅಧಿಪತಿಗಳನ್ನೆಲ್ಲಾ ಒಟ್ಟಿಗೆ ಸೇರಿಸಿ, “ಇಸ್ರೇಲರ ದೇವರ ಪವಿತ್ರಪೆಟ್ಟಿಗೆಯು ನಮ್ಮನ್ನೂ ನಮ್ಮ ಜನರನ್ನೂ ಕೊಲ್ಲುವುದಕ್ಕೆ ಮೊದಲೇ ಅದನ್ನು ಅದರ ಸ್ವಸ್ಥಳಕ್ಕೆ ಕಳುಹಿಸಿ” ಎಂದು ಹೇಳಿದರು. ಎಕ್ರೋನಿನ ಜನರು ಬಹಳ ಹೆದರಿಕೊಂಡಿದ್ದರು. ದೇವರು ಅಲ್ಲಿಯ ಜನರ ಜೀವನವನ್ನು ಬಹು ಕಠಿಣಗೊಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 5:11
7 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಕೈ ಅಷ್ಡೋದಿನವರ ಮೇಲೆ ಮಹಾ ಭಾರವಾಗಿತ್ತು. ಅವರನ್ನು ನಾಶಮಾಡಿ, ಅಷ್ಡೋದನ್ನೂ, ಅದರ ಮೇರೆಗಳನ್ನೂ ಗಡ್ಡೆರೋಗದಿಂದಲೂ ಬಾಧಿಸಿದರು.


ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ, ಎಕ್ರೋನ್ಯರು, “ನಮ್ಮನ್ನೂ, ನಮ್ಮ ಜನರನ್ನೂ ಕೊಂದುಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರು,” ಎಂದು ಕೂಗಿ ಹೇಳಿದರು.


ಏಕೆಂದರೆ ನಿಮ್ಮೆಲ್ಲರ ನಾಶಕ್ಕೆ ಕಾರಣವಾದ ಈ ಗಡ್ಡೆಗಳ ಹಾಗು ಇಲಿಗಳ ಸ್ವರೂಪಗಳನ್ನು ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಅವರು ನಿಮ್ಮ ಮೇಲೆಯೂ, ನಿಮ್ಮ ದೇವರುಗಳ ಮೇಲೆಯೂ, ನಿಮ್ಮ ಭೂಮಿಯ ಮೇಲೆಯೂ ಇರುವ ತಮ್ಮ ಕೈಯನ್ನು ತೆಗೆದು ಹಗುರಮಾಡುವರು.


ಫರೋಹನ ಅಧಿಕಾರಿಗಳು ಅವನಿಗೆ, “ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡುವಂತೆ ಅವರನ್ನು ಕಳುಹಿಸಿಬಿಡು. ಈಜಿಪ್ಟ್ ನಾಶವಾಯಿತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು