2 ಅರಸುಗಳು 10:25 - ಕನ್ನಡ ಸಮಕಾಲಿಕ ಅನುವಾದ25 ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ, ಯೇಹುವು ಕಾವಲುಗಾರರಿಗೂ, ಅಧಿಪತಿಗಳಿಗೂ, “ನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ,” ಎಂದನು. ಹಾಗೆಯೇ ಅವರು ಒಳಗೆ ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿ ಅವರ ಶವಗಳನ್ನು ಹೊರಗೆ ಹಾಕಿದ ತರುವಾಯ, ಬಾಳನ ಗರ್ಭಗುಡಿಯನ್ನು ಪ್ರವೇಶಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸರ್ವಾಂಗಹೋಮವನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ, ಸೇನಾಧಿಪತಿಗಳಿಗೂ, “ಒಳಗೆ ಹೋಗಿ ಅವರೆಲ್ಲರನ್ನೂ ಸಂಹರಿಸಿರಿ. ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿ ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಪಟ್ಟಣವನ್ನು ಪ್ರವೇಶಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ದಹನಬಲಿಯನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ ಸೇನಾಪತಿಗಳಿಗೂ, “ಒಳಗೆ ಹೋಗಿ ಅವರನ್ನೆಲ್ಲಾ ಸಂಹರಿಸಿರಿ; ಒಬ್ಬನೂ ತಪ್ಪಿಸಿಕೊಳ್ಳಕೂಡದು,” ಎಂದು ಹೇಳಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಸರ್ವಾಂಗಹೋಮವನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ ಸೇನಾಪತಿಗಳಿಗೂ - ಒಳಗೆ ಹೋಗಿ ಅವರನ್ನೆಲ್ಲಾ ಸಂಹರಿಸಿರಿ; ಒಬ್ಬನೂ ತಪ್ಪಿಸಿಕೊಳ್ಳಕೂಡದು ಎಂದು ಹೇಳಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿ ಬಾಳನ ದೇವಸ್ಥಾನಕ್ಕೆ ಸೇರಿದ ಕೇರಿಯನ್ನು ಪ್ರವೇಶಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೇಹುವು ಸರ್ವಾಂಗಹೋಮಗಳನ್ನು ಅರ್ಪಿಸಿದ ತಕ್ಷಣ, ಕಾವಲುಗಾರರಿಗೂ ಸೇನಾಧಿಪತಿಗಳಿಗೂ, “ಒಳಕೋಣೆಗೆ ಹೋಗಿ ಬಾಳನ ಆರಾಧಕರನ್ನೆಲ್ಲ ಕೊಂದುಹಾಕಿ! ಜೀವಸಹಿತ ಯಾರೂ ಆಲಯದಿಂದ ಹೊರಕ್ಕೆ ಬರಲು ಬಿಡಬೇಡಿ!” ಎಂದು ಹೇಳಿದನು. ಸೇನಾಧಿಪತಿಗಳು ಚೂಪಾದ ಖಡ್ಗದಿಂದ ಬಾಳನ ಭಕ್ತರನ್ನೆಲ್ಲ ಕೊಂದುಹಾಕಿದರು. ಬಾಳನ ಭಕ್ತರ ದೇಹಗಳನ್ನು ಕಾವಲುಗಾರರು ಮತ್ತು ಸೇನಾಧಿಪತಿಗಳು ಹೊರಕ್ಕೆ ಎಸೆದರು. ನಂತರ ಆ ಕಾವಲುಗಾರರು ಮತ್ತು ಸೇನಾಧಿಪತಿಗಳು ಬಾಳನ ಆಲಯದ ಒಳಕೋಣೆಯನ್ನು ಪ್ರವೇಶಿಸಿದರು. ಅಧ್ಯಾಯವನ್ನು ನೋಡಿ |