2 ಅರಸುಗಳು 10:33 - ಕನ್ನಡ ಸಮಕಾಲಿಕ ಅನುವಾದ33 ಪೂರ್ವದಲ್ಲಿ ಯೊರ್ದನ್ ಮೊದಲುಗೊಂಡು ಗಾದ್ಯರೂ, ರೂಬೇನ್ಯರೂ ನಿವಾಸವಾಗಿದ್ದ ಗಿಲ್ಯಾದಿನ ಸಮಸ್ತ ದೇಶವನ್ನೂ, ಅರ್ನೋನ್ ನದಿಯ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್ ಬಾಷಾನಿನಲ್ಲಿರುವವರನ್ನೂ ಹಜಾಯೇಲನು ಸಂಹರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಯೊರ್ದನ್ ನದಿಯ ಪೂರ್ವದಿಕ್ಕಿಗೂ, ಅರ್ನೋನ್ ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ ಇರುವ ಗಿಲ್ಯಾದ್, ಬಾಷಾನ್ ಪ್ರಾಂತ್ಯಗಳಲ್ಲಿ ವಾಸವಾಗಿದ್ದ ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳವರನ್ನೂ, ಬೇರೆ ಎಲ್ಲಾ ಪ್ರಾಂತ್ಯಗಳಲ್ಲಿರುವ ಇಸ್ರಾಯೇಲರನ್ನೂ ಬಾಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಹಜಾಯೇಲನು ಬಂದು ಜೋರ್ಡನಿನ ಪೂರ್ವದಿಕ್ಕಿಗೂ, ಅರ್ನೋನ್ ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ, ಇರುವ ಗಿಲ್ಯಾದ್, ಬಾಷಾನ್, ಪ್ರಾಂತ್ಯಗಳಲ್ಲಿ ವಾಸವಾಗಿದ್ದ ಗಾದ್, ರೂಬೇನ್, ಮನಸ್ಸೆ ಕುಲಗಳವನ್ನೂ ಬೇರೆ ಎಲ್ಲಾ ಪ್ರಾಂತ್ಯಗಳಲ್ಲಿರುವ ಇಸ್ರಯೇಲರನ್ನೂ ಹಿಂಸಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅರ್ನೊನ್‍ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ ಇರುವ ಗಿಲ್ಯಾದ್ ಬಾಷಾನ್ ಪ್ರಾಂತಗಳಲ್ಲಿ ವಾಸವಾಗಿದ್ದ ಗಾದ್ ರೂಬೇನ್ ಮನಸ್ಸೆ ಕುಲಗಳವರನ್ನೂ ಬೇರೆ ಎಲ್ಲಾ ಪ್ರಾಂತಗಳಲ್ಲಿರುವ ಇಸ್ರಾಯೇಲ್ಯರನ್ನೂ ಬಾಧಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಹಜಾಯೇಲನು ಜೋರ್ಡನ್ ನದಿಯ ಪೂರ್ವಕ್ಕಿರುವ ಪ್ರದೇಶವನ್ನೆಲ್ಲ ಗೆದ್ದುಕೊಂಡನು. ಅವನು ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳಿಗೆ ಸೇರಿದ ಎಲ್ಲಾ ಪ್ರದೇಶವನ್ನು, ಗಿಲ್ಯಾದ್‌ನ ಎಲ್ಲಾ ಪ್ರದೇಶವನ್ನು ಗೆದ್ದನು. ಹಜಾಯೇಲನು ಆರ್ನೋನ್ ಕಣಿವೆಯಿಂದ ಗಿಲ್ಯಾದ್, ಬಾಷಾನ್‌ವರೆಗಿನ ಅರೋಯೇರ್ ಪ್ರದೇಶವನ್ನೆಲ್ಲ ಗೆದ್ದುಕೊಂಡನು. ಅಧ್ಯಾಯವನ್ನು ನೋಡಿ |