Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:9 - ಕನ್ನಡ ಸಮಕಾಲಿಕ ಅನುವಾದ

9 ಈಗ ಅವರ ಮಾತನ್ನು ಕೇಳು. ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು, ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬುದನ್ನು ತಿಳಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟೆಂಬುದನ್ನು ಅವರಿಗೆ ತಿಳಿಸಿ, ಎಚ್ಚರಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟು ಘನವಾದುದೆಂಬುದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರವೆಷ್ಟೆಂಬದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ಜನರ ಮಾತಿಗೆ ಕಿವಿಗೊಟ್ಟು ಅವರು ಹೇಳಿದಂತೆ ಮಾಡು. ಆದರೆ ಅವರಿಗೆ ಎಚ್ಚರಿಕೆಕೊಡು. ರಾಜನಾದವನು ಜನರಿಗೆ ಏನು ಮಾಡುತ್ತಾನೆ ಎಂಬುದನ್ನು ಅವರಿಗೆ ತಿಳಿಸಿ ಹೇಳು! ರಾಜನಾದವನು ಜನರನ್ನು ಹೇಗೆ ಆಳುತ್ತಾನೆಂಬುದನ್ನೂ ಅವರಿಗೆ ತಿಳಿಸಿಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:9
10 ತಿಳಿವುಗಳ ಹೋಲಿಕೆ  

ಸಮುಯೇಲನು ರಾಜ್ಯದ ಪದ್ಧತಿಯನ್ನು ಜನರಿಗೆ ಹೇಳಿಕೊಟ್ಟು, ಒಂದು ಪುಸ್ತಕದಲ್ಲಿ ಬರೆದು, ಯೆಹೋವ ದೇವರ ಮುಂದೆ ಇಟ್ಟನು. ಆಗ ಸಮುಯೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.


ಇದಾದ ಮೇಲೆ ರಾಜಕುಮಾರನು ಜನರ ಸೊತ್ತನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆಯೊಳಗಿಂದ ಅವರನ್ನು ತಳ್ಳಬಾರದು. ನನ್ನ ಜನರು ತಮ್ಮ ತಮ್ಮ ಬಾಧ್ಯತೆಯನ್ನು ಕಳೆದುಕೊಳ್ಳಬಾರದು. ತಂದೆಯು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಪುತ್ರರಿಗೆ ಸೊತ್ತನ್ನು ಕೊಡಬೇಕು.’ ”


ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸದೆ, ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ನೀನು ಅವನಿಗೆ ಬುದ್ಧಿಹೇಳದೆ ಹೋದರೆ, ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು.


ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಘೋರ ಯುದ್ಧ ನಡೆಯುತ್ತಿತ್ತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ, ಧೈರ್ಯಶಾಲಿಯನ್ನಾದರೂ ಕಂಡರೆ, ಅಂಥವನನ್ನು ತನ್ನ ಸೈನ್ಯಕ್ಕೆ ಸೇರಿಸಿಕೊಳ್ಳುತ್ತಿದ್ದನು.


ಆ ಯಾಜಕರು ಜನರನ್ನು ನಡೆಸಿದ ವಿಧ ಏನೆಂದರೆ: ಯಾವನಾದರೂ ಬಲಿ ಅರ್ಪಿಸಿದರೆ, ಆ ಅರ್ಪಿಸಿದ ಬಲಿಯ ಮಾಂಸವನ್ನು ಬೇಯಿಸುವಾಗ, ಯಾಜಕನ ಸೇವಕನು ಮೂರು ಶೂಲವುಳ್ಳ ಆಯುಧವನ್ನು ತೆಗೆದುಕೊಂಡು ಬಂದು,


ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದ ದಿನವು ಮೊದಲುಗೊಂಡು ಈ ದಿನದವರೆಗೂ ಅವರು ನನ್ನನ್ನು ಬಿಟ್ಟು, ಅನ್ಯದೇವರುಗಳನ್ನು ಸೇವಿಸಿ, ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡುತ್ತಾರೆ.


ಸಮುಯೇಲನು ಇಸ್ರಾಯೇಲರೆಲ್ಲರಿಗೆ, “ನೀವು ನನಗೆ ಹೇಳಿದ್ದೆಲ್ಲದರಲ್ಲಿ ನಿಮ್ಮ ಮಾತು ಕೇಳಿ, ನಿಮ್ಮ ಮೇಲೆ ಒಬ್ಬ ಅರಸನನ್ನು ಇಟ್ಟೆನು.


ಏಕೆಂದರೆ ನಾನು ನಿಮ್ಮ ತಂದೆಗಳಿಗೆ, “ನನ್ನ ಮಾತನ್ನು ಕೇಳಿ,” ಎಂದು ಖಂಡಿತವಾಗಿ ಹೇಳಿದೆನು. ಅವರನ್ನು ಈಜಿಪ್ಟ್ ದೇಶದೊಳಗಿಂದ ಮೇಲೆ ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಜ್ಞಾಪಿಸುತ್ತಾ ಬಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು