2 ಅರಸುಗಳು 10:7 - ಕನ್ನಡ ಸಮಕಾಲಿಕ ಅನುವಾದ7 ಈ ಪತ್ರವು ಅವರ ಬಳಿಗೆ ಬಂದಾಗ, ಅವರು ರಾಜಪುತ್ರರನ್ನು ಹಿಡಿದು, ಎಪ್ಪತ್ತು ಮಂದಿಯನ್ನು ಕೊಂದು, ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೆಯೇಲ್ ಪಟ್ಟಣದಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಪ್ರಧಾನಪುರುಷರು ಪತ್ರಿಕೆಯನ್ನು ಓದಿದೊಡನೆ, ಆ ಎಪ್ಪತ್ತು ಮಂದಿ ರಾಜಪುತ್ರರನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ತುಂಬಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪ್ರಧಾನಪುರುಷರು ಪತ್ರವನ್ನು ಓದಿದೊಡನೆ ಆ ಎಪ್ಪತ್ತು ಮಂದಿಯನ್ನು ಹಿಡಿದುಕೊಂಡು ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಜೆಸ್ರೀಲಿನಲ್ಲಿದ್ದ ಯೇಹುವಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಪ್ರಧಾನ ಪುರುಷರು ಪತ್ರವನ್ನು ಓದಿದೊಡನೆ ಆ ಎಪ್ಪತ್ತು ಮಂದಿಯನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಗರದ ನಾಯಕರಿಗೆ ಈ ಪತ್ರವು ಬಂದು ತಲುಪಿದಾಗ, ಅವರು ರಾಜನ ಎಪ್ಪತ್ತುಮಂದಿ ಮಕ್ಕಳನ್ನು ಕರೆದುಕೊಂಡು ಹೋಗಿ ಕೊಂದುಹಾಕಿದರು. ನಂತರ ಆ ನಾಯಕರು ರಾಜನ ಮಕ್ಕಳ ತಲೆಗಳನ್ನು ಬುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿ |
ಆಗ ಯೇಹುವು ಅವರಿಗೆ ಎರಡನೆಯ ಸಾರಿ ಪತ್ರವನ್ನು ಬರೆದು, “ನೀವು ನನ್ನವರಾಗಿದ್ದು ನನ್ನ ಮಾತು ಕೇಳುವವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ಇಜ್ರೆಯೇಲ್ ಪಟ್ಟಣಕ್ಕೆ ನಿಮ್ಮ ಯಜಮಾನನ ಪುತ್ರರ ತಲೆಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದನು. ಆದರೆ ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮನುಷ್ಯರು ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು. ಅವರು ಅವರನ್ನು ಪೋಷಿಸುತ್ತಿದ್ದರು.