1 ಸಮುಯೇಲ 6:9 - ಕನ್ನಡ ಸಮಕಾಲಿಕ ಅನುವಾದ9 ಆಗ ನೋಡಿರಿ, ಅದು ತನ್ನ ಮೇರೆಯಾದ ಬೇತ್ ಷೆಮೆಷ್ ಎಂಬ ಮಾರ್ಗವನ್ನು ಹಿಡಿದು ಹೋದರೆ, ಯೆಹೋವ ದೇವರು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾರೆ, ಇಲ್ಲದೆ ಹೋದರೆ ಅವರ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ತಾನಾಗಿಯೇ ನಮಗೆ ಆಯಿತೆಂದು ತಿಳಿದುಕೊಳ್ಳಿರಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅ ಹಸುಗಳು ತಾವಾಗಿ ಸ್ವದೇಶದ ದಾರಿ ಹಿಡಿದು ಬೇತ್ ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ, ಆ ಮಾರ್ಗವನ್ನು ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಬಾಧಿಸಲ್ಲಿಲ್ಲ ಇದು ಆಕಸ್ಮಿಕವಾಗಿ ಬಂದಿದೆ ಎಂದು, ತಿಳಿದುಕೊಳ್ಳಿರಿ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಬಂಡಿ ಹೋಗುವ ದಾರಿಯನ್ನು ಗಮನಿಸಿರಿ. ಅದು ತಾನಾಗಿ ಸ್ವದೇಶದ ದಾರಿಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈಗ ಬಂದಿರುವ ಕೇಡನ್ನು ಕಳುಹಿಸಿದವನು ಆ ಸರ್ವೇಶ್ವರನೇ ಎಂದು ತಿಳಿಯಿರಿ. ಬಂಡಿ ಆ ಮಾರ್ಗವನ್ನು ಹಿಡಿಯದಿದ್ದರೆ ಆ ಸರ್ವೇಶ್ವರನ ಹಸ್ತ ನಮ್ಮನ್ನು ಮುಟ್ಟಲಿಲ್ಲ, ಈ ಕೇಡು ಆಕಸ್ಮಿಕವಾಗಿ ಬಂದಿದೆ ಎಂದು ತಿಳಿದುಕೊಳ್ಳಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದು ತಾನಾಗಿ ಸ್ವದೇಶದ ದಾರಿ ಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ ಆ ಮಾರ್ಗ ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ನಮ್ಮ ಅದೃಷ್ಟವೇ ಎಂದೂ ತಿಳಿದುಕೊಳ್ಳಿರಿ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ಅದರ ಕಡೆ ಗಮನವಿರಲಿ. ಅದು ತಾನಾಗಿ ಇಸ್ರೇಲಿಗೆ ಸೇರಿದ ಬೇತ್‌ಷೆಮೆಷಿನ ಕಡೆಗೆ ಹೋದರೆ, ಆಗ ಆ ದೊಡ್ಡ ಕೇಡನ್ನು ನಮಗುಂಟು ಮಾಡಿದವನು ಯೆಹೋವನೇ ಸರಿ. ಆದರೆ ಹಸುಗಳು ಬೇತ್‌ಷೆಮೆಷಿಗೆ ಹೋಗದಿದ್ದರೆ, ನಮ್ಮನ್ನು ಶಿಕ್ಷಿಸಿದವನು ಯೆಹೋವನಲ್ಲವೆಂದು ನಮಗೆ ಗೊತ್ತಾಗುವುದು. ನಮಗುಂಟಾದ ಕಾಯಿಲೆಯು ತಾನಾಗಿಯೇ ಬಂದದ್ದೆಂದು ತಿಳಿಯುವುದು” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |