Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಯೇಹುವು ಅವರಿಗೆ ಎರಡನೆಯ ಸಾರಿ ಪತ್ರವನ್ನು ಬರೆದು, “ನೀವು ನನ್ನವರಾಗಿದ್ದು ನನ್ನ ಮಾತು ಕೇಳುವವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ಇಜ್ರೆಯೇಲ್ ಪಟ್ಟಣಕ್ಕೆ ನಿಮ್ಮ ಯಜಮಾನನ ಪುತ್ರರ ತಲೆಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದನು. ಆದರೆ ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮನುಷ್ಯರು ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು. ಅವರು ಅವರನ್ನು ಪೋಷಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರ ನಡೆದುಕೊಳ್ಳುವ ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಇಜ್ರೇಲಿಗೆ ಬನ್ನಿರಿ” ಎಂದು ಆಜ್ಞಾಪಿಸಿದನು. ಆಹಾಬನ ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಯೇಹುವು ಇನ್ನೊಂದು ಪತ್ರದ ಮೂಲಕ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರವಾಗಿ ನಡೆದುಕೊಳ್ಳಲು ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ, ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಬನ್ನಿರಿ,” ಎಂದು ಆಜ್ಞಾಪಿಸಿದನು. ಎಪ್ಪತ್ತುಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ - ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರವಾಗಿ ನಡೆದುಕೊಳ್ಳಮನಸ್ಸುಳ್ಳವರಾಗಿದ್ದರೆ ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಬನ್ನಿರಿ ಎಂದು ಆಜ್ಞಾಪಿಸಿದನು. ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಂತರ ಯೇಹು ಈ ನಾಯಕರಿಗೆ ಎರಡನೆಯ ಪತ್ರವನ್ನು ಬರೆದನು. ಯೇಹುವು, “ನೀವು ನನಗೆ ಬೆಂಬಲ ಕೊಡುವುದಾದರೆ ಮತ್ತು ವಿಧೇಯರಾಗಿರುವುದಾದರೆ ಅಹಾಬನ ಮಕ್ಕಳ ತಲೆಗಳನ್ನು ಕತ್ತರಿಸಿ ಹಾಕಿ. ನಾಳೆ ಇದೇ ಸಮಯಕ್ಕೆ ಇಜ್ರೇಲಿಗೆ ನನ್ನ ಬಳಿಗೆ ಅವುಗಳನ್ನು ತನ್ನಿ.” ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಅವರು ತಮ್ಮ ಪಾಲಕರಾದ ನಗರದ ನಾಯಕರ ಬಳಿಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:6
13 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ, ನಿಮಗೆ ವಿರೋಧವಾಗಿರದವನು ನಿಮ್ಮ ಪಕ್ಷದವನೇ,” ಎಂದು ಹೇಳಿದರು.


“ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.


‘ದೇವರು ದುಷ್ಟರ ಮಕ್ಕಳಿಗೆ ಅವರ ಅಪರಾಧ ಫಲವನ್ನು ಕಾದಿಡುತ್ತಾರೆ,’ ಎಂದು ಹೇಳುತ್ತಾರಲ್ಲಾ? ಆ ದುಷ್ಟರು ಅನುಭವಿಸುವ ಹಾಗೆ ದೇವರು ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸಲಿ.


ಯೇಹುವು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ, “ನನ್ನ ಕಡೆ ಇರುವವರು ಯಾರು?” ಎಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿಯಲ್ಲಿಂದ ಅವನನ್ನು ನೋಡಿದರು.


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ಆಗ ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೋಪಾಗ್ನಿಯು ಇಸ್ರಾಯೇಲಿನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥರೆಲ್ಲರನ್ನು ತೆಗೆದುಕೊಂಡು, ಅವರನ್ನು ಹಗಲು ಹೊತ್ತಿನಲ್ಲಿ ಯೆಹೋವ ದೇವರ ಮುಂದೆ ಕೊಂದುಹಾಕು.”


ಆಗ ಅರಮನೆಯ ಆಡಳಿತಾಧಿಕಾರಿ, ಪಟ್ಟಣದ ರಾಜ್ಯಪಾಲರು, ಹಿರಿಯರು ಮತ್ತು ಪಾಲಕರು ಈ ಸಂದೇಶವನ್ನು ಯೇಹುವಿನ ಬಳಿಗೆ ಕಳುಹಿಸಿ, “ನಾವು ನಿಮ್ಮ ಸೇವಕರು ನೀವು ನಮಗೆ ಹೇಳುವುದನ್ನೆಲ್ಲಾ ಮಾಡುತ್ತೇವೆ. ನಾವು ಯಾರನ್ನೂ ಅರಸನನ್ನಾಗಿ ನೇಮಿಸುವುದಿಲ್ಲ. ನಿಮ್ಮ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ನೀವು ಮಾಡಿರಿ,” ಎಂದರು.


ಈ ಪತ್ರವು ಅವರ ಬಳಿಗೆ ಬಂದಾಗ, ಅವರು ರಾಜಪುತ್ರರನ್ನು ಹಿಡಿದು, ಎಪ್ಪತ್ತು ಮಂದಿಯನ್ನು ಕೊಂದು, ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೆಯೇಲ್ ಪಟ್ಟಣದಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.


ಮರುದಿನ ಬೆಳಿಗ್ಗೆ ಯೇಹು ಹೊರಗೆ ಬಂದು, ಸಕಲ ಜನರ ಮುಂದೆ ನಿಂತು, “ನೀವು ನಿರಪರಾಧಿಗಳು. ನಾನು ನನ್ನ ಯಜಮಾನನ ಮೇಲೆ ಒಳಸಂಚುಮಾಡಿ, ಅವನನ್ನು ಕೊಂದುಹಾಕಿದೆನು. ಆದರೆ ಇವರೆಲ್ಲರನ್ನು ಸಂಹರಿಸಿದವರ‍್ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು