Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:10 - ಕನ್ನಡ ಸಮಕಾಲಿಕ ಅನುವಾದ

10 ಅವರು ಆ ಪ್ರಕಾರವೇ ಎರಡು ಹಾಲು ಕರೆಯುವ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಮನೆಯಲ್ಲಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದೇ ಪ್ರಕಾರ ಫಿಲಿಷ್ಟಿಯರು ಹಾಲುಕರೆಯುವ ಎರಡು ಹಸುಗಳನ್ನು ಹಿಡಿದುಕೊಂಡು ಬಂಡಿಗೆ ಹೂಡಿ ಅವುಗಳ ಕರುಗಳನ್ನು ಮನೆಯಲ್ಲಿ ಕಟ್ಟಿಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಫಿಲಿಷ್ಟಿಯರು ಅದೇ ಪ್ರಕಾರ ಮಾಡಿದರು; ಹಾಲುಕರೆಯುವ ಎರಡು ಹಸುಗಳನ್ನು ತೆಗೆದುಕೊಂಡು ಬಂಡಿಗೆ ಹೂಡಿದರು. ಅವುಗಳ ಕರುಗಳನ್ನು ಮನೆಯಲ್ಲೇ ಕಟ್ಟಿಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದೇ ಪ್ರಕಾರ ಫಿಲಿಷ್ಟಿಯರು ಹಾಲು ಕರೆಯುವ ಎರಡು ಹಸುಗಳನ್ನು ತೆಗೆದುಕೊಂಡು ಬಂಡಿಗೆ ಹೂಡಿ ಅವುಗಳ ಕರುಗಳನ್ನು ಮನೆಯಲ್ಲಿ ಕಟ್ಟಿಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅರ್ಚಕರು ಮತ್ತು ಮಾಂತ್ರಿಕರು ಹೇಳಿದಂತೆಯೇ ಫಿಲಿಷ್ಟಿಯರು ಮಾಡಿದರು. ಫಿಲಿಷ್ಟಿಯರು ಆಗ ತಾನೇ ಕರುಹಾಕಿದ ಎರಡು ಹಸುಗಳನ್ನು ತಂದು, ಅವುಗಳನ್ನು ಬಂಡಿಗೆ ಹೂಡಿದರು. ಅವುಗಳ ಕರುಗಳನ್ನು ಮನೆಯ ದೊಡ್ಡಿಯಲ್ಲಿ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:10
4 ತಿಳಿವುಗಳ ಹೋಲಿಕೆ  

ಅದಕ್ಕೆ ಯಾಕೋಬನು ಅವನಿಗೆ, “ಮಕ್ಕಳು ಎಳೆಯ ಪ್ರಾಯದವರಿದ್ದಾರೆ, ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ನನ್ನ ಒಡೆಯನಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡೆಸಿದರೆ, ಎಲ್ಲಾ ಮಂದೆಯು ಸತ್ತು ಹೋದಾವು.


ಆಗ ನೋಡಿರಿ, ಅದು ತನ್ನ ಮೇರೆಯಾದ ಬೇತ್ ಷೆಮೆಷ್ ಎಂಬ ಮಾರ್ಗವನ್ನು ಹಿಡಿದು ಹೋದರೆ, ಯೆಹೋವ ದೇವರು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾರೆ, ಇಲ್ಲದೆ ಹೋದರೆ ಅವರ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ತಾನಾಗಿಯೇ ನಮಗೆ ಆಯಿತೆಂದು ತಿಳಿದುಕೊಳ್ಳಿರಿ,” ಎಂದರು.


ಯೆಹೋವ ದೇವರ ಮಂಜೂಷವನ್ನೂ, ಬಂಗಾರದ ಇಲಿಗಳನ್ನೂ, ತಮ್ಮ ಗಡ್ಡೆರೋಗದ ರೂಪಗಳನ್ನೂ ಇಟ್ಟಿರುವ ಚಿಕ್ಕ ಪೆಟ್ಟಿಗೆಯನ್ನೂ ಆ ಬಂಡಿಯ ಮೇಲಿಟ್ಟರು.


ಏಳನೆಯ ಸಾರಿ ಇವನು ಹೋಗಿ ನೋಡಿದಾಗ, “ಇಗೋ, ಸಮುದ್ರದಿಂದ ಒಂದು ಮನುಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತಿದೆ,” ಎಂದನು. ಆಗ, “ನೀನು ಹೋಗಿ ಅಹಾಬನಿಗೆ ಬೇಗನೇ ರಥವನ್ನು ತೆಗೆದುಕೊಂಡು ಮಳೆಯು ನಿನ್ನನ್ನು ತಡೆಯದಂತೆ ಇಳಿದುಹೋಗೆಂದು ಹೇಳು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು