2 ಅರಸುಗಳು 10:14 - ಕನ್ನಡ ಸಮಕಾಲಿಕ ಅನುವಾದ14 ಆಗ ಅವನು, “ಅವರನ್ನು ಜೀವದಿಂದ ಹಿಡಿಯಿರಿ,” ಎಂದು ಹೇಳಿದ್ದರಿಂದ ಕುರುಬರು ಇವರನ್ನು ಜೀವದಿಂದ ಹಿಡಿದು, ಉಣ್ಣೆ ಕತ್ತರಿಸುವ ಮನೆಯ ಬಾವಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನಾದರೂ ಉಳಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಜೀವಸಹಿತ ಹಿಡಿಯಿರಿ” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ಕೊಂದು, ಉಣ್ಣೆ ಕತ್ತರಿಸುವ ಮನೆಯ ಬಾವಿಯಲ್ಲಿ ಹಾಕಿಬಿಟ್ಟರು. ಅವರು ನಲ್ವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ತಪ್ಪಿಸಿಕೊಳ್ಳಲು ಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಸಜೀವಿಗಳಾಗಿ ಹಿಡಿಯಿರಿ,” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ವಧಿಸಿ ಆ ಛತ್ರದ ಬಾವಿಯಲ್ಲಿ ಹಾಕಿದರು. ಅವರು ನಾಲ್ವತ್ತೆರಡು ಮಂದಿಯಿದ್ದರು; ಅವರಲ್ಲಿ ಒಬ್ಬನನ್ನೂ ಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಯೇಹುವು ತನ್ನ ಸೇವಕರಿಗೆ - ಅವರನ್ನು ಸಜೀವಿಗಳಾಗಿ ಹಿಡಿಯಿರಿ ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ವಧಿಸಿ ಆ ಛತ್ರದ ಬಾವಿಯಲ್ಲಿ ಹಾಕಿದರು. ಅವರು ನಾಲ್ವತ್ತೆರಡು ಮಂದಿಯಿದ್ದರು; ಅವರಲ್ಲಿ ಒಬ್ಬನನ್ನೂ ಬಿಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ಯೇಹುವು ತನ್ನ ಜನರಿಗೆ, “ಅವರನ್ನು ಜೀವಸಹಿತ ಹಿಡಿದು ತನ್ನಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನ ಬಂಧುಗಳನ್ನು ಜೀವಸಹಿತ ಹಿಡಿದು ತಂದರು. ಅಲ್ಲಿ ನಲವತ್ತೆರಡು ಮಂದಿ ಜನರಿದ್ದರು. ಯೇಹು ಬೆತ್‌ಎಕೇಡ್‌ನ ಬಾವಿಯ ಹತ್ತಿರ ಅವರನ್ನು ಕೊಂದುಹಾಕಿದನು. ಯೇಹುವು ಯಾರನ್ನೂ ಜೀವಸಹಿತ ಉಳಿಸಲಿಲ್ಲ. ಅಧ್ಯಾಯವನ್ನು ನೋಡಿ |
ಆಗ ಯೇಹುವು ಅವರಿಗೆ ಎರಡನೆಯ ಸಾರಿ ಪತ್ರವನ್ನು ಬರೆದು, “ನೀವು ನನ್ನವರಾಗಿದ್ದು ನನ್ನ ಮಾತು ಕೇಳುವವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ಇಜ್ರೆಯೇಲ್ ಪಟ್ಟಣಕ್ಕೆ ನಿಮ್ಮ ಯಜಮಾನನ ಪುತ್ರರ ತಲೆಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದನು. ಆದರೆ ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮನುಷ್ಯರು ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು. ಅವರು ಅವರನ್ನು ಪೋಷಿಸುತ್ತಿದ್ದರು.
ಯೇಹುವು ಅಲ್ಲಿಂದ ಹೋಗಿ, ತನ್ನನ್ನು ಎದುರುಗೊಳ್ಳಲು ಬಂದ ರೇಕಾಬನ ಮಗ ಯೆಹೋನಾದಾಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ, “ನನ್ನ ಹೃದಯವು ನಿನ್ನ ಹೃದಯದ ಸಂಗಡ ಇರುವ ಹಾಗೆ ನಿನ್ನ ಹೃದಯವು ಯಥಾರ್ಥವಾಗಿ ಇದೆಯೋ?” ಎಂದನು. ಯೆಹೋನಾದಾಬನು, “ಇದೆ,” ಎಂದನು. “ಹಾಗಾದರೆ ನಿನ್ನ ಕೈ ಕೊಡು,” ಎಂದನು. ಇವನು ತನ್ನ ಕೈ ಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಹತ್ತಿಸಿಕೊಂಡು ಅವನಿಗೆ,