Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:5 - ಕನ್ನಡ ಸಮಕಾಲಿಕ ಅನುವಾದ

5 ಆಗ ಅರಮನೆಯ ಆಡಳಿತಾಧಿಕಾರಿ, ಪಟ್ಟಣದ ರಾಜ್ಯಪಾಲರು, ಹಿರಿಯರು ಮತ್ತು ಪಾಲಕರು ಈ ಸಂದೇಶವನ್ನು ಯೇಹುವಿನ ಬಳಿಗೆ ಕಳುಹಿಸಿ, “ನಾವು ನಿಮ್ಮ ಸೇವಕರು ನೀವು ನಮಗೆ ಹೇಳುವುದನ್ನೆಲ್ಲಾ ಮಾಡುತ್ತೇವೆ. ನಾವು ಯಾರನ್ನೂ ಅರಸನನ್ನಾಗಿ ನೇಮಿಸುವುದಿಲ್ಲ. ನಿಮ್ಮ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ನೀವು ಮಾಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅನಂತರ ರಾಜಗೃಹಾಧಿಪತಿ, ಪಟ್ಟಣದ ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರೆಲ್ಲ ಸೇರಿ ಯೇಹುವಿಗೆ, “ನಾವು ನಿನ್ನ ಆಜ್ಞಾಪಾಲರಕರಾದ ಸೇವಕರು. ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ, ನಿನ್ನ ಚಿತ್ತವೇ ನೆರವೇರಲಿ” ಎಂದು ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅನಂತರ ರಾಜಗೃಹಾಧಿಪತಿ, ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರು ಎಲ್ಲರು ಕೂಡಿ ಯೇಹುವಿಗೆ, “ನಾವು ನಿಮ್ಮ ಆಜ್ಞಾಧಾರಕರಾದ ಸೇವಕರು, ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ; ನಿಮ್ಮ ಚಿತ್ತವೇ ನೆರವೇರಲಿ,” ಎಂದು ಹೇಳಿಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅನಂತರ ರಾಜಗೃಹಾಧಿಪತಿ, ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರೆಲ್ಲಾ ಕೂಡಿ ಯೇಹುವಿಗೆ - ನಾವು ನಿನ್ನ ಆಜ್ಞಾಧಾರಕರಾದ ಸೇವಕರು; ನಾವಾಗಿ ನಮಗೊಬ್ಬ ಅರಸನನ್ನು ನೇವಿುಸಿಕೊಳ್ಳುವದಿಲ್ಲ; ನಿನ್ನ ಚಿತ್ತವೇ ನೆರವೇರಲಿ ಎಂದು ಹೇಳಿಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಹಾಬನ ಮನೆಯನ್ನು ನೋಡಿಕೊಳ್ಳುವ ಗೃಹಾಧಿಕಾರಿ, ನಗರವನ್ನು ನಿಯಂತ್ರಿಸುವ ನಗರಾಧಿಕಾರಿ, ಹಿರಿಯರು ಮತ್ತು ಅಹಾಬನ ಮಕ್ಕಳ ಪಾಲಕರಾದ ಜನರೆಲ್ಲರೂ ಯೇಹುವಿಗೆ ಈ ಸಂದೇಶವನ್ನು ಕಳುಹಿಸಿದರು: “ನಾವು ನಿನ್ನ ಸೇವಕರು. ನೀನು ನಮಗೆ ಹೇಳುವುದನ್ನೆಲ್ಲಾ ನಾವು ಮಾಡುತ್ತೇವೆ. ನಾವು ಯಾರನ್ನೂ ರಾಜನನ್ನಾಗಿ ಮಾಡುವುದಿಲ್ಲ. ನಿನಗೆ ಒಳ್ಳೆಯದೆಂದು ತೋಚಿದ್ದನ್ನು ಮಾಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:5
11 ತಿಳಿವುಗಳ ಹೋಲಿಕೆ  

ಹಾಗೆಯೇ ಅವರು ಗೋಣಿಯನ್ನು ತಮ್ಮ ನಡುವುಗಳಿಗೆ ಕಟ್ಟಿಕೊಂಡು, ಹಗ್ಗಗಳನ್ನು ತಮ್ಮ ತಲೆಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು, “ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ,” ಎಂದರು. ಅದಕ್ಕೆ ಅರಸನು, “ಅವನು ಇನ್ನೂ ಬದುಕಿದ್ದಾನೋ? ಅವನು ನನ್ನ ಸಹೋದರನು,” ಎಂದನು.


ಇಸ್ರಾಯೇಲಿನ ಅರಸನು ಉತ್ತರವಾಗಿ, “ಅರಸನಾದ ನನ್ನ ಒಡೆಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು, ನನಗುಂಟಾದ ಸಮಸ್ತವೂ ನಿನ್ನದು,” ಎಂದನು.


ನಮ್ಮ ಹಿರಿಯರೂ, ನಮ್ಮ ದೇಶವಾಸಿಗಳಾದ ಜನರೆಲ್ಲರೂ ನಮಗೆ ಹೇಳಿದ್ದೇನೆಂದರೆ, ‘ನೀವು ಪ್ರಯಾಣಕ್ಕಾಗಿ ರೊಟ್ಟಿಯನ್ನು ತೆಗೆದುಕೊಂಡು ಅವರೆದುರಿಗೆ ಹೋಗಿ, ಅವರಿಗೆ ನಾವು ನಿಮ್ಮ ಸೇವಕರು ಆದಕಾರಣ ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ ಎಂದು ಹೇಳಿರಿ,’ ಎಂದರು.


ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಸ್ಸೀರಿಯದ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಬಿಟ್ಟು ಹಿಂದಿರುಗಿ ಹೋಗು. ನೀನು ನನ್ನ ಮೇಲೆ ವಿಧಿಸುವುದನ್ನು ನಾನು ಕೊಡುತ್ತೇನೆ,” ಎಂದು ಹೇಳಿ ಕಳುಹಿಸಿದನು. ಆಗ ಅಸ್ಸೀರಿಯದ ಅರಸನು ಯೆಹೂದದ ಅರಸನಾದ ಹಿಜ್ಕೀಯನು ಹತ್ತು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನೂ, ಒಂದು ಸಾವಿರ ಕಿಲೋಗ್ರಾಂ ಬಂಗಾರವನ್ನೂ ಕೊಡಬೇಕೆಂದು ನೇಮಕಮಾಡಿದನು.


ಅದಕ್ಕವರು ಯೆಹೋಶುವನಿಗೆ, “ನಾವು ನಿನ್ನ ಸೇವಕರು,” ಎಂದರು. ಆಗ ಯೆಹೋಶುವನು ಅವರಿಗೆ, “ನೀವು ಯಾರು? ಎಲ್ಲಿಂದ ಬಂದಿರಿ?” ಎಂದನು.


ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


ಅವರಿಗೆ ನೀವು ಕಿವಿಗೊಡಲೇಬಾರದು. ಬಾಬಿಲೋನಿಯದ ಅರಸನಿಗೆ ಅಡಿಯಾಳಾಗಿರಿ. ಆಗ ಬದುಕುವಿರಿ. ಈ ನಗರವೇಕೆ ನಾಶವಾಗಬೇಕು?


ನಾನು ಈ ಎಲ್ಲಾ ಜನರನ್ನು ಗರ್ಭಧರಿಸಿ ಜನ್ಮವಿತ್ತೆನೋ? ದಾದಿಯು ಹಸುಗೂಸನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ತನ್ನ ತೋಳುಗಳಲ್ಲಿ ಎತ್ತಿಕೊಂಡು ಅವರ ಪಿತೃಗಳಿಗೆ ನೀವು ವಾಗ್ದಾನ ಮಾಡಿದ ದೇಶಕ್ಕೆ ನಡೆಸಬೇಕೆಂದು ನೀವು ನನಗೇಕೆ ಹೇಳಿದ್ದೀರಿ?


ಆಗ ಯೇಹುವು ಅವರಿಗೆ ಎರಡನೆಯ ಸಾರಿ ಪತ್ರವನ್ನು ಬರೆದು, “ನೀವು ನನ್ನವರಾಗಿದ್ದು ನನ್ನ ಮಾತು ಕೇಳುವವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ಇಜ್ರೆಯೇಲ್ ಪಟ್ಟಣಕ್ಕೆ ನಿಮ್ಮ ಯಜಮಾನನ ಪುತ್ರರ ತಲೆಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದನು. ಆದರೆ ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮನುಷ್ಯರು ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು. ಅವರು ಅವರನ್ನು ಪೋಷಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು