Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:16 - ಕನ್ನಡ ಸಮಕಾಲಿಕ ಅನುವಾದ

16 ಅವನು ಪ್ರತಿವರ್ಷ ಹೊರಟು ಬೇತೇಲನ್ನೂ, ಗಿಲ್ಗಾಲನ್ನೂ, ಮಿಚ್ಪೆಯನ್ನೂ ಸುತ್ತಿಕೊಂಡು ಹೋಗಿ ಆ ಸ್ಥಳಗಳಲ್ಲೆಲ್ಲಾ ಇಸ್ರಾಯೇಲರಿಗೆ ನ್ಯಾಯತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ಇಸ್ರಾಯೇಲರ ನ್ಯಾಯಗಳನ್ನು ತೀರಿಸುವುದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಕ್ಕೆ ತಿರುಗಿ ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನು ಇಸ್ರಯೇಲರ ನ್ಯಾಯಗಳನ್ನು ತೀರಿಸುವುದಕ್ಕಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಾಕ್ಕೆ ತಿರುಗಿ ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ಇಸ್ರಾಯೇಲ್ಯರ ನ್ಯಾಯಗಳನ್ನು ತೀರಿಸುವದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ವಿುಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಕ್ಕೆ ತಿರಿಗಿ ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಸ್ರೇಲಿನಲ್ಲಿ ನ್ಯಾಯಪರಿಪಾಲನೆಗಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್ ಮತ್ತು ಮಿಚ್ಪೆ ಎಂಬ ಪಟ್ಟಣಗಳಿಗೆ ಹೋದನು. ಹೀಗೆ ಅವನು ಈ ಸ್ಥಳಗಳಲ್ಲೆಲ್ಲಾ ಇಸ್ರೇಲರಿಗೆ ನ್ಯಾಯತೀರಿಸುತ್ತಾ ಅವರನ್ನು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:16
15 ತಿಳಿವುಗಳ ಹೋಲಿಕೆ  

“ನಿಯಮಿತ ಸಮಯವನ್ನು ಆಯ್ದುಕೊಳ್ಳುವೆನು. ನ್ಯಾಯಕ್ಕೆ ಸರಿಯಾಗಿ ನ್ಯಾಯತೀರಿಸುವೆನು,


ಅವನಿಗೆ ಎಪ್ಪತ್ತು ಕತ್ತೆಗಳ ಮೇಲೆ ಏರುವ ನಾಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲಿಗೆ ಎಂಟು ವರ್ಷ ನ್ಯಾಯತೀರಿಸಿದನು.


ಅವನಿಗೆ ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುವ ಮೂವತ್ತು ಮಂದಿ ಪುತ್ರರು ಇದ್ದರು. ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳು ಅವರ ಅಧಿಕಾರದಲ್ಲಿದ್ದವು. ಅವುಗಳಿಗೆ ಈ ದಿನದವರೆಗೂ ಹವೋತ್ ಯಾಯೀರ್ ಎಂಬ ಹೆಸರಿದೆ.


“ಬಿಳಿ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತಿರುವವರೇ, ಮಾರ್ಗದಲ್ಲಿ ನಡೆಯುವವರೇ, ಗಾನಮಾಡಿರಿ.


ಇದಲ್ಲದೆ ಅವನು ಆ ಸ್ಥಳಕ್ಕೆ, ಬೇತೇಲ್, ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಸ್ಥಳಕ್ಕೆ, ಲೂಜ್ ಎಂದು ಹೆಸರಿತ್ತು.


ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನರಸಹಿತವಾಗಿ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದನು.


ಆಗ ಯೆಹೋವ ದೇವರು ಯೆಹೋಶುವನಿಗೆ, “ಈ ದಿನ ಈಜಿಪ್ಟಿನ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದರು. ಆದ್ದರಿಂದ ಆ ಸ್ಥಳವು ಇಂದಿನವರೆಗೂ ಗಿಲ್ಗಾಲ್ ಎಂದು ಕರೆಯಲಾಗಿದೆ.


ಇಸ್ರಾಯೇಲರು ಗಿಲ್ಗಾಲಿನಲ್ಲಿ ಇಳಿದುಕೊಂಡು ತಿಂಗಳಿನ ಹದಿನಾಲ್ಕನೆಯ ದಿವಸ ಸಂಜೆಯಲ್ಲಿ ಯೆರಿಕೋವಿನ ಬಯಲುಗಳಲ್ಲಿ ಪಸ್ಕವನ್ನು ಆಚರಿಸಿದರು.


ಸಮುಯೇಲನು, “ನಾನು ನಿಮಗೋಸ್ಕರವಾಗಿ ಯೆಹೋವ ದೇವರನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲರನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ,” ಎಂದನು.


ಆಗ ಸಮುಯೇಲನು ಜನರಿಗೆ, “ನಾವು ಗಿಲ್ಗಾಲಿಗೆ ಹೋಗಿ, ಅಲ್ಲಿ ರಾಜ್ಯತ್ವವನ್ನು ದೃಢೀಕರಿಸೋಣ ಬನ್ನಿರಿ,” ಎಂದನು.


ಆದರೆ ಬೇತೇಲನ್ನು ಹುಡುಕಬೇಡಿರಿ. ಗಿಲ್ಗಾಲಿಗೆ ಹೋಗಬೇಡಿರಿ. ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಏಕೆಂದರೆ ಗಿಲ್ಗಾಲು ಸೆರೆಗೆ ನಿಶ್ವಯವಾಗಿ ಹೋಗುವುದು, ಬೇತೇಲಿನ ಬಾಧೆಗಳು ಕೊನೆಗೊಳ್ಳುವುದಿಲ್ಲ.”


ಮಿಚ್ಪೆ, ಕೆಫೀರಾ, ಮೋಚಾ,


ಸಮುಯೇಲನು ಇಸ್ರಾಯೇಲರನ್ನು ಮಿಚ್ಪೆಯಲ್ಲಿ ಯೆಹೋವ ದೇವರ ಬಳಿಗೆ ಒಟ್ಟಾಗಿ ಕರೆದು ಅವರಿಗೆ,


“ಯಾಜಕರೇ, ಇದನ್ನು ನೀವು ಕೇಳಿರಿ; ಇಸ್ರಾಯೇಲಿನ ಮನೆತನದವರೇ ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದ ಕಾರಣ ನಿಮಗೆ ವಿರುದ್ಧವಾಗಿ ಈ ನ್ಯಾಯತೀರ್ಪು ಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು