2 ಅರಸುಗಳು 10:29 - ಕನ್ನಡ ಸಮಕಾಲಿಕ ಅನುವಾದ29 ಆದರೆ ಬೇತೇಲಿನಲ್ಲಿಯೂ, ದಾನಿನಲ್ಲಿಯೂ ಇರುವ ಬಂಗಾರದ ಕರುಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆದರೂ ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಕೈಬಿಡದೆ, ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಹೋರಿಕರುಗಳನ್ನು ಪೂಜಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆದರೂ ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಬಸವಗಳನ್ನು ಪೂಜಿಸುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆದರೂ ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ, ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಂದ ಯೇಹುವು ಸಂಪೂರ್ಣವಾಗಿ ವಿಮುಖನಾಗಲಿಲ್ಲ. ಬೇತೇಲ್ ಮತ್ತು ದಾನ್‌ಗಳಲ್ಲಿದ್ದ ಬಂಗಾರದ ಕರುಗಳನ್ನು ಯೇಹುವು ನಾಶಗೊಳಿಸಲಿಲ್ಲ. ಅಧ್ಯಾಯವನ್ನು ನೋಡಿ |