Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:3 - ಕನ್ನಡ ಸಮಕಾಲಿಕ ಅನುವಾದ

3 ಆದರೆ ಯೆಹೋವ ದೇವರ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ, ‘ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀವು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಹೋಗುತ್ತಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೆ ಸರ್ವೇಶ್ವರ ಸ್ವಾಮಿಯ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರಿಯದ ಅರಸನ ಆ ಸೇವಕರನ್ನು ಭೇಟಿಯಾಗು. ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ - ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ - ನೀವು ಎಕ್ರೋನಿನ ದೇವರಾದ ಬಾಳ್ವೆಬೂಬನನ್ನು ವಿಚಾರಿಸುವದಕ್ಕೆ ಹೋಗುವದೇನು? ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಯೆಹೋವನ ದೂತನೊಬ್ಬನು ತಿಷ್ಬೀಯನಾದ ಎಲೀಯನಿಗೆ, “ರಾಜನಾದ ಅಹಜ್ಯನು ಸಮಾರ್ಯದಿಂದ ಕೆಲವು ಸಂದೇಶಕರನ್ನು ಕಳುಹಿಸಿದ್ದಾನೆ. ನೀನು ಹೋಗಿ ಅವರನ್ನು ಭೇಟಿಯಾಗಿ ಅವರಿಗೆ, ‘ಇಸ್ರೇಲಿನಲ್ಲಿಯೂ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ ಪ್ರಶ್ನೆಗಳನ್ನು ಕೇಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:3
21 ತಿಳಿವುಗಳ ಹೋಲಿಕೆ  

ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.


“ನಿರುಪಯೋಗ ಮೂರ್ತಿಗಳಿಗೆ ಅಂಟಿಕೊಳ್ಳುವವರು, ಅವರದಾಗುವ ದೇವರ ಪ್ರೀತಿಯನ್ನು ಕಳೆದುಕೊಳ್ಳುವರು.


ಯೆಹೂದ ಪ್ರದೇಶದಲ್ಲಿ ದೇವರು ಸುಪ್ರಸಿದ್ಧರಾಗಿದ್ದಾರೆ. ಇಸ್ರಾಯೇಲಿನಲ್ಲಿ ದೇವರ ಹೆಸರು ಪ್ರಖ್ಯಾತವಾಗಿದೆ.


ದೇವದೂತನೊಬ್ಬನು ಫಿಲಿಪ್ಪನಿಗೆ, “ದಕ್ಷಿಣ ದಿಕ್ಕಿಗೆ ಹೋಗುವ ಮಾರ್ಗದಲ್ಲಿ ಹೋಗು, ಅದು ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದು ಹೇಳಿದನು.


ಯೆರೂಸಲೇಮಿನಿಂದ ಬಂದ ನಿಯಮ ಬೋಧಕರು, “ಈತನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ! ದೆವ್ವಗಳ ಅಧಿಪತಿಯ ಸಹಾಯದಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.


ಆಗ ನಾಮಾನನೂ, ಅವನ ಸಮಸ್ತ ಸೈನ್ಯವೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ಬಂದು ನಿಂತು, “ಇಸ್ರಾಯೇಲಿನಲ್ಲಿರುವ ದೇವರ ಹೊರತು ಭೂಮಿಯಲ್ಲೆಲ್ಲೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು. ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತೆಗೆದುಕೋ,” ಎಂದನು.


ಅದಕ್ಕವರು, “ಅವನು ಕಂಬಳಿಯನ್ನು ಹೊದ್ದುಕೊಂಡಿದ್ದನು; ಅವನ ಸೊಂಟಕ್ಕೆ ಸುತ್ತಲೂ ತೊಗಲಿನ ನಡುಕಟ್ಟು ಇತ್ತು,” ಎಂದರು. ಆಗ ಅರಸನು, “ಅವನು ತಿಷ್ಬೀಯನಾದ ಎಲೀಯನೇ ಆಗಿರಬೇಕು,” ಎಂದು ಹೇಳಿದನು.


ಅವರು ಅರಸನಿಗೆ, “ಒಬ್ಬ ಮನುಷ್ಯನು ನಮಗೆ ಎದುರಾಗಿ ಬಂದು, ‘ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿ ಹೋಗಿ, ಯೆಹೋವ ದೇವರು ಹೇಳುವುದು ಏನೆಂದರೆ: ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಜನರನ್ನು ಕಳುಹಿಸಿರುತ್ತೀ? ಇದರ ನಿಮಿತ್ತ, ನೀನು ಏರಿದ ಮಂಚದಿಂದ ಇಳಿಯದೆ, ನಿಶ್ಚಯವಾಗಿ ಸಾಯುವೆ,’ ಎಂಬುದಾಗಿ ಅವನಿಗೆ ಹೇಳಿರಿ, ಎಂದು ತಿಳಿಸಿದನು,” ಎಂದರು.


ಅಹಜ್ಯನು ಸಮಾರ್ಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ಎಕ್ರೋನಿನ ದೇವರಾದ ‘ಬಾಳ್ ಜೆಬೂಬನ’ ಸನ್ನಿಧಿಗೆ ಹೋಗಿ, ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ? ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು.


ಆಗ ಯೆಹೋವ ದೇವರ ವಾಕ್ಯವು ತಿಷ್ಬೀಯನಾದ ಎಲೀಯನಿಗೆ ಉಂಟಾಗಿ,


ತಿರುಗಿ ಎರಡನೆಯ ಸಾರಿ ಯೆಹೋವ ದೇವರ ದೂತನು ಬಂದು, ಅವನನ್ನು ತಟ್ಟಿ ಅವನಿಗೆ, “ನೀನೆದ್ದು ತಿನ್ನು, ಏಕೆಂದರೆ ನೀನು ಬಹುದೂರ ಪ್ರಯಾಣ ಮಾಡಬೇಕಾಗಿದೆ,” ಎಂದನು.


ಅವನು ಜಾಲೀಗಿಡದ ಕೆಳಗೆ ಮಲಗಿಕೊಂಡು ನಿದ್ರೆಮಾಡಿದನು. ಆಗ ಒಬ್ಬ ದೂತನು ಅವನನ್ನು ತಟ್ಟಿ, ಅವನಿಗೆ, “ಎದ್ದು ತಿನ್ನು,” ಎಂದನು.


ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆಯಲ್ಲಿ ಪ್ರವಾದಿಯಾದ ಎಲೀಯನು ಬಲಿಪೀಠದ ಸಮೀಪಕ್ಕೆ ಬಂದು, “ಅಬ್ರಹಾಮನಿಗೂ, ಇಸಾಕನಿಗೂ, ಇಸ್ರಾಯೇಲಿಗೂ ದೇವರಾದ ಯೆಹೋವ ದೇವರೇ, ಇಸ್ರಾಯೇಲಿನಲ್ಲಿ ನೀವೇ ದೇವರೆಂದೂ, ನಾನು ನಿಮ್ಮ ಸೇವಕನೆಂದೂ, ನಾನು ಈ ಕಾರ್ಯಗಳನ್ನೆಲ್ಲಾ ನಿಮ್ಮ ಮಾತಿನ ಹಾಗೆಯೇ ಮಾಡಿದ್ದೇನೆಂದೂ ಇಂದು ತೋರಿಸಿಕೊಡಿರಿ.


ಅನೇಕ ದಿವಸಗಳಾದ ತರುವಾಯ, ಮೂರನೆಯ ವರ್ಷದಲ್ಲಿ, ಯೆಹೋವ ದೇವರ ವಾಕ್ಯವು ಎಲೀಯನಿಗೆ ಬಂದಿತು, “ನೀನು ಹೋಗಿ ಅಹಾಬನಿಗೆ ನಿನ್ನನ್ನು ಪ್ರಕಟಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು,” ಎಂದು ಹೇಳಿದರು.


ಯೆಹೋವ ದೇವರು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವರು; ನಾನು ನಿನ್ನನ್ನು ಹೊಡೆದುಬಿಟ್ಟು, ನಿನ್ನ ತಲೆಯನ್ನು ನಿನ್ನಿಂದ ತೆಗೆದುಹಾಕಿ, ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲರಲ್ಲಿ ದೇವರು ಇದ್ದಾರೆಂದು ಭೂಲೋಕದವರೆಲ್ಲರೂ ತಿಳಿಯುವರು.


ಇಸ್ರಾಯೇಲಿನ ಅರಸನು ತನ್ನ ವಸ್ತ್ರಗಳನ್ನು ಹರಿದುಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ, “ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ನಾಮಾನನು ತಿಳಿದುಕೊಳ್ಳುವಂತೆ ಅವನು ನನ್ನ ಬಳಿಗೆ ಬರಲಿ,” ಎಂದು ಅರಸನಿಗೆ ಹೇಳಿ ಕಳುಹಿಸಿದನು.


ಏಕೆಂದರೆ ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ, ನನ್ನ ನ್ಯಾಯಗಳನ್ನೂ ಕೈಗೊಳ್ಳುವುದಕ್ಕೂ, ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡುವುದಕ್ಕೂ, ಸೊಲೊಮೋನನೂ ಅವನ ಮನೆಯವರೂ ನನ್ನ ಮಾರ್ಗಗಳಲ್ಲಿ ನಡೆಯದೆ, ನನ್ನನ್ನು ಬಿಟ್ಟು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಮೋವಾಬ್ಯರ ದೇವರಾದ ಕೆಮೋಷನ್ನೂ, ಅಮ್ಮೋನಿಯರ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.


ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು