Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:14 - ಕನ್ನಡ ಸಮಕಾಲಿಕ ಅನುವಾದ

14 ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ, ಅವರ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಮೌಲ್ಯವುಳ್ಳದ್ದಾಗಿರಲಿ,” ಎಂದು ಹೇಳಿ ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಕಾಶದಿಂದ ಬೆಂಕಿಬಿದ್ದು ನನಗೆ ಮುಂದೆ ಬಂದ ಆ ಇಬ್ಬರು ಪಂಚಾಶದಧಿಪತಿಗಳನ್ನೂ ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲವೆ? ನನ್ನ ಪ್ರಾಣವಾದರೂ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದೆಂದು ಮಾನ್ಯವಾಗಲಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಕಾಶದಿಂದ ಬೆಂಕಿಬಿದ್ದು ಮುಂಚೆ ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ; ನನ್ನ ಪ್ರಾಣವಾದರೋ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪರಲೋಕದಿಂದ ಕೆಳಗಿಳಿದು ಬಂದ ಬೆಂಕಿಯು ಮೊದಲ ಇಬ್ಬರು ಸೇನಾಧಿಪತಿಗಳನ್ನೂ ಅವರ ಐವತ್ತು ಜನರನ್ನೂ ನಾಶಗೊಳಿಸಿತು. ಆದರೆ ಈಗ ನಮ್ಮ ಮೇಲೆ ಕನಿಕರ ತೋರಿ ಜೀವಿಸಲು ಅವಕಾಶ ಮಾಡಿಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:14
11 ತಿಳಿವುಗಳ ಹೋಲಿಕೆ  

ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ಏಕೆಂದರೆ ವೇಶ್ಯೆಯನ್ನು ಊಟದಿಂದ ಕೊಂಡುಕೊಳ್ಳಬಹುದು, ಆದರೆ ವ್ಯಭಿಚಾರಿಣಿ ಅಮೂಲ್ಯ ಜೀವವನ್ನೇ ಬೇಟೆಯಾಡುವಳು.


ದೇವರ ಭಕ್ತರ ಮರಣವು ಯೆಹೋವ ದೇವರ ದೃಷ್ಟಿಯಲ್ಲಿ ಅಮೂಲ್ಯವಾಗಿದೆ.


ಮೋಸ ದಬ್ಬಾಳಿಕೆಯಿಂದ ಜನರನ್ನು ಬಿಡುಗಡೆ ಮಾಡುವನು. ಜನರ ಜೀವವು ಆತನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.


ಆತ್ಮದ ವಿಮೋಚನೆಯು ಬಹು ಬೆಲೆಯುಳ್ಳದ್ದು, ಅದಕ್ಕೆ ಸಾಕಷ್ಟು ಬೆಲೆಯನ್ನು ಕಟ್ಟಲು ಯಾರಿಗೂ ಸಾಧ್ಯವಿಲ್ಲ.


ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ, ಹಾಗೆಯೇ ನನ್ನ ಪ್ರಾಣವು ಯೆಹೋವ ದೇವರ ದೃಷ್ಟಿಗೆ ದೊಡ್ಡದಾಗಿರಲಿ. ಅವರು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ,” ಎಂದನು.


ಆಗ ಸೌಲನು, “ನಾನು ಪಾಪಮಾಡಿದೆನು. ನನ್ನ ಮಗನಾದ ದಾವೀದನೇ ತಿರುಗಿ ಬಾ. ಏಕೆಂದರೆ ನನ್ನ ಪ್ರಾಣ ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡು ಮಾಡೆನು. ಇದುವರೆಗೆ ನಾನು ಮಾಡಿದ್ದು ಹುಚ್ಚುತನವೂ, ದೊಡ್ಡ ತಪ್ಪೂ ಆಗಿದೆ,” ಎಂದನು.


ತಿರುಗಿ ಅರಸನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವನನ್ನೂ, ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯವನು ಬಂದು ಎಲೀಯನ ಮುಂದೆ ತನ್ನ ಮೊಣಕಾಲೂರಿಕೊಂಡು ಅವನಿಗೆ, “ದೇವರ ಮನುಷ್ಯನೇ, ನೀನು ದಯಮಾಡು, ನನ್ನ ಪ್ರಾಣವೂ, ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಮೌಲ್ಯವುಳ್ಳದ್ದಾಗಿರಲಿ.


ಆಗ ಯೆಹೋವ ದೇವರ ದೂತನು ಎಲೀಯನಿಗೆ, “ಅವನ ಸಂಗಡ ಇಳಿದು ಹೋಗು, ಅವನಿಗೆ ಭಯಪಡಬೇಡ,” ಎಂದನು. ಆದ್ದರಿಂದ ಎಲೀಯನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು