2 ಅರಸುಗಳು 10:13 - ಕನ್ನಡ ಸಮಕಾಲಿಕ ಅನುವಾದ13 ಯೆಹೂದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದನು. ಅದಕ್ಕವರು, “ನಾವು ಅಹಜ್ಯನ ಸಹೋದರರು. ಅರಸನ ಮಕ್ಕಳನ್ನೂ, ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತಿದ್ದೇವೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೇಹುವು ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು. ರಾಜಪುತ್ರರನ್ನೂ, ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ” ಎಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು; ರಾಜಪುತ್ರರನ್ನೂ ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕಾಗಿ ಇಲ್ಲಿಗೆ ಬಂದಿದ್ದೇವೆ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರನ್ನು - ನೀವು ಯಾರು ಎಂದು ಕೇಳಿದನು. ಅದಕ್ಕೆ ಅವರು - ನಾವು ಅಹಜ್ಯನ ಸಹೋದರರು; ರಾಜಪುತ್ರರನ್ನೂ ರಾಜಮಾತೆಯ ಮಕ್ಕಳನ್ನೂ ವಂದಿಸುವದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೇಹು ಯೆಹೂದದ ರಾಜನಾದ ಅಹಜ್ಯನ ಬಂಧುಗಳನ್ನು ಭೇಟಿಮಾಡಿ ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅವರು, “ನಾವು ಯೆಹೂದದ ರಾಜನಾದ ಅಹಜ್ಯನ ಬಂಧುಗಳು. ನಾವು ರಾಜನ ಮಕ್ಕಳನ್ನು ಮತ್ತು ರಾಜಮಾತೆಯ ಮಕ್ಕಳನ್ನು ನೋಡಲು ಬಂದಿದ್ದೇವೆ” ಎಂದರು. ಅಧ್ಯಾಯವನ್ನು ನೋಡಿ |