1 ಸಮುಯೇಲ 6:15 - ಕನ್ನಡ ಸಮಕಾಲಿಕ ಅನುವಾದ15 ಲೇವಿಯರು ಯೆಹೋವ ದೇವರ ಮಂಜೂಷವನ್ನೂ, ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳಿದ್ದ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ, ಆ ದೊಡ್ಡ ಬಂಡೆಯ ಮೇಲಿಟ್ಟುಕೊಂಡರು. ಬೇತ್ ಷೆಮೆಷ್ ಊರಿನವರು ಆ ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸಮರ್ಪಣೆಗಳನ್ನೂ ಅರ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಲೇವಿಯರು ಯೆಹೋವನ ಮಂಜೂಷವನ್ನೂ, ಚಿನ್ನದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟರು. ಬೇತ್ ಷೆಮೆಷಿನವರು ಅದೇ ದಿನ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಮತ್ತು ಯಜ್ಞಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಲೇವಿಯರು ಸರ್ವೇಶ್ವರನ ಮಂಜೂಷವನ್ನು ಹಾಗು ಚಿನ್ನದ ವಸ್ತುಗಳಿದ್ದ ಚಿಕ್ಕಪೆಟ್ಟಿಗೆಯನ್ನು ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟರು. ಬೇತ್‍ಷೆಮೆಷಿನವರು ಅದೇ ದಿನ ಸರ್ವೇಶ್ವರನಿಗೆ ದಹನಬಲಿಗಳನ್ನು ಹಾಗು ಶಾಂತಿಸಮಾಧಾನದ ಬಲಿಗಳನ್ನು ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಲೇವಿಯರು ಯೆಹೋವನ ಮಂಜೂಷವನ್ನೂ ಚಿನ್ನದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟರು. ಬೇತ್‍ಷೆಮೆಷಿನವರು ಅದೇ ದಿವಸ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿ |