1 ಸಮುಯೇಲ 8:11 - ಕನ್ನಡ ಸಮಕಾಲಿಕ ಅನುವಾದ11 ಅವನು, “ನಿಮ್ಮನ್ನು ಆಳುವ ಅರಸನ ಅಧಿಕಾರವು ಏನೆಂದರೆ, ಅವನು ನಿಮ್ಮ ಪುತ್ರರನ್ನು ತನ್ನ ರಥಗಳಿಗೋಸ್ಕರ ಸಾರಥಿಗಳನ್ನಾಗಿಯೂ ಕುದುರೆ ಸವಾರರನ್ನಾಗಿಯೂ ತೆಗೆದುಕೊಳ್ಳುವನು. ಕೆಲವರು ಅವನ ರಥಗಳ ಮುಂದೆ ಓಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರನ ಮಾತುಗಳನ್ನೆಲ್ಲಾ ತಿಳಿಸಿದನು. “ಅರಸನ ಅಧಿಕಾರ ಎಷ್ಟೆಂದು ಕೇಳಿರಿ; ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವರ ರಥಗಳ ಮುಂದೆ ಓಡಬೇಕಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರಿಗೆ - ಅರಸನ ಅಧಿಕಾರವೆಷ್ಟೆಂದು ಕೇಳಿರಿ - ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವನ ರಥಗಳ ಮುಂದೆ ಓಡುವವರಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸಮುವೇಲನು, “ನೀವು ನಿಮ್ಮನ್ನು ಆಳಲು ರಾಜನು ಬೇಕೆಂದರೆ, ಅವನು ಬಲವಂತದಿಂದ ಹೀಗೆಲ್ಲ ಮಾಡುತ್ತಾನೆ: ಅವನು ನಿಮ್ಮ ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಸೇವಕರನ್ನಾಗಿಯೂ ಸೈನಿಕರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಸೈನ್ಯದಲ್ಲಿಯೂ ಅಶ್ವಸೈನ್ಯದಲ್ಲಿಯೂ ಸೇರಿ ಹೋರಾಡಬೇಕಾಗುತ್ತದೆ. ನಿನ್ನ ಮಕ್ಕಳು ರಾಜನ ರಥದ ಮುಂದೆ ಓಡುವ ಬೆಂಗಾವಲಿನವರಾಗಬೇಕಾಗುತ್ತದೆ. ಅಧ್ಯಾಯವನ್ನು ನೋಡಿ |