Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:1 - ಕನ್ನಡ ಸಮಕಾಲಿಕ ಅನುವಾದ

1 ಬೆನ್ಯಾಮೀನನ ವಂಶದವನಾದ ಕೀಷನೆಂಬ ಒಬ್ಬ ಮನುಷ್ಯನಿದ್ದನು. ಇವನು ಅಬೀಯೇಲನ ಮಗನು, ಇವನು ಚೆರೋರನ ಮಗನು, ಇವನು ಬೆಕೋರತನ ಮಗನು, ಇವನು ಬೆನ್ಯಾಮೀನ್ಯನಾದ ಅಫೀಹನ ಮಗನು. ಇವನು ಐಶ್ವರ್ಯವಂತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೆನ್ಯಾಮೀನ್ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತ ಮತ್ತು ಪ್ರಭಾವಶಾಲಿಯಾದ ಮನುಷ್ಯನಿದ್ದನು. ಕೀಷನು ಅಬೀಯೇಲನ ಮಗ, ಅಬೀಯೇಲನು ಚೆರೋರನ ಮಗ, ಬೆಕೋರತನ ಮೊಮ್ಮಗ ಹಾಗೂ ಅಫೀಹನ ಮರಿಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬೆನ್ಯಾಮೀನ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತನಿದ್ದನು. ಇವನು ಚೆರೋರನ ಮಗನೂ ಬೆಕೋರತನ ಮೊಮ್ಮಗನೂ ಆಫೀಹನ ಮರಿಮಗನೂ ಆದ ಅಬೀಯೇಲನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೆನ್ಯಾಮೀನ್‍ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತನಿದ್ದನು. ಇವನು ಚೆರೋರನ ಮಗನೂ ಬೆಕೋರತನ ಮೊಮ್ಮಗನೂ ಅಫೀಹನ ಮರಿಮಗನೂ ಆದ ಅಬೀಯೇಲನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬೆನ್ಯಾಮೀನ್ ಕುಲದ ಕೀಷನು ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು. ಕೀಷನು ಅಬೀಯೇಲನ ಮಗ. ಅಬೀಯೇಲನು ಚೆರೋರನ ಮಗ. ಚೆರೋರನು ಬೆಕೋರತನ ಮಗ. ಬೆಕೋರತನು ಅಫೀಹನ ಮಗ. ಇವರೆಲ್ಲರು ಬೆನ್ಯಾಮೀನನ ಕುಲಕ್ಕೆ ಸೇರಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:1
9 ತಿಳಿವುಗಳ ಹೋಲಿಕೆ  

ಸೌಲನ ತಂದೆಯಾದ ಕೀಷನೂ ಅಬ್ನೇರನ ತಂದೆಯಾದ ನೇರನೂ ಅಬೀಯೇಲನ ಮಕ್ಕಳು.


ಅನಂತರ ಜನರು ಒಬ್ಬ ಅರಸನು ತಮಗೆ ಬೇಕೆಂದು ಕೇಳಿಕೊಳ್ಳಲು, ದೇವರು ಬೆನ್ಯಾಮೀನ್ ಗೋತ್ರದ ಕೀಷನ ಮಗ ಸೌಲನನ್ನು ಅವರಿಗೆ ಕೊಟ್ಟರು. ಇವನು ನಲವತ್ತು ವರ್ಷ ಆಳ್ವಿಕೆ ಮಾಡಿದನು.


ಆದರೆ ಕರ್ಮೆಲಿನಲ್ಲಿ ಸೊತ್ತುಗಳಿರುವ ಮಾವೋನಿನ ಒಬ್ಬ ಮನುಷ್ಯನಿದ್ದನು. ಅವನು ಬಹು ಸಿರಿವಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು.


ಅವನಿಗೆ ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಐನೂರು ಕತ್ತೆಗಳು ಮತ್ತು ಅನೇಕ ಕೆಲಸಗಾರರಿದ್ದರು. ಅವನು ಪೂರ್ವದೇಶದ ಜನರೆಲ್ಲರಲ್ಲಿಯೇ ಹೆಚ್ಚು ಐಶ್ವರ್ಯವುಳ್ಳವನಾಗಿದ್ದನು.


ಈ ಬರ್ಜಿಲ್ಲೈಯು ಎಂಬತ್ತು ವರ್ಷದವನಾಗಿ ಮಹಾವೃದ್ಧನಾಗಿದ್ದನು. ಅರಸನು ಮಹನಯಿಮಿನಲ್ಲಿ ವಾಸಿಸಿಸುವವರೆಗೂ ಇವನು ಅರಸನನ್ನು ಸಂರಕ್ಷಿಸಿದನು. ಏಕೆಂದರೆ ಅವನು ಬಹು ಸಿರಿವಂತ ಮನುಷ್ಯನಾಗಿದ್ದನು.


ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು.


ಶೂಷನಿನ ಅರಮನೆಯಲ್ಲಿ ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಮೀಯ ಮೊಮ್ಮಗನೂ, ಯಾಯೀರನ ಮಗನೂ ಆದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು