Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:6 - ಕನ್ನಡ ಸಮಕಾಲಿಕ ಅನುವಾದ

6 ಅದಕ್ಕವನು, “ಇಗೋ, ಈ ಪಟ್ಟಣದಲ್ಲಿ ದೇವರ ಮನುಷ್ಯನು ಒಬ್ಬನಿದ್ದಾನೆ, ಅವನು ಘನವುಳ್ಳ ಮನುಷ್ಯನು. ಅವನು ಹೇಳುವುದೆಲ್ಲಾ ನಿಶ್ಚಯವಾಗಿ ಆಗುವುದು. ಈಗ ನಾವು ಅಲ್ಲಿಗೆ ಹೋಗೋಣ. ಒಂದು ವೇಳೆ ಅವನು ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ತಿಳಿಸುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೈವಪುರುಷ ಇದ್ದಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗಬೇಕಾದ ಮಾರ್ಗವನ್ನು ತಿಳಿಸುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಆ ಸೇವಕನು, “ಈ ಪಟ್ಟಣದಲ್ಲಿ ಒಬ್ಬ ದೇವರ ಮನುಷ್ಯನಿದ್ದಾನೆ. ಜನರು ಅವನನ್ನು ಗೌರವಿಸುತ್ತಾರೆ. ಅವನು ಹೇಳುವ ವಿಷಯಗಳೆಲ್ಲ ನಿಜವಾಗುತ್ತವೆ. ಆದ್ದರಿಂದ ಈ ಪಟ್ಟಣಕ್ಕೆ ಹೋಗೋಣ ಬಹುಶಃ ನಾವು ಮುಂದೆ ಎಲ್ಲಿಗೆ ಹೋಗಬೇಕೆಂಬುದನ್ನು ಈ ದೇವರ ಮನುಷ್ಯನು ತಿಳಿಸಬಹುದು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:6
16 ತಿಳಿವುಗಳ ಹೋಲಿಕೆ  

ದೇವರ ಮನುಷ್ಯನಾದ ಮೋಶೆಯು ಮರಣ ಹೊಂದುವದಕ್ಕಿಂತ ಮುಂಚೆ ಇಸ್ರಾಯೇಲರಿಗೆ ಕೊಟ್ಟ ಆಶೀರ್ವಾದ:


ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ, ಯೆಹೂದದಿಂದ ಬೇತೇಲಿಗೆ ಯೆಹೋವ ದೇವರ ಮಾತಿನಂತೆ ಒಬ್ಬ ದೇವರ ಮನುಷ್ಯ ಬಂದನು.


ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.


ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಅತ್ಯಧಿಕವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.


ನಂಬುವವರಾದ ನಿಮ್ಮೊಂದಿಗೆ ನಾವು ಎಷ್ಟೋ ಪವಿತ್ರರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿ.


ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ತನ್ನ ಸೇವಕನ ಮಾತುಗಳನ್ನು ಸ್ಥಾಪಿಸುವವನು, ಮತ್ತು ತನ್ನ ದೂತರ ಆಲೋಚನೆಯನ್ನು ಪೂರೈಸುವವನು. “ಯೆರೂಸಲೇಮಿಗೆ, ‘ನೀನು ನಿವಾಸವಾಗುವೆ,’ ಯೆಹೂದ ಪಟ್ಟಣಗಳಿಗೆ, ‘ಅವು ಪುನಃ ಕಟ್ಟಲಾಗುವುದು,’ ಮತ್ತು ಅದರ ಹಾಳು ಸ್ಥಳಗಳಿಗೆ, ‘ನಾನು ಪುನಃಸ್ಥಾಪಿಸುವೆನು,’ ಎಂದು ಹೇಳುವವನು,


ದೇವರ ಮನುಷ್ಯನು, “ಅದು ಎಲ್ಲಿ ಬಿತ್ತು?” ಎಂದನು. ಅವನು ಎಲೀಷನಿಗೆ ಸ್ಥಳವನ್ನು ತೋರಿಸಿದ ತರುವಾಯ, ಎಲೀಷನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕಬ್ಬಿಣವು ತೇಲಿತು.


ದೇವರ ಮನುಷ್ಯನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ನಿನಗೆ ಹೇಳುವದೇನೆಂದರೆ: ‘ನಿನ್ನ ತಂದೆಯ ಮನೆಯವರು ಈಜಿಪ್ಟಿನಿಂದ ಫರೋಹನ ಮನೆಯೊಳಗೆ ಇರುವಾಗ, ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ?


“ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ, ‘ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರೇ, ನೀವು ಬಯಸಿದರೆ, ದಯವಿಟ್ಟು ನಾನು ಬಂದ ಪ್ರಯಾಣಕ್ಕೆ ನೀವು ಸಫಲ ಮಾಡಿದ್ದಾದರೆ,


ಅದಕ್ಕೆ ಆ ಸೇವಕನು ಸೌಲನಿಗೆ ಉತ್ತರವಾಗಿ, “ಇಗೋ, ನನ್ನ ಕೈಯಲ್ಲಿ ಒಂದು ಪಾವಲಿ ಬೆಳ್ಳಿನಾಣ್ಯ ಇದೆ, ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು,” ಎಂದನು.


ಅರಸನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರುಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳು ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ ನಿನ್ನ ಸಂಗಡ ಹೋಗಲಿ.


ಇಸ್ರಾಯೇಲಿನ ಅರಸನು ತನ್ನ ವಸ್ತ್ರಗಳನ್ನು ಹರಿದುಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ, “ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ನಾಮಾನನು ತಿಳಿದುಕೊಳ್ಳುವಂತೆ ಅವನು ನನ್ನ ಬಳಿಗೆ ಬರಲಿ,” ಎಂದು ಅರಸನಿಗೆ ಹೇಳಿ ಕಳುಹಿಸಿದನು.


ಯಾವನು ಯೆಹೋವ ದೇವರಿಗೆ ಭಯಪಡುವನೋ, ಅಂಥವನಿಗೆ ಅವರು ಆಯ್ದುಕೊಳ್ಳತಕ್ಕ ಮಾರ್ಗವನ್ನು ಬೋಧಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು