Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅರಸನನ್ನಾಗಿ ಮಾಡಿ ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು ಚಪ್ಪಾಳೆ ಹೊಡೆದು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆ ತಟ್ಟುತ್ತಾ, “ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೆಹೋಯಾದವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು, ‘ಅರಸನು ಚಿರಂಜೀವಿಯಾಗಿರಲಿ!’ ಎಂದು ಜಯಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು ಅವನಿಗೆ ರಾಜ್ಯಾಭಿಷೇಕಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು ಅರಸನು ಚಿರಂಜೀವಿಯಾಗಿರಲಿ ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈ ಜನರು ಯೆಹೋವಾಷಾನನ್ನು ಹೊರಗೆ ತಂದರು. ಅವರು ಯೆಹೋವಾಷನ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟರು. ನಂತರ ಅವರು ಅವನನ್ನು ಅಭಿಷೇಕಿಸಿ, ನೂತನ ರಾಜನನ್ನಾಗಿ ಮಾಡಿದರು. ಅವರು ಚಪ್ಪಾಳೆ ತಟ್ಟುತ್ತಾ “ರಾಜನು ಚಿರಂಜೀವಿಯಾಗಿರಲಿ!” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:12
45 ತಿಳಿವುಗಳ ಹೋಲಿಕೆ  

ಆಗ ಸಮುಯೇಲನು, “ಯೆಹೋವ ದೇವರು ಆಯ್ದುಕೊಂಡವನನ್ನು ನೋಡಿರಿ, ಸಮಸ್ತ ಜನರಿಗೆ ಎಲ್ಲಾ ಜನರಲ್ಲಿ ಇವನಿಗೆ ಸಮಾನವಾದವನು ಯಾವನೂ ಇಲ್ಲವಲ್ಲ,” ಎಂದನು. ಜನರೆಲ್ಲರು ಆರ್ಭಟಿಸಿ, “ಅರಸ ಬಾಳಲಿ,” ಎಂದರು.


ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನದ ಹಲಗೆಯನ್ನು ಇಡಬೇಕು.


ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ,” ಎಂದರು.


“ಆದ್ದರಿಂದ ಅವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು, ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು, ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದಿದ್ದೇನೆ,” ಎಂದನು.


ಯೆಹೋವ ದೇವರು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ, ಅವನಿಗೆ ಸಾಕ್ಷಿಯ ಎರಡು ಹಲಗೆಗಳನ್ನೂ ದೇವರು ಬೆರಳಿನಿಂದ ಬರೆದ ಕಲ್ಲಿನ ಹಲಗೆಗಳನ್ನೂ ಕೊಟ್ಟನು.


ಏಕೆಂದರೆ ನೀವು ಆನಂದದೊಡನೆ ಹೋಗುವಿರಿ, ಸಮಾಧಾನದಿಂದ ಬರುವಿರಿ. ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವುವು.


ನದಿಗಳು ಚಪ್ಪಾಳೆ ತಟ್ಟಲಿ. ಬೆಟ್ಟಗಳು ಒಟ್ಟುಗೂಡಿ ಆನಂದ ಕೀರ್ತನೆ ಹಾಡಲಿ.


ಎಲ್ಲಾ ಜನರೇ, ಕೈ ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.


ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಆದ ಯೆಹೋಷೆಬಳು ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನು ಹತನಾಗದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯಳಿಗೆ ಕಾಣದ ಹಾಗೆ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು.


ಅರ್ಕಿಯನಾದ ಹೂಷೈಯು ಎಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದಾಗ, ಹೂಷೈ ಅಬ್ಷಾಲೋಮನಿಗೆ, “ಅರಸನು ಬಾಳಲಿ, ಅರಸನು ಬಾಳಲಿ,” ಎಂದನು.


ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.


ಆತನ ನೇತ್ರಗಳು ಬೆಂಕಿಯ ಜ್ವಾಲೆಯಂತಿದ್ದವು. ಆತನ ತಲೆಯ ಮೇಲೆ ಅನೇಕ ಮುಕುಟಗಳಿದ್ದವು. ಆತನಿಗೆ ಒಂದು ಹೆಸರು ಬರೆದು ಕೊಟ್ಟಿದೆ. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.


ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.


ನೀವು ನೀತಿಯನ್ನು ಪ್ರೀತಿಸಿದ್ದೀರಿ. ಅನೀತಿಯನ್ನು ದ್ವೇಷಿಸಿದ್ದೀರಿ; ಆದ್ದರಿಂದ ದೇವರೇ, ನಿಮ್ಮ ದೇವರು ನಿಮ್ಮನ್ನು ನಿಮ್ಮ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾರೆ!”


ನೀವೂ ನಾವೂ ಕ್ರಿಸ್ತ ಯೇಸುವಿನಲ್ಲಿ ದೃಢವಾಗಿ ನಿಲ್ಲುವಂತೆ ದೇವರು ನಮ್ಮನ್ನು ಸ್ಥಿರಪಡಿಸುತ್ತಾರೆ. ದೇವರು ನಮ್ಮನ್ನು ಅಭಿಷೇಕಿಸಿ,


ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.


ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು, ಯೇಸುವಿನ ತಲೆಯ ಮೇಲಿಟ್ಟು, ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಮಸ್ಕಾರ!” ಎಂದು ಹೇಳಿ ಯೇಸುವನ್ನು ಹಾಸ್ಯಮಾಡಿದರು.


ಯೇಸುವಿನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು, “ದಾವೀದನ ಪುತ್ರನಿಗೆ ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಮಹೋನ್ನತದಲ್ಲಿ ಜಯ!” ಎಂದು ಘೋಷಿಸಿದರು.


ಆಗ ದಾನಿಯೇಲನು ಅರಸನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.


ಅರಸನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.


ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ದೇವರ ಶಿಕ್ಷಣವನ್ನು ಮುದ್ರಿಸು.


ಇಲ್ಲಿ ಆತನ ಶತ್ರುಗಳಿಗೆ ನಾಚಿಕೆಯ ವಸ್ತ್ರವನ್ನು ಹೊದಿಸುವೆನು; ಆದರೆ ಆತನ ತೆರೆಯ ಮೇಲೆ ಕಿರೀಟವು ಶೋಭಿಸುವುದು.”


ನಿಮ್ಮ ಸೇವಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ಮಣ್ಣುಪಾಲು ಮಾಡಿದ್ದೀರಿ.


ಅವರು ಯಾಕೋಬ ವಂಶದಲ್ಲಿ ಶಾಸನಗಳನ್ನು ಸ್ಥಾಪಿಸಿ, ಇಸ್ರಾಯೇಲಿನಲ್ಲಿ ನಿಯಮವನ್ನು ಇಟ್ಟು, ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, ಅವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ,


ನೀವು ಉತ್ತಮ ಆಶೀರ್ವಾದಗಳಿಂದ ಅರಸನನ್ನು ಸ್ವಾಗತಿಸಿದ್ದೀರಿ; ಚೊಕ್ಕ ಬಂಗಾರದ ಕಿರೀಟವನ್ನು ಆತನ ತಲೆಯ ಮೇಲಿಟ್ಟಿದ್ದೀರಿ.


ಅರಸನು ಧರಿಸಿಕೊಳ್ಳುವ ರಾಜವಸ್ತ್ರಗಳನ್ನೂ, ಅರಸನು ಸವಾರಿ ಮಾಡುವ ಕುದುರೆಯನ್ನೂ, ಅರಸನ ತಲೆಯ ಮೇಲೆ ಧರಿಸಿಕೊಳ್ಳುವ ರಾಜಕಿರೀಟವನ್ನೂ ತರಿಸಬೇಕು.


ಅರಸನು ಸಕಲ ಕನ್ಯೆಯರಿಗಿಂತ ಹೆಚ್ಚಾಗಿ ಎಸ್ತೇರಳನ್ನು ಮೆಚ್ಚಿಕೊಂಡನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯೆಯರಿಗಿಂತ ಹೆಚ್ಚು ದಯೆಯೂ ಮೆಚ್ಚುಗೆಯೂ ದೊರಕಿತು. ಆದ್ದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಎಸ್ತೇರಳನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಆರಿಸಿಕೊಂಡನು.


ಆಗ ಯೆಹೋಯಾದಾವನು ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅವನನ್ನು ಅರಸನನ್ನಾಗಿ ಘೋಷಿಸಿ, ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.


ಏಳನೆಯ ವರ್ಷದಲ್ಲಿ ಯೆಹೋಯಾದಾವನು ಶತಾಧಿಪತಿಯಾದವರನ್ನೂ, ಕಾರಿ ಎಂಬ ಸಿಪಾಯಿಗಳ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯಿಸಿ, ತನ್ನ ಬಳಿಗೆ ಯೆಹೋವ ದೇವರ ಆಲಯಕ್ಕೆ ಕರೆದುಕೊಂಡು ಬಂದನು. ಅವರ ಸಂಗಡ ಒಡಂಬಡಿಕೆಯನ್ನು ಮಾಡಿ, ಯೆಹೋವ ದೇವರ ಆಲಯದಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು, ಅನಂತರ ಅವನಿಗೆ ಅರಸನ ಮಗನನ್ನು ತೋರಿಸಿದನು.


ಎಣ್ಣೆಯ ಪಾತ್ರೆಯನ್ನು ತೆಗೆದುಕೊಂಡು, ಅವನ ತಲೆಯ ಮೇಲೆ ಹೊಯ್ದು, ಅವನಿಗೆ, ‘ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂಬುದಾಗಿ ಹೇಳು. ಅನಂತರ ಕದವನ್ನು ತೆರೆದು ತಡಮಾಡದೆ ಓಡಿಹೋಗು,” ಎಂದನು.


ಅಲ್ಲಿ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಲಿ. ತುತೂರಿಯನ್ನು ಊದಿ, ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಿರಿ.


ಇದಲ್ಲದೆ ದಾವೀದನು ಅಮ್ಮೋನಿಯರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ಸಹ ತೆಗೆದುಕೊಂಡನು. ಅದು ಮೂವತ್ತೈದು ಕಿಲೋಗ್ರಾಂ ತೂಕದ್ದಾಗಿತ್ತು ಅದನ್ನು ಬಂಗಾರದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ ಅಲಂಕರಿಸಲಾಗಿತ್ತು, ಆ ಕಿರೀಟವನ್ನು ದಾವೀದನ ಶಿರಸ್ಸಿನಲ್ಲಿ ಧರಿಸಲಾಯಿತು. ಆ ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.


ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.


ನೀವು ಪರಾಕ್ರಮಶಾಲಿಗಳಾಗಿದ್ದು, ನಿಮ್ಮ ಕೈಗಳು ಬಲವಾಗಿರಲಿ. ಏಕೆಂದರೆ ನಿಮ್ಮ ಯಜಮಾನನಾದ ಸೌಲನು ಮರಣಹೊಂದಿದನು. ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿದರು,” ಎಂದನು.


ಆಗ ಯೆಹೂದನ ಮನುಷ್ಯರು ಹೆಬ್ರೋನಿಗೆ ಬಂದು ಅಲ್ಲಿ ದಾವೀದನನ್ನು ಯೆಹೂದದವರ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿಸಿದರು. ಯಾಬೇಷ್ ಗಿಲ್ಯಾದಿನವರು ಸೌಲನನ್ನು ಸಮಾಧಿಮಾಡಿದರೆಂದು ದಾವೀದನಿಗೆ ತಿಳಿಸಿದಾಗ,


ಸಮುಯೇಲನು ಎಣ್ಣೆ ಇರುವ ಕೊಂಬನ್ನು ತೆಗೆದುಕೊಂಡು, ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಯೆಹೋವ ದೇವರ ಆತ್ಮರು ಕೂಡಲೆ ದಾವೀದನ ಮೇಲೆ ಇಳಿದು ಬಂದರು. ಅನಂತರ ಸಮುಯೇಲನು ಎದ್ದು ರಾಮಕ್ಕೆ ಹೋದನು.


ಅರಸನು ಶಿಮ್ಮಿಗೆ, “ನೀನು ನನ್ನ ತಂದೆ ದಾವೀದನಿಗೆ ಮಾಡಿದ ಕೇಡನ್ನು ನಿನ್ನ ಹೃದಯವು ತಿಳಿದಿದೆ. ಯೆಹೋವ ದೇವರು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವರು.


ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು, ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ನಿಂತುಕೊಂಡರು.


ಏಕೆಂದರೆ ಈ ಹೊತ್ತು ಅವನು ಇಳಿದು ಹೋಗಿ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳೆಲ್ಲರನ್ನೂ, ಸೈನ್ಯಾಧಿಪತಿಗಳನ್ನೂ, ಯಾಜಕನಾದ ಅಬಿಯಾತರನನ್ನೂ ಕರೆದಿದ್ದಾನೆ. ಅವರು ಅವನ ಮುಂದೆ ತಿಂದು, ಕುಡಿದು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ,’ ಎಂದು ಹೇಳುತ್ತಿದ್ದಾರೆ.


ಆಗ ಅವರು ತ್ವರೆಪಟ್ಟು ಪ್ರತಿಯೊಬ್ಬರು ತಮ್ಮ ಹೊರ ಉಡುಪುಗಳನ್ನು ತೆಗೆದು, ಮೆಟ್ಟಿಲುಗಳ ಮೇಲೆ ಹಾಸಿ, ಇವನನ್ನು ಕುಳ್ಳಿರಿಸಿ, ತುತೂರಿಗಳನ್ನು ಊದಿ, “ಯೇಹುವು ಅರಸನಾಗಿದ್ದಾನೆ,” ಎಂದು ಆರ್ಭಟಿಸಿದರು.


ಜೀವವನ್ನು ಅರಸನು ನಿಮ್ಮಿಂದ ಬೇಡಲು, ನೀವು ಆತನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು