2 ಅರಸುಗಳು 10:19 - ಕನ್ನಡ ಸಮಕಾಲಿಕ ಅನುವಾದ19 ಆದ್ದರಿಂದ ಬಾಳನ ಸಮಸ್ತ ಪ್ರವಾದಿಗಳನ್ನೂ, ಅವನ ಸಮಸ್ತ ಸೇವಕರನ್ನೂ, ಅವನ ಸಮಸ್ತ ಯಾಜಕರನ್ನೂ ನನ್ನ ಬಳಿಗೆ ಕರೆಯಿರಿ. ಒಬ್ಬನೂ ಬಾರದೆ ಇರಕೂಡದು. ನಾನು ಬಾಳನಿಗೆ ಮಹಾಬಲಿ ಕೊಡಬೇಕಾಗಿದೆ. ಯಾವನಾದರೂ ಬಾರದೆ ಹೋದರೆ ಅವನು ಬದುಕನು,” ಎಂದನು. ಏಕೆಂದರೆ ಯೇಹುವು ಬಾಳನನ್ನು ಸೇವಿಸುವವರನ್ನು ನಾಶಮಾಡುವಂತೆ ಇದನ್ನು ತಂತ್ರದಿಂದ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದುದರಿಂದ, ನೀವು ಬಾಳ್ ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ, ಭಕ್ತರನ್ನೂ, ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳ್ ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ ಬಾರದಿರಕೂಡದು, ಬಾರದವನು ಸಾಯಬೇಕು” ಎಂದು ಹೇಳಿದನು. ಯೇಹುವು ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದುದರಿಂದ ನೀವು ಬಾಳ್ ದೇವತೆಯ ಎಲ್ಲಾ ಪ್ರವಾದಿಗಳನ್ನೂ ಭಕ್ತರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿ; ನಾನು ಬಾಳ್ ದೇವತೆಗಾಗಿ ಮಹಾಬಲಿಯನ್ನು ಸಮರ್ಪಿಸಬೇಕೆಂದಿರುತ್ತೇನೆ. ಆದುದರಿಂದ ಅವರಲ್ಲಿ ಒಬ್ಬನೂ ಬಾರದಿರಕೂಡದು, ಬಾರದವನು ಸಾಯಬೇಕು,” ಎಂದು ಹೇಳಿದನು. ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದದರಿಂದ ನೀವು ಬಾಳನ ಎಲ್ಲಾ ಪ್ರವಾದಿಗಳನ್ನೂ ಭಕ್ತರನ್ನೂ ಯಾಜಕರನ್ನೂ ನನ್ನ ಬಳಿಗೆ ಕರಕೊಂಡು ಬನ್ನಿರಿ; ನಾನು ಬಾಳನಿಗೋಸ್ಕರ ಮಹಾಯಜ್ಞವನ್ನು ಸಮರ್ಪಿಸಬೇಕೆಂದಿರುತ್ತೇನಾದದರಿಂದ ಅವರಲ್ಲಿ ಒಬ್ಬನೂ ಬಾರದಿರಕೂಡದು; ಬಾರದವನು ಸಾಯಬೇಕು ಎಂದು ಹೇಳಿದನು. ಅವನು ಬಾಳನ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಬಾಳನ ಎಲ್ಲಾ ಯಾಜಕರನ್ನೂ ಪ್ರವಾದಿಗಳನ್ನೂ ಕರೆಯಿರಿ. ಬಾಳನನ್ನು ಆರಾಧಿಸುವ ಜನರೆಲ್ಲರನ್ನೂ ಒಟ್ಟಾಗಿ ಕರೆಯಿರಿ. ಯಾರೂ ಈ ಸಭೆಯಿಂದ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ. ನಾನು ಬಾಳನಿಗೆ ಮಹಾಯಜ್ಞವನ್ನು ಅರ್ಪಿಸಬೇಕೆಂದಿದ್ದೇನೆ. ಈ ಸಭೆಗೆ ಯಾರಾದರೂ ಬಾರದೆ ಇದ್ದರೆ ಅವರನ್ನು ನಾನು ಕೊಂದುಹಾಕುತ್ತೇನೆ!” ಎಂದು ಹೇಳಿದನು. ಆದರೆ ಅದು ಯೇಹುವಿನ ತಂತ್ರವಾಗಿತ್ತು. ಬಾಳನ ಭಕ್ತರನ್ನು ನಾಶಪಡಿಸಬೇಕೆಂಬುದೇ ಅವನ ಅಪೇಕ್ಷೆಯಾಗಿತ್ತು. ಅಧ್ಯಾಯವನ್ನು ನೋಡಿ |