Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:16 - ಕನ್ನಡ ಸಮಕಾಲಿಕ ಅನುವಾದ

16 ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ಕಂಡು, ಅದೇ ದಿನದಲ್ಲಿ ತಿರುಗಿ ಎಕ್ರೋನಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದನ್ನೆಲ್ಲಾ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ಪ್ರಭುಗಳು ಅದೇ ದಿನ ಎಕ್ರೋನಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇದನ್ನೆಲ್ಲ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ರಾಜರು ಅದೇ ದಿನ ಎಕ್ರೋನಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದನ್ನೆಲ್ಲಾ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ಪ್ರಭುಗಳು ಅದೇ ದಿವಸ ಎಕ್ರೋನಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬೇತ್‌ಷೆಮೆಷಿನ ಜನರು ಮಾಡಿದ್ದನ್ನೆಲ್ಲ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ನೋಡಿ ಅದೇ ದಿನ ಎಕ್ರೋನಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:16
7 ತಿಳಿವುಗಳ ಹೋಲಿಕೆ  

ಆಗ ಅವರು, “ದೋಷಪರಿಹಾರ ಕಾಣಿಕೆಗಾಗಿ ನಾವು ಅದರ ಸಂಗಡ ಕಳುಹಿಸತಕ್ಕದ್ದೇನು?” ಎಂದರು. ಅದಕ್ಕವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧ ವ್ಯಾಧಿಯಿರುವುದರಿಂದ ಫಿಲಿಷ್ಟಿಯರ ಅಧಿಪತಿಗಳ ಸಂಖ್ಯೆಗೆ ಸರಿಯಾಗಿ ಒಬ್ಬೊಬ್ಬರಿಗೆ ಬಂಗಾರದ ಐದು ಗಡ್ಡೆಗಳನ್ನು ಮತ್ತು ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ.


ಐದು ಮಂದಿ ಫಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಸೀದೋನ್ಯರೂ ಬಾಳ್ ಹೆರ್ಮೋನ್ ಬೆಟ್ಟದಿಂದ ಪ್ರಾರಂಭಿಸಿ ಹಮಾತಿನ ಪ್ರದೇಶದವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾಗಿರುವ ಹಿವ್ವಿಯರು ಇವರೇ.


ಈಜಿಪ್ಟಿಗೆ ಎದುರಾದ ಶೀಹೋರ್ ನದಿಯಿಂದ ಕಾನಾನ್ಯರಿಗೆ ಸೇರಿದ ಉತ್ತರ ಮೇರೆಯಾದ ಎಕ್ರೋನಿನವರೆಗೂ ಅಂದರೆ, ಗಾಜಾ, ಅಷ್ಡೋದ್, ಅಷ್ಕೆಲೋನ್, ಗಾತ್, ಎಕ್ರೋನ್ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ದಕ್ಷಿಣ ಪ್ರಾಂತ್ಯದಲ್ಲಿದ್ದ ಅವ್ವೀಯರ ಸೀಮೆ;


ಆಗ ಹಸುಗಳು ಕೂಗುತ್ತಾ ಬೇತ್ ಷೆಮೆಷ್ ಕಡೆಗೆ ಹೋಗುವ ಮಾರ್ಗವನ್ನು ಹಿಡಿದು, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ ಹೆದ್ದಾರಿಯಲ್ಲಿ ಹೋದವು. ಫಿಲಿಷ್ಟಿಯರ ಅಧಿಪತಿಗಳು ಬೇತ್ ಷೆಮೆಷ್ ಊರಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.


ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ, ಎಕ್ರೋನ್ಯರು, “ನಮ್ಮನ್ನೂ, ನಮ್ಮ ಜನರನ್ನೂ ಕೊಂದುಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರು,” ಎಂದು ಕೂಗಿ ಹೇಳಿದರು.


ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ, “ನೀನು ಅವನನ್ನು ಮರಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು, ಕಟ್ಟಿ, ಬಾಧಿಸಬಹುದೆಂದೂ ಅವನ ದೊಡ್ಡ ಶಕ್ತಿ ಯಾವುದರಲ್ಲಿ ಇದೆ ಎಂದೂ ನೋಡು. ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡುವೆವು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು