Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಹಸುಗಳು ಕೂಗುತ್ತಾ ಬೇತ್ ಷೆಮೆಷ್ ಕಡೆಗೆ ಹೋಗುವ ಮಾರ್ಗವನ್ನು ಹಿಡಿದು, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ ಹೆದ್ದಾರಿಯಲ್ಲಿ ಹೋದವು. ಫಿಲಿಷ್ಟಿಯರ ಅಧಿಪತಿಗಳು ಬೇತ್ ಷೆಮೆಷ್ ಊರಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೂಡಲೆ ಆ ಹಸುಗಳು ಬೇತ್ ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕೂಡಲೆ ಆ ಹಸುಗಳು ಬೇತ್‍ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಅಂಬಾ ಎನ್ನುತ್ತಾ ನೆಟ್ಟಗೆ ಮುಂದೆ ಸಾಗಿದವು. ಎಡಕ್ಕಾಗಲಿ, ಬಲಕ್ಕಾಗಲಿ ತಿರುಗಲಿಲ್ಲ. ಫಿಲಿಷ್ಟಿಯ ರಾಜರುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೂಡಲೆ ಆ ಹಸುಗಳು ಬೇತ್‍ಷೆಮೆಷಿನ ರಾಜಮಾರ್ಗವನ್ನು ಹಿಡಿದು ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್‍ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹಸುಗಳು ಬೇತ್‌ಷೆಮೆಷಿಗೆ ನೇರವಾಗಿ ಹೋದವು. ಅವು ದಾರಿಯಲ್ಲಿಯೇ ಹೋದವು. ಅವು ದಾರಿಯುದ್ದಕ್ಕೂ ಕೂಗುತ್ತಾ ನಡೆದವು. ಅವು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಲಿಲ್ಲ. ಫಿಲಿಷ್ಟಿಯರ ಅಧಿಪತಿಗಳು ಬೇತ್‌ಷೆಮೆಷಿನ ಗಡಿಯವರೆಗೂ ಹಸುಗಳನ್ನು ಹಿಂಬಾಲಿಸಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:12
7 ತಿಳಿವುಗಳ ಹೋಲಿಕೆ  

ಅದಕ್ಕೆ ಇಸ್ರಾಯೇಲರು ಅವನಿಗೆ, “ನಾವು ರಾಜಮಾರ್ಗದಲ್ಲಿ ಹೋಗುತ್ತೇವೆ. ನಮ್ಮ ಪಶುಗಳು ನಿನ್ನ ನೀರು ಕುಡಿದರೆ, ಅದರ ಕ್ರಯವನ್ನು ಕೊಡುತ್ತೇವೆ. ನಮ್ಮ ಕಾಲುಗಳಿಂದ ದಾಟಿ ಹೋಗುವುದೇ ಹೊರತು ಮತ್ತೇನೂ ಮಾಡುವುದಿಲ್ಲ,” ಎಂದು ಹೇಳಿ ಕಳುಹಿಸಿದನು.


ಆಗ ನೋಡಿರಿ, ಅದು ತನ್ನ ಮೇರೆಯಾದ ಬೇತ್ ಷೆಮೆಷ್ ಎಂಬ ಮಾರ್ಗವನ್ನು ಹಿಡಿದು ಹೋದರೆ, ಯೆಹೋವ ದೇವರು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾರೆ, ಇಲ್ಲದೆ ಹೋದರೆ ಅವರ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ತಾನಾಗಿಯೇ ನಮಗೆ ಆಯಿತೆಂದು ತಿಳಿದುಕೊಳ್ಳಿರಿ,” ಎಂದರು.


ಯೆಹೋವ ದೇವರ ಮಂಜೂಷವನ್ನೂ, ಬಂಗಾರದ ಇಲಿಗಳನ್ನೂ, ತಮ್ಮ ಗಡ್ಡೆರೋಗದ ರೂಪಗಳನ್ನೂ ಇಟ್ಟಿರುವ ಚಿಕ್ಕ ಪೆಟ್ಟಿಗೆಯನ್ನೂ ಆ ಬಂಡಿಯ ಮೇಲಿಟ್ಟರು.


ಬೇತ್ ಷೆಮೆಷ್ ಊರಿನವರು ತಗ್ಗಿನಲ್ಲಿ ಗೋಧಿಯ ಪೈರನ್ನು ಕೊಯ್ಯುತ್ತಿದ್ದರು. ಅವರು ತಮ್ಮ ಕಣ್ಣುಗಳನ್ನು ಎತ್ತಿ ಮಂಜೂಷವನ್ನು ಕಂಡು, ಅದನ್ನು ಕಂಡದ್ದಕ್ಕೆ ಸಂತೋಷಪಟ್ಟರು.


ಆದರೆ ಫರೋಹನು ತನಗೆ ಉಪಶಮನವಾಯಿತೆಂದು ನೋಡಿದಾಗ, ಯೆಹೋವ ದೇವರು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣ ಮಾಡಿಕೊಂಡು, ಮೋಶೆ ಮತ್ತು ಆರೋನರ ಮಾತನ್ನು ಕೇಳಲಿಲ್ಲ.


ಬಾಲಾದಿಂದ ಪಶ್ಚಿಮಕ್ಕಿರುವ ಸೇಯೀರ್ ಬೆಟ್ಟವನ್ನು ಸುತ್ತಿ, ಅಲ್ಲಿಂದ ಕೆಸಾಲೋನಿನ ಯಾರೀಮ್ ಬೆಟ್ಟದ ಉತ್ತರಕ್ಕೂ ಅಲ್ಲಿಂದ ಬೇತ್ ಷೆಮೆಷ್ ಕಡೆಗೆ ಇಳಿದು ತಿಮ್ನಾಗೆ ಹೋಯಿತು.


ಬೆನ್ ಡೆಕೆರ್ ಮಾಕಾಚ್, ಶಾಲ್ಬೀಮ್, ಬೇತ್ ಷೆಮೆಷ್, ಏಲೋನ್ ಹಾಗು ಬೇತ್ ಹಾನಾನ್‌ಗಳಲ್ಲಿ ಅಧಿಕಾರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು