1 ಸಮುಯೇಲ 7:12 - ಕನ್ನಡ ಸಮಕಾಲಿಕ ಅನುವಾದ12 ಸಮುಯೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ, ಶೇನಿಗೂ ಮಧ್ಯದಲ್ಲಿ ನಿಲ್ಲಿಸಿ, “ಇಲ್ಲಿಯವರೆಗೂ ಯೆಹೋವ ದೇವರು ನಮಗೆ ಸಹಾಯ ಮಾಡಿದ್ದಾರೆ,” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದ್ದಾನೆ” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಸರ್ವೇಶ್ವರ ಇಲ್ಲಿಯವರೆಗೆ ನಮಗೆ ಸಹಾಯ ಮಾಡಿದರು,” ಎಂದು ಹೇಳಿ ಅದಕ್ಕೆ, ‘ಎಬನೆಜೆರ್’ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅನಂತರ ಸಮುವೇಲನು ವಿುಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ - ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದನೆಂದು ಹೇಳಿ ಅದಕ್ಕೆ ಎಬೆನೆಜೆರೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ಈ ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |