2 ಅರಸುಗಳು 10:3 - ಕನ್ನಡ ಸಮಕಾಲಿಕ ಅನುವಾದ3 ನೀವು ನಿಮ್ಮ ಯಜಮಾನನ ಪುತ್ರರಲ್ಲಿ ಉತ್ತಮನಾಗಿರುವ ಮತ್ತು ಸಮರ್ಥನಾಗಿರುವವನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕೂರಿಸಿ, ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಈ ಪತ್ರವು ಕೈ ಸೇರಿದೊಡನೆ ಆ ರಾಜ ಪುತ್ರರಲ್ಲಿ ಉತ್ತಮನೂ, ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ” ಎಂಬುದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ಪತ್ರವು ನಿಮಗೆ ಮುಟ್ಟಿದೊಡನೆ ಆ ರಾಜಪುತ್ರರಲ್ಲಿ ಉತ್ತಮನೂ ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ, ನಿಮ್ಮ ಯಜಮಾನನ ಕುಟುಂಬದವರ ಪರವಾಗಿ ಯುದ್ಧಮಾಡಿ,” ಎಂಬುದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಈ ಪತ್ರವು ನಿಮಗೆ ಮುಟ್ಟಿದೊಡನೆ ಆ ರಾಜಪುತ್ರರಲ್ಲಿ ಉತ್ತಮನೂ ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ ನಿಮ್ಮ ಯಜಮಾನನ ಕುಟುಂಬದವರಿಗೋಸ್ಕರ ಯುದ್ಧಮಾಡಿರಿ ಎಂಬದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿ |