Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:5 - ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ನಿಮ್ಮೆಲ್ಲರ ನಾಶಕ್ಕೆ ಕಾರಣವಾದ ಈ ಗಡ್ಡೆಗಳ ಹಾಗು ಇಲಿಗಳ ಸ್ವರೂಪಗಳನ್ನು ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಅವರು ನಿಮ್ಮ ಮೇಲೆಯೂ, ನಿಮ್ಮ ದೇವರುಗಳ ಮೇಲೆಯೂ, ನಿಮ್ಮ ಭೂಮಿಯ ಮೇಲೆಯೂ ಇರುವ ತಮ್ಮ ಕೈಯನ್ನು ತೆಗೆದು ಹಗುರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ, ಇಸ್ರಾಯೇಲಿನ ದೇವರಿಗೆ ಅದನ್ನು ಅರ್ಪಿಸಿ ಮಹಿಮೆಯನ್ನು ಸಲ್ಲಿಸಿದರೆ, ಆತನ ಶಿಕ್ಷಾಹಸ್ತವು ನಿಮ್ಮನ್ನೂ, ನಿಮ್ಮ ದೇವತೆಗಳನ್ನೂ, ಪ್ರಾಂತ್ಯಗಳನ್ನೂ ಬಿಟ್ಟುಹೋದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಈ ಗಡ್ಡೆಗಳ ಹಾಗು ಇಲಿಗಳ ರೂಪವನ್ನು ಚಿನ್ನದಿಂದ ಮಾಡಿಸಿ ಇಸ್ರಯೇಲ್ ದೇವರಿಗೆ ಬಹುಮಾನವಾಗಿ ಕೊಡಿ. ಆಗ ಆತನ ಶಿಕ್ಷಾಹಸ್ತ ನಿಮ್ಮನ್ನೂ ನಿಮ್ಮ ದೇವತೆಗಳನ್ನೂ ಹಾಗು ಪ್ರಾಂತ್ಯಗಳನ್ನೂ ಬಿಟ್ಟುಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ ಇಸ್ರಾಯೇಲ್‍ದೇವರಿಗೆ ಬಹುಮಾನವಾಗಿ ಕೊಟ್ಟರೆ ಆತನ ಶಿಕ್ಷಾಹಸ್ತವು ನಿಮ್ಮನ್ನೂ ನಿಮ್ಮ ದೇವತೆಗಳನ್ನೂ ಪ್ರಾಂತಗಳನ್ನೂ ಬಿಟ್ಟುಹೋದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹೀಗೆ ನಿಮ್ಮ ದೇಶವನ್ನು ನಾಶಗೊಳಿಸುತ್ತಿರುವ ಗಡ್ಡೆಗಳ, ಇಲಿಗಳ ಮಾದರಿಗಳನ್ನು ಮಾಡಿಸಿರಿ. ಇಸ್ರೇಲರ ದೇವರಿಗೆ ಚಿನ್ನದ ಆ ಮಾದರಿಗಳನ್ನು ಕಾಣಿಕೆಯಾಗಿ ಸಲ್ಲಿಸಿರಿ. ಆಗ ಇಸ್ರೇಲರ ದೇವರು ನಿಮ್ಮನ್ನೂ ನಿಮ್ಮ ದೇವರುಗಳನ್ನೂ ನಿಮ್ಮ ದೇಶವನ್ನೂ ಶಿಕ್ಷಿಸುವುದನ್ನು ನಿಲ್ಲಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:5
30 ತಿಳಿವುಗಳ ಹೋಲಿಕೆ  

ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ನೀನು ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಘನಪಡಿಸಿ, ಅವರಿಗೆ ಸ್ತೋತ್ರ ಸಲ್ಲಿಸು. ಏನು ಮಾಡಿದೆಯೋ ಅದನ್ನು ನನಗೆ ತಿಳಿಸು, ನನಗೆ ಮರೆಮಾಡಬೇಡ,” ಎಂದನು.


ಆಗ ಆ ಇಡೀ ಪಟ್ಟಣಕ್ಕೆ ಮರಣಾಂತಿಕ ವಿನಾಶ ಉಂಟಾಗಿ, ದೇವರ ಕೈ ಅಲ್ಲಿ ಮಹಾಬಾಧಕವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟುಗೂಡಿಸಿ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ, ನಮ್ಮ ಜನರನ್ನೂ ಕೊಂದು ಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರುಗಿ ಹೋಗುವಂತೆ ಕಳುಹಿಸಿಬಿಡಿರಿ,” ಎಂದರು.


ಅವರು ಕುರುಡನಾಗಿದ್ದವನನ್ನು ಮತ್ತೊಮ್ಮೆ ಕರೆದು ಅವನಿಗೆ, “ದೇವರಿಗೆ ಮಹಿಮೆಯನ್ನು ಸಲ್ಲಿಸು, ಆ ಮನುಷ್ಯ ಪಾಪಿ ಎಂದು ನಾವು ಬಲ್ಲೆವು,” ಎಂದರು.


ಅವರು ಯೆಹೋವ ದೇವರಿಗೆ ಮಹಿಮೆಯನ್ನು ಸಲ್ಲಿಸಲಿ! ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.


ಅವರು ಕತ್ತಲೆಯನ್ನು ತರುವುದಕ್ಕಿಂತ ಮೊದಲು ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವುದಕ್ಕಿಂತ ಮುಂಚೆ ನಿಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ನೀವು ಬೆಳಕನ್ನು ನಿರೀಕ್ಷಿಸಿದ್ದೀರಿ. ಆದರೆ ಅವರು ಗಾಡಾಂಧಕಾರದ ಗುಡ್ಡಗಳನ್ನು ತಂದಾರು.


ದೇವರೇ, ರಾತ್ರಿ ಹಗಲು ನಿಮ್ಮ ಕೈ ನನ್ನ ಮೇಲೆ ಭಾರವಾಗಿತ್ತು; ನನ್ನ ಬಲವು ಬೇಸಿಗೆಯ ಬಿಸಿಲಿನಲ್ಲಿ ಕುಂದಿಹೋಗುವಂತೆ ಆಯಿತು.


ಆದರೆ ಅವರು ಅದನ್ನು ತಂದ ತರುವಾಯ, ಯೆಹೋವ ದೇವರ ಕೈ ಆ ಪಟ್ಟಣದ ಮೇಲೆ ಬಂದು ಮಹಾ ನಾಶಮಾಡಿತು. ಇದಲ್ಲದೆ ಯೆಹೋವ ದೇವರು ಚಿಕ್ಕವರಿಂದ ಹಿರಿಯರವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದರು. ಅವರಿಗೆ ಗಡ್ಡೆರೋಗ ಬಂದಿತು.


ಮನುಷ್ಯರು ಬಲವಾದ ಕಾವಿನಿಂದ ಕಂದಿ ಹೋದಾಗ್ಯೂ, ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದರು. ಆದರೆ ಅವರು ದೇವರಿಗೆ ಮಹಿಮೆಯನ್ನು ಸಲ್ಲಿಸುವ ಹಾಗೆ ಪಶ್ಚಾತ್ತಾಪ ಪಡಲಿಲ್ಲ.


ಅವನು, “ನೀವು ದೇವರಿಗೆ ಭಯಪಟ್ಟು ಅವರಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಅವರು ನ್ಯಾಯತೀರ್ಪು ಮಾಡುವ ಸಮಯ ಬಂದಿದೆ. ಭೂಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದ ದೇವರನ್ನೇ ಆರಾಧಿಸಿರಿ!” ಎಂದು ಮಹಾಧ್ವನಿಯಿಂದ ಹೇಳಿದನು.


ಅದೇ ಗಳಿಗೆಯಲ್ಲಿ, ಮಹಾ ಭೂಕಂಪ ಉಂಟಾಗಿ ಆ ಪಟ್ಟಣದ ಹತ್ತರಲ್ಲೊಂದು ಭಾಗವು ಬಿದ್ದುಹೋಯಿತು. ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರಿಗೆ ಮಹಿಮೆಯನ್ನು ಸಲ್ಲಿಸಿದರು.


ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ,” ನೀವು ಕಿವಿಗೊಡದೆ ನನ್ನ ಹೆಸರಿಗೆ ಮಹಿಮೆಯನ್ನು ಸಲ್ಲಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳದೆ ಹೋದರೆ, “ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು. ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು. ಹೌದು, ಅವುಗಳನ್ನು ಆಗಲೇ ಶಪಿಸಿದ್ದಾಯಿತು, ಏಕೆಂದರೆ ನೀವು ನನ್ನನ್ನು ಘನಪಡಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಲಿಲ್ಲ.


“ನಾನು ನಿಮ್ಮಲ್ಲಿ ಕಳುಹಿಸಿದಂಥ ನನ್ನ ದೊಡ್ಡ ಸೈನ್ಯವಾದ ಮಿಡತೆಗಳು, ಗುಂಪು ಮಿಡತೆಗಳು, ಕಂಬಳಿ ಮಿಡತೆಗಳು, ಚೂರಿ ಮಿಡತೆಗಳು ತಿಂದು ಬಿಟ್ಟ ವರ್ಷಗಳನ್ನು ನಿಮಗೆ ಪುನಃಸ್ಥಾಪಿಸಿ ಕೊಡುವೆನು.


ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, ಒಂದೊಂದು ಹಸುರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಈಜಿಪ್ಟಿನವರ ವಿಷಯವಾದ ಪ್ರವಾದನೆ: ಇಗೋ, ಯೆಹೋವ ದೇವರು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಈಜಿಪ್ಟಿಗೆ ಬರುತ್ತಾರೆ. ಅವರು ಸಮ್ಮುಖರಾದಾಗ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯಗಳು ಅದರ ಮಧ್ಯೆ ಭಯದಿಂದ ಕರಗುವುವು.


ನೀವು ದೇವರಿಗೆ, “ನಿಮ್ಮ ಕೃತ್ಯಗಳು ಅತಿಶಯವಾದವುಗಳಾಗಿವೆ. ನಿಮ್ಮ ಶತ್ರುಗಳು ನಿಮ್ಮೆದುರಿನಲ್ಲಿ ಮುದುರಿ ಬೀಳುವಷ್ಟು ನಿಮ್ಮ ಶಕ್ತಿ ದೊಡ್ಡದಾಗಿದೆ.


ನಿಮ್ಮ ಪೆಟ್ಟನ್ನು ನನ್ನಿಂದ ತೊಲಗಿಸಿರಿ; ನಿಮ್ಮ ಕೈಯ ಹೊಡೆತದಿಂದ ನಾನು ಕುಗ್ಗಿ ಹೋಗಿದ್ದೇನೆ.


ವಿದೇಶಿಯರು ನನಗೆ ಅಧೀನರಾದರು; ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು.


ಹೇಗೆಂದರೆ ಆ ಕಾಲದಲ್ಲಿ ಯೆಹೋವ ದೇವರು ಈಜಿಪ್ಟಿನವರ ಸಮಸ್ತ ಚೊಚ್ಚಲಿನವರನ್ನು ಹೊಡೆದು ಆ ಮಕ್ಕಳ ಶವಗಳನ್ನು ಹೂಣಿಟ್ಟರು, ಯೆಹೋವ ದೇವರು ಅವರ ದೇವರುಗಳಿಗೂ ಶಿಕ್ಷೆ ಮಾಡಿದರು.


“ಏಕೆಂದರೆ ನಾನು ಈ ರಾತ್ರಿ ಈಜಿಪ್ಟ್ ದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಇರುವ ಚೊಚ್ಚಲಾದವುಗಳನ್ನು ಸಂಹರಿಸುವೆನು. ಈಜಿಪ್ಟಿನ ದೇವರುಗಳಿಗೆಲ್ಲಾ ನಾನು ನ್ಯಾಯತೀರಿಸುವೆನು. ನಾನೇ ಯೆಹೋವ ದೇವರು.


ಯೆಹೋವ ದೇವರು ಹಾಗೆಯೇ ಮಾಡಲಾರಂಭಿಸಿದರು. ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಈಜಿಪ್ಟ್ ದೇಶದಲ್ಲಿಯೂ ಬಂದವು. ನೊಣಗಳಿಂದ ದೇಶವು ಹಾಳಾಗಿ ಹೋಯಿತು.


ಅವರು ಹಾಗೆಯೇ ಮಾಡಲಾರಂಭಿಸಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು, ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾದವು. ಈಜಿಪ್ಟ್ ದೇಶದಲ್ಲೆಲ್ಲಾ ನೆಲದ ಧೂಳು ಹೇನುಗಳಾದವು


ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನೀನು ಕೋಲನ್ನು ಹಿಡಿದುಕೊಂಡು ನದಿ, ಕಾಲುವೆ, ಕೆರೆಗಳ ಮೇಲೆಲ್ಲಾ ನಿನ್ನ ಕೈಚಾಚಿ ಈಜಿಪ್ಟ್ ದೇಶದ ಮೇಲೆಲ್ಲಾ ಕಪ್ಪೆಗಳು ಬರುವಂತೆ ಮಾಡು,’ ಎಂದು ಹೇಳಬೇಕು,” ಎಂದರು.


ಯೆಹೋವ ದೇವರ ಮಂಜೂಷವನ್ನು ಬಂಡಿಯ ಮೇಲೆ ಇಟ್ಟು, ನೀವು ಕಳುಹಿಸಿಕೊಡುವ ನಿಮ್ಮ ದೋಷಪರಿಹಾರ ಕಾಣಿಕೆಯ ಬಂಗಾರದ ವಸ್ತುಗಳನ್ನು ಅದರ ಪಕ್ಕದಲ್ಲಿ ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ, ಅದು ಹೋಗುವಹಾಗೆ ಕಳುಹಿಸಿರಿ.


ಜನಾಂಗದ ಕುಟುಂಬಗಳೇ, ಯೆಹೋವ ದೇವರ ಮುಂದೆ, ನೀವು ಮಹಿಮೆಯನ್ನೂ ಬಲವನ್ನೂ ಅರ್ಪಿಸಿರಿ.


ಯೆಹೋವ ದೇವರ ಹೆಸರಿಗೆ ಸಲ್ಲತಕ್ಕ ಗೌರವವನ್ನು ಸಲ್ಲಿಸಿರಿ; ಕಾಣಿಕೆಯನ್ನು ತೆಗೆದುಕೊಂಡು ದೇವರ ಸನ್ನಿಧಿಗೆ ಬನ್ನಿರಿ. ಪರಿಶುದ್ಧತೆ ಎಂಬ ಭೂಷಣದೊಡನೆ ಯೆಹೋವ ದೇವರನ್ನು ಆರಾಧಿಸಿರಿ.


ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು