Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಸೌಲನು ತನ್ನ ಸೇವಕನಿಗೆ, “ನಾವು ಆ ಮನುಷ್ಯನ ಬಳಿಗೆ ಹೋದರೆ, ಏನು ತೆಗೆದುಕೊಂಡು ಹೋಗೋಣ? ನಮ್ಮ ಚೀಲಗಳಲ್ಲಿ ಇರುವ ರೊಟ್ಟಿ ಮುಗಿದು ಹೋಯಿತು. ದೇವರ ಮನುಷ್ಯನ ಬಳಿಗೆ ತೆಗೆದುಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ. ನಮ್ಮ ಬಳಿಯಲ್ಲಿ ಏನಿದೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?” ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿ ಮುಗಿದುಹೋಯಿತು. ಆ ದೈವಪುರುಷನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿ ಇಲ್ಲವಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದಕ್ಕೆ ಸೌಲನು - ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು ಎನ್ನಲು ಆಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೌಲನು ತನ್ನ ಸೇವಕನಿಗೆ, “ನಾವು ಪಟ್ಟಣದೊಳಗೆ ಹೋಗೋಣ, ಆದರೆ ಆ ಮನುಷ್ಯನಿಗೆ ಕೊಡಲು ನಮ್ಮಲ್ಲಿ ಏನೂ ಇಲ್ಲ. ನಮ್ಮ ಚೀಲದಲ್ಲಿದ್ದ ಆಹಾರವೆಲ್ಲ ಮುಗಿದಿದೆ. ಆ ದೇವರ ಮನುಷ್ಯನಿಗೆ ನೀಡಲು ನಮ್ಮಲ್ಲಿ ಕಾಣಿಕೆಯೂ ಇಲ್ಲ. ಹೀಗಾಗಿ ನಾವು ಅವನಿಗೆ ಏನು ಕೊಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:7
10 ತಿಳಿವುಗಳ ಹೋಲಿಕೆ  

ಆಗ ಅರಸನು ಹಜಾಯೇಲನಿಗೆ, “ನೀನು ಕೈಯಲ್ಲಿ ಕಾಣಿಕೆಯನ್ನು ತೆಗೆದುಕೊಂಡುಹೋಗಿ ದೇವರ ಮನುಷ್ಯನನ್ನು ಎದುರುಗೊಂಡು, ಈ ವ್ಯಾಧಿಯಿಂದ ನಾನು ಗುಣವಾಗುವೆನೋ? ಎಂದು ಅವನಿಂದ ಯೆಹೋವ ದೇವರನ್ನು ವಿಚಾರಿಸು,” ಎಂದನು.


ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ, ಭಕ್ಷ್ಯಗಳನ್ನೂ, ಒಂದು ಮಡಕೆ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವುದನ್ನು ನಿನಗೆ ತಿಳಿಸುವನು,” ಎಂದನು.


ಬಾಳ್ ಶಾಲಿಷಾ ಊರಿನಿಂದ ಒಬ್ಬನು ದೇವರ ಮನುಷ್ಯನಿಗೆ ಪ್ರಥಮ ಫಲವಾದ ಜವೆಗೋಧಿಯ ಇಪ್ಪತ್ತು ರೊಟ್ಟಿಗಳನ್ನೂ ಒಂದು ಚೀಲ ತುಂಬಿದ ತೆನೆಗಳನ್ನೂ ತೆಗೆದುಕೊಂಡು ಬಂದನು. ಆಗ ಎಲೀಷನು, “ಜನರಿಗೆ ಕೊಡು ಅವರು ತಿನ್ನಲಿ,” ಎಂದನು.


ಆಗ ನಾಮಾನನೂ, ಅವನ ಸಮಸ್ತ ಸೈನ್ಯವೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ಬಂದು ನಿಂತು, “ಇಸ್ರಾಯೇಲಿನಲ್ಲಿರುವ ದೇವರ ಹೊರತು ಭೂಮಿಯಲ್ಲೆಲ್ಲೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು. ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತೆಗೆದುಕೋ,” ಎಂದನು.


ಅರಾಮ್ಯರ ಅರಸನು, “ನೀನು ಹೋಗಿ ಬಾ. ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು,” ಎಂದನು. ಅದರಂತೆ ನಾಮಾನನು 340 ಕಿಲೋಗ್ರಾಂ ಬೆಳ್ಳಿ, 64 ಕಿಲೋಗ್ರಾಂ ಬಂಗಾರ, ಹತ್ತು ಜೊತೆ ಬಟ್ಟೆಗಳನ್ನೂ ತೆಗೆದುಕೊಂಡು ಹೋದನು.


ನಾನು ನಿಮ್ಮ ಬಳಿಗೆ ನನ್ನ ಕಾಣಿಕೆಯನ್ನು ತಂದು, ನಿಮ್ಮ ಮುಂದೆ ಇಡುವವರೆಗೆ ನೀವು ಈ ಸ್ಥಳವನ್ನು ಬಿಟ್ಟುಹೋಗಬಾರದು,” ಎಂದು ಬೇಡಿಕೊಂಡನು. ಅದಕ್ಕೆ ಯೆಹೋವ ದೇವರು, “ನೀನು ತಿರುಗಿ ಬರುವ ತನಕ ನಾನು ಕಾದಿರುವೆನು,” ಎಂದರು.


ಅರಸನು ದೇವರ ಮನುಷ್ಯನಿಗೆ, “ನೀನು ನನ್ನ ಮನೆಗೆ ಬಂದು ಊಟಮಾಡಿ ವಿಶ್ರಮಿಸಿಕೋ, ನಾನು ನಿನಗೆ ಬಹುಮಾನ ಕೊಡುವೆನು,” ಎಂದನು.


ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮವಾದವುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು, ಎಲೀಷನನ್ನು ಎದುರುಗೊಳ್ಳಲು ಹೋಗಿ, ಅವನ ಮುಂದೆ ಬಂದು ನಿಂತು, “ಅರಾಮಿನ ಅರಸನಾಗಿರುವ ನಿನ್ನ ಮಗ ಬೆನ್ಹದದನು, ‘ಈ ವ್ಯಾಧಿಯಿಂದ ಬದುಕುವೆನೋ?’ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ,” ಎಂದನು.


ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು