Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:20 - ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರು ತಮ್ಮಲ್ಲಿ ದೊಡ್ಡ ನಾಶನಮಾಡಿದ್ದರಿಂದ, ಬೇತ್ ಷೆಮೆಷ್ ಊರಿನವರು ದುಃಖಪಟ್ಟು, “ಈ ಪರಿಶುದ್ಧ ದೇವರಾದ ಯೆಹೋವ ದೇವರ ಮುಂದೆ ನಿಲ್ಲತಕ್ಕವನ್ಯಾರು? ಇಲ್ಲಿಂದ ಮಂಜೂಷವು ಎಲ್ಲಿಗೆ ಹೋಗುವುದು?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪರಿಶುದ್ಧ ದೇವರಾದ ಯೆಹೋವನ ಮುಂದೆ ಯಾರು ನಿಂತಾರು? ನಮ್ಮನ್ನು ಬಿಟ್ಟು ಈತನು ಹೋಗತಕ್ಕ ಸ್ಥಳ ಯಾವುದು ಎಂದು ಮಾತನಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಪರಮಪಾವನ ದೇವರಾದ ಸರ್ವೆಶ್ವರನ ಮುಂದೆ ಯಾರು ತಾನೆ ನಿಂತಾರು? ಇನ್ನು ಮುಂದೆ ಇವರು ಹೋಗತಕ್ಕ ಸ್ಥಳ ಯಾವುದು?” ಎಂದು ಮಾತಾಡಿಕೊಂಡರು ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಗಮ್ಯದೇವರಾದ ಯೆಹೋವನ ಮುಂದೆ ಯಾರು ನಿಂತಾರು? ಇನ್ನು ಮೇಲೆ ಈತನು ಹೋಗತಕ್ಕ ಸ್ಥಳವಾವದು ಎಂದು ಮಾತಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಈ ಪವಿತ್ರ ಪೆಟ್ಟಿಗೆಯನ್ನು ನೋಡಿಕೊಳ್ಳಬಲ್ಲ ಯಾಜಕನೆಲ್ಲಿದ್ದಾನೆ? ಈ ಪೆಟ್ಟಿಗೆಯು ಇಲ್ಲಿಂದ ಎಲ್ಲಿಗೆ ಹೋಗಬೇಕಾಗಿದೆ?” ಎಂದು ಬೇತ್‌ಷೆಮೆಷಿನ ಜನರು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:20
13 ತಿಳಿವುಗಳ ಹೋಲಿಕೆ  

ಆದರೆ ಅವರ ಆಗಮನದ ದಿವಸದಲ್ಲಿ ಯಾರು ತಾಳುವರು? ಅವರು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಏಕೆಂದರೆ ಅವರು ಅಕ್ಕಸಾಲಿಗನ ಪರಿಶೋಧಿಸುವ ಬೆಂಕಿಯ ಹಾಗೆಯೂ, ಅಗಸನ ಸಾಬೂನಿನ ಹಾಗೆಯೂ ಇದ್ದಾರೆ.


ದಾವೀದನು ಆ ದಿನ ಯೆಹೋವ ದೇವರಿಗೆ ಭಯಪಟ್ಟು, “ಯೆಹೋವ ದೇವರ ಮಂಜೂಷವನ್ನು ನಾನಿರುವಲ್ಲಿಗೆ ಹೇಗೆ ತೆಗೆದುಕೊಂಡು ಹೋಗುವದು?” ಎಂದನು.


ಏಕೆಂದರೆ, ಅವರ ಕೋಪಾಗ್ನಿಯ ಮಹಾದಿನವು ಬಂದಿದೆ, ಅದರ ಮುಂದೆ ಯಾರು ನಿಂತಾರು?” ಎಂದು ಹೇಳಿದರು.


ಆಗ ಗೆರಸೇನರ ಸೀಮೆಯ ಸುತ್ತಮುತ್ತಲಿನ ಜನಸಮೂಹವೆಲ್ಲವು, ಬಹಳ ಭಯಹಿಡಿದವರಾದುದರಿಂದ ಅವರು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು. ಯೇಸು ದೋಣಿಯನ್ನು ಹತ್ತಿ ಹಿಂದಿರುಗಿದರು.


ಸೀಮೋನ್ ಪೇತ್ರನು ಇದನ್ನು ಕಂಡಾಗ, ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮಿ, ನನ್ನನ್ನು ಬಿಟ್ಟು ಹೋಗಿರಿ, ನಾನು ಪಾಪಿ,” ಎಂದನು.


ನೀವು ಭಯಭಕ್ತಿಗೆ ಪಾತ್ರರು, ನೀವು ಒಂದು ಸಾರಿ ಬೇಸರಗೊಂಡರೆ, ನಿಮ್ಮ ಮುಂದೆ ನಿಲ್ಲುವವನ್ಯಾರು?


ಆಗ ಯೆಹೋವ ದೇವರು ಉಜ್ಜನ ಮೇಲೆ ಕೋಪಗೊಂಡು, ಅಂಥ ಅಗೌರವಕ್ಕಾಗಿ ದೇವರು ಅವನನ್ನು ಶಿಕ್ಷಿಸಿದರು; ಅವನು ಅಲ್ಲಿಯೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.


ಏಕೆಂದರೆ ನಿಮ್ಮ ದೇವರಾಗಿರುವುದಕ್ಕೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಯೆಹೋವ ದೇವರು ನಾನೇ. ನಾನು ಪರಿಶುದ್ಧನಾಗಿರುವುದರಿಂದ ನೀವು ಪರಿಶುದ್ಧರಾಗಿರಬೇಕು.


ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಾನೇ. ನೀವು ನಿಮ್ಮನ್ನು ಪ್ರತಿಷ್ಠಿಸಿಕೊಳ್ಳಿರಿ. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ಇದಲ್ಲದೆ ಭೂಮಿಯ ಮೇಲೆ ಹರಿದಾಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ಕಂಡಾಗ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು. ಏಕೆಂದರೆ ಅವರ ಕೈ ನಮ್ಮ ಮೇಲೆಯೂ, ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು