Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 5:7 - ಕನ್ನಡ ಸಮಕಾಲಿಕ ಅನುವಾದ

7 ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ಕಂಡಾಗ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು. ಏಕೆಂದರೆ ಅವರ ಕೈ ನಮ್ಮ ಮೇಲೆಯೂ, ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಷ್ಡೋದಿನ ಜನರು ಅದನ್ನು ನೋಡಿ, “ಇಸ್ರಾಯೇಲಿನ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಏಕೆಂದರೆ ಆತನ ಹಸ್ತವು ನಮಗೂ, ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇದನ್ನು ನೋಡಿ ಆ ಅಷ್ಡೋದಿನ ಜನರು, “ಇಸ್ರಯೇಲ್ ದೇವರ ಮಂಜೂಷ ನಮ್ಮಲ್ಲಿರಬಾರದು; ಆತನ ಹಸ್ತ ನಮಗೂ ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಷ್ಡೋದಿನ ಜನರು ಅದನ್ನು ನೋಡಿ - ಇಸ್ರಾಯೇಲ್‍ದೇವರ ಮಂಜೂಷವು ನಮ್ಮಲ್ಲಿರಬಾರದು; ಆತನ ಹಸ್ತವು ನಮಗೂ ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇದನ್ನೆಲ್ಲಾ ಕಂಡ ಅಷ್ಡೋದಿನ ಜನರು, “ಇಸ್ರೇಲರ ದೇವರ ಈ ಪವಿತ್ರ ಪೆಟ್ಟಿಗೆಯು ಇಲ್ಲಿರಬಾರದು. ಇಸ್ರೇಲರ ದೇವರು ನಮ್ಮನ್ನೂ ನಮ್ಮ ದೇವರಾದ ದಾಗೋನನನ್ನೂ ಬಾಧಿಸುತ್ತಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 5:7
15 ತಿಳಿವುಗಳ ಹೋಲಿಕೆ  

ಇದಲ್ಲದೆ ಈಜಿಪ್ಟಿನವರು, “ನಾವೆಲ್ಲರೂ ಸಾಯುತ್ತೇವೆ,” ಎಂದು ಹೇಳಿ, ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿಬಿಡುವ ಹಾಗೆ ಜನರನ್ನು ಒತ್ತಾಯಮಾಡಿದರು.


ಏಕೆಂದರೆ ನಿನ್ನ ಕ್ರಿಯೆಗಳಲ್ಲಿಯೂ, ನಿನ್ನ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟಿದ್ದರಿಂದ, ನೀನು ಸಹ ಸೆರೆಯಾಗುವಿ ಮತ್ತು ಕೆಮೋಷನು, ಅವನ ಯಾಜಕರು, ಅವನ ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.


ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ತೆಬೆಸ್ ನಗರದಲ್ಲಿನ ಆಮೋನ್ ದೇವತೆಯನ್ನೂ, ಫರೋಹನನ್ನೂ, ಈಜಿಪ್ಟನ್ನೂ, ಅದರ ದೇವರುಗಳನ್ನೂ, ಅದರ ಅರಸರನ್ನೂ, ಅಂತೂ ಫರೋಹನನ್ನೂ, ಅವನಲ್ಲಿ ನಂಬಿಕೆ ಇಡುವ ಎಲ್ಲರನ್ನೂ ದಂಡಿಸುವೆನು.


ಏಕೆಂದರೆ ನೀವು ಮೊದಲು ಹಾಗೆ ಮಾಡದೆ ಇದ್ದುದರಿಂದ, ಕೋಪದಿಂದ ಯೆಹೋವ ದೇವರಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದರು. ಏಕೆಂದರೆ ನ್ಯಾಯದ ಪ್ರಕಾರ ನಾವು ಅವರನ್ನು ಹುಡುಕಲಿಲ್ಲ,” ಎಂದು ಹೇಳಿದನು.


ದಾವೀದನು ಆ ದಿನ ಯೆಹೋವ ದೇವರಿಗೆ ಭಯಪಟ್ಟು, “ಯೆಹೋವ ದೇವರ ಮಂಜೂಷವನ್ನು ನಾನಿರುವಲ್ಲಿಗೆ ಹೇಗೆ ತೆಗೆದುಕೊಂಡು ಹೋಗುವದು?” ಎಂದನು.


ಯೆಹೋವ ದೇವರು ತಮ್ಮಲ್ಲಿ ದೊಡ್ಡ ನಾಶನಮಾಡಿದ್ದರಿಂದ, ಬೇತ್ ಷೆಮೆಷ್ ಊರಿನವರು ದುಃಖಪಟ್ಟು, “ಈ ಪರಿಶುದ್ಧ ದೇವರಾದ ಯೆಹೋವ ದೇವರ ಮುಂದೆ ನಿಲ್ಲತಕ್ಕವನ್ಯಾರು? ಇಲ್ಲಿಂದ ಮಂಜೂಷವು ಎಲ್ಲಿಗೆ ಹೋಗುವುದು?” ಎಂದು ಹೇಳಿದರು.


ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವರ‍್ಯಾರು? ಈಜಿಪ್ಟಿನವರನ್ನು ಮರುಭೂಮಿಯಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.


ಫರೋಹನ ಅಧಿಕಾರಿಗಳು ಅವನಿಗೆ, “ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡುವಂತೆ ಅವರನ್ನು ಕಳುಹಿಸಿಬಿಡು. ಈಜಿಪ್ಟ್ ನಾಶವಾಯಿತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ?” ಎಂದರು.


ಆದ್ದರಿಂದ ಈ ಬಲವಾದ ಗುಡುಗುಗಳೂ ಆಲಿಕಲ್ಲಿನ ಮಳೆಯೂ ಇನ್ನು ಸಾಕು. ಇವುಗಳು ನಿಂತುಹೋಗುವಂತೆ ಯೆಹೋವ ದೇವರನ್ನು ಬೇಡಿಕೊಳ್ಳಿರಿ, ನೀವು ಇನ್ನು ಇಲ್ಲಿ ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು,” ಎಂದನು.


ಅದಕ್ಕೆ ಫರೋಹನು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರಿಗೆ ಮರುಭೂಮಿಯಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿಸುತ್ತೇನೆ. ಆದರೆ ದೂರ ಹೋಗಬೇಡಿರಿ, ನನಗೋಸ್ಕರ ಪ್ರಾರ್ಥನೆಮಾಡಿರಿ,” ಎಂದನು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವ ದೇವರನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವ ದೇವರಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು,” ಎಂದನು.


ಯೆಹೋವ ದೇವರ ಕೈ ಅಷ್ಡೋದಿನವರ ಮೇಲೆ ಮಹಾ ಭಾರವಾಗಿತ್ತು. ಅವರನ್ನು ನಾಶಮಾಡಿ, ಅಷ್ಡೋದನ್ನೂ, ಅದರ ಮೇರೆಗಳನ್ನೂ ಗಡ್ಡೆರೋಗದಿಂದಲೂ ಬಾಧಿಸಿದರು.


ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೆಯಕಳುಹಿಸಿ ಅವರಿಗೆ, “ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದರು. ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವು ಗತ್ ಊರಿಗೆ ಕಳುಹಿಸಬೇಕು,” ಎಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು