1 ಸಮುಯೇಲ 9:11 - ಕನ್ನಡ ಸಮಕಾಲಿಕ ಅನುವಾದ11 ಅವರು ದಿಣ್ಣೆಯನ್ನು ಹತ್ತಿ ಪಟ್ಟಣದೊಳಗೆ ಹೋಗುವಾಗ, ನೀರು ಸೇದಲು ಬರುವ ಹುಡುಗಿಯರನ್ನು ಕಂಡು, “ದರ್ಶಿಯು ಇಲ್ಲಿ ಇದ್ದಾನೋ?” ಎಂದು ಅವರನ್ನು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರಿಬ್ಬರೂ ಗುಡ್ಡವನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವುದಕ್ಕೋಸ್ಕರ ಊರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು, “ದರ್ಶಿಯು ಊರಲ್ಲಿದ್ದಾನೋ” ಎಂದು ಕೇಳಿದರು. ಅವರು, “ಇದ್ದಾನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರಿಬ್ಬರೂ ಗುಡ್ಡ ಹತ್ತಿ ದೇವಪುರುಷನಿದ್ದ ಪಟ್ಟಣವನ್ನು ಸಮೀಪಿಸಿದರು. ನೀರು ಸೇದುವುದಕ್ಕಾಗಿ ಹೊರಗೆ ಬಂದಿದ್ದ ಮಹಿಳೆಯರನ್ನು ಕಂಡು, “ದಾರ್ಶನಿಕರು ಊರಲ್ಲಿ ಇದ್ದಾರೋ?” ಎಂದು ಕೇಳಲು, ಅವರು “ಹೌದು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರಿಬ್ಬರೂ ದಿನ್ನೆಯನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವದಕ್ಕೋಸ್ಕರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು - ದರ್ಶಿಯು ಊರಲ್ಲಿದ್ದಾನೋ ಎಂದು ಕೇಳಲು ಅವರು - ಇದ್ದಾನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸೌಲನು ಮತ್ತು ಆ ಸೇವಕನು ಬೆಟ್ಟದ ಮೇಲೆ ನಡೆಯುತ್ತಾ ಆ ಪಟ್ಟಣಕ್ಕೆ ಹೋದರು. ಆ ದಾರಿಯಲ್ಲಿ ಅವರು ಕೆಲವು ಸ್ತ್ರೀಯರನ್ನು ಸಂಧಿಸಿದರು. ಆ ಸ್ತ್ರೀಯರು ನೀರನ್ನು ತರಲು ಹೋಗುತ್ತಿದ್ದರು. ಸೌಲನು ಮತ್ತು ಆ ಸೇವಕನು, “ದರ್ಶಿಯು ಇಲ್ಲಿರುವನೇ?” ಎಂದು ಆ ಯುವತಿಯರನ್ನು ಕೇಳಿದರು. ಅಧ್ಯಾಯವನ್ನು ನೋಡಿ |