Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:21 - ಕನ್ನಡ ಸಮಕಾಲಿಕ ಅನುವಾದ

21 ಅವರು ಕಿರ್ಯತ್ ಯಾರೀಮಿನ ನಿವಾಸಿಗಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವ ದೇವರ ಮಂಜೂಷವನ್ನು ತಿರುಗಿ ಕಳುಹಿಸಿದ್ದಾರೆ, ನೀವು ಬಂದು ಅದನ್ನು ನಿಮ್ಮ ಬಳಿಗೆ ತೆಗೆದುಕೊಂಡು ಹೋಗಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಫಿಲಿಷ್ಟಿಯರು ಯೆಹೋವನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿರಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರು ಸರ್ವೇಶ್ವರನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕಿರ್ಯತ್ಯಾರೀವಿುನವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ - ಫಿಲಿಷ್ಟಿಯರು ಯೆಹೋವನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿರಿ ಎಂದು ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕಿರ್ಯತ್ಯಾರೀಮಿನಲ್ಲಿ ಒಬ್ಬ ಯಾಜಕನಿದ್ದನು. ಬೇತ್‌ಷೆಮೆಷಿನ ಜನರು ಕಿರ್ಯತ್ಯಾರೀಮಿನವರ ಬಳಿಗೆ ಸಂದೇಶಕರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ತಂದಿರುವರು. ನೀವು ಬಂದು ಅದನ್ನು ನಿಮ್ಮ ಪಟ್ಟಣಕ್ಕೆ ತೆಗೆದುಕೊಂಡು ಹೋಗಿ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:21
11 ತಿಳಿವುಗಳ ಹೋಲಿಕೆ  

ಇದಲ್ಲದೆ ಆ ಮೇರೆಯು ದಕ್ಷಿಣ ಎಲ್ಲೆಗೆ ಎದುರಾಗಿರುವ ಬೇತ್ ಹೋರೋನಿಗೆ ಎದುರಾಗಿ ಬೆಟ್ಟವನ್ನು ಹಿಡಿದು, ದಕ್ಷಿಣವಾಗಿ ಸುತ್ತಿಕೊಂಡು ಕಿರ್ಯತ್ ಯಾರೀಮ್ ಎಂಬ ಯೆಹೂದ ಗೋತ್ರದ ಪಟ್ಟಣವಾದ ಕಿರ್ಯತ್ ಬಾಳದ ಬಳಿಗೆ ಹೋಗಿ ಮುಗಿಯುವುದು. ಇದು ಪಶ್ಚಿಮ ಎಲ್ಲೆಯಾಗಿತ್ತು.


ಆಗ ಇಸ್ರಾಯೇಲರು ಪ್ರಯಾಣ ಮಾಡುವಾಗ ಮೂರನೆಯ ದಿವಸದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ ಯಾರೀಮ್ ಎಂಬ ಅವರ ಪಟ್ಟಣಗಳಿಗೆ ಬಂದರು.


ಆದಕಾರಣ ನನ್ನ ಹೆಸರಿನಿಂದ ಕರೆಯಲಾದಂಥ ಮತ್ತು ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ, ನಿಮ್ಮ ಪಿತೃಗಳಿಗೆ ಕೊಟ್ಟ ಸ್ಥಳಕ್ಕೂ, ಶೀಲೋವಿಗೆ ಮಾಡಿದ ಹಾಗೆ ಮಾಡುವೆನು.


“ ‘ಆದರೆ ಈಗ ಶೀಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಎಂದರೆ, ನಾನು ಮೊದಲು ನನ್ನ ಹೆಸರನ್ನು ಸ್ಥಾಪಿಸಿದ ಸ್ಥಳಕ್ಕೆ ಹೋಗಿರಿ; ಅದಕ್ಕೆ ನಾನು, ನನ್ನ ಜನರಾದ ಇಸ್ರಾಯೇಲರ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.


ದೇವರು ಸಿಲೋವಿನ ಗುಡಾರನ್ನೂ ಜನರೊಳಗೆ ಹಾಕಿದ ಗುಡಾರವನ್ನೂ ತಳ್ಳಿಬಿಟ್ಟರು.


ಯೆಹೂದದಲ್ಲಿರುವ ಕಿರ್ಯತ್ ಯಾರೀಮಿನಲ್ಲಿ ಇಳಿದುಕೊಂಡರು. ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್ ಎಂಬ ಹೆಸರಿದೆ.


ಕಿರ್ಯತ್ ಯಾರೀಮ್ ಎಂಬ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.


ಆ ಬೆಟ್ಟದ ಶಿಖರದಿಂದ ನೆಫ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣಗಳಿಗೂ ಅಲ್ಲಿಂದ ಕಿರ್ಯತ್ ಯಾರೀಮ್ ಆದ ಬಾಲಾ ಎಂಬ ಊರಿನವರೆಗೆ ಹೋಗುತ್ತದೆ.


ಕಿರ್ಯತ್ ಯಾರೀಮಿನವನಾದ ಶೆಮಾಯನ ಮಗ ಊರೀಯ ಎಂಬುವವನು ಸಹ ಯೆಹೋವ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆಮೀಯನ ಎಲ್ಲಾ ಮಾತುಗಳ ಪ್ರಕಾರ, ಈ ಪಟ್ಟಣಕ್ಕೂ, ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.


ಆ ಕೆರೂಬಿಗಳ ನಡುವೆ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರ ಹೆಸರಿನಿಂದ ಕರೆಯಲಾದ ದೇವರ ಮಂಜೂಷವನ್ನು ತೆಗೆದುಕೊಂಡು ಬರಲು ತನ್ನ ಸಂಗಡ ಇದ್ದ ಸಮಸ್ತ ಜನರನ್ನು ಕರೆದುಕೊಂಡು, ಯೆಹೂದದ ಬಾಲಾ ಎಂಬಲ್ಲಿಗೆ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು