Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:17 - ಕನ್ನಡ ಸಮಕಾಲಿಕ ಅನುವಾದ

17 ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ಯೆಹೋವ ದೇವರಿಗೂ, ಅರಸನಿಗೂ, ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಹಾಗೆಯೇ ಅರಸನಿಗೂ, ಜನರಿಗೂ ಮಧ್ಯದಲ್ಲಿ ಒಡಂಬಡಿಕೆ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ, ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಅಲ್ಲಿ ಪ್ರಮಾಣ ಮಾಡಿದರು. ಇದಲ್ಲದೆ ರಾಜಪ್ರಜೆಗಳೂ ಒಡಂಬಡಿಕೆಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಸರ್ವೇಶ್ವರನ ಪ್ರಜೆಗಳಾಗಿರುವುದಾಗಿ ಪ್ರಮಾಣಮಾಡಿದರು. ಇದಲ್ಲದೆ, ರಾಜನಿಗೂ ಪ್ರಜೆಗಳಿಗೂ ಒಂದು ಒಪ್ಪಂದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವದಾಗಿ ಆತನಿಗೆ ಪ್ರಮಾಣಮಾಡಿದರು. ಇದಲ್ಲದೆ ರಾಜಪ್ರಜೆಗಳಿಗೂ ಒಡಂಬಡಿಕೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಆತನಿಗೆ ಪ್ರಮಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:17
19 ತಿಳಿವುಗಳ ಹೋಲಿಕೆ  

ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.


ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.


ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.


ಆದಕಾರಣ ನಮ್ಮ ಒಡೆಯನಾದ ನಿನ್ನ ಯೋಚನೆಯ ಪ್ರಕಾರವಾಗಿಯೂ, ನಮ್ಮ ದೇವರ ಆಜ್ಞೆಗೆ ಭಯಪಡುವವರ ಯೋಚನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ, ಅವರಿಂದ ಹುಟ್ಟಿದವರನ್ನೂ ಕಳುಹಿಸಿಬಿಡಲು, ಈಗಲೇ ನಮ್ಮ ದೇವರ ಮುಂದೆ ಒಡಂಬಡಿಕೆ ಮಾಡಿಕೊಂಡು, ದೇವರ ನಿಯಮದ ಪ್ರಕಾರ ನಡೆಯೋಣ.


ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಉಗ್ರಕೋಪವು ನಮ್ಮನ್ನು ಬಿಟ್ಟುಹೋಗುವ ಹಾಗೆ, ನಾನು ಅವರ ಸಂಗಡ ಒಡಂಬಡಿಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.


ಸಮುಯೇಲನು ರಾಜ್ಯದ ಪದ್ಧತಿಯನ್ನು ಜನರಿಗೆ ಹೇಳಿಕೊಟ್ಟು, ಒಂದು ಪುಸ್ತಕದಲ್ಲಿ ಬರೆದು, ಯೆಹೋವ ದೇವರ ಮುಂದೆ ಇಟ್ಟನು. ಆಗ ಸಮುಯೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.


ಇವೆಲ್ಲವನ್ನೂ ನಾವು ನೆನಸಿದ್ದಕ್ಕಿಂತಲೂ ಅವರು ಹೆಚ್ಚಾಗಿಯೇ ಮಾಡಿದರು. ಹೇಗೆಂದರೆ ಮೊದಲು ಅವರು ತಮ್ಮನ್ನೇ ಕರ್ತ ಯೇಸುವಿಗೆ ಒಪ್ಪಿಸಿಕೊಟ್ಟರು. ಅನಂತರ ದೇವರ ಚಿತ್ತಾನುಸಾರವಾಗಿ ತಮ್ಮನ್ನು ನಮಗೂ ಒಪ್ಪಿಸಿಕೊಟ್ಟರು.


“ಇದೆಲ್ಲದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ. ನಮ್ಮ ಪ್ರಧಾನರೂ, ಲೇವಿಯರೂ, ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ,” ಎಂದು ಪ್ರಾರ್ಥಿಸಿದರು.


ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ತನಗೂ, ಸಮಸ್ತ ಜನರಿಗೂ, ಅರಸನಿಗೂ ಒಡಂಬಡಿಕೆ ಮಾಡಿಸಿದನು.


ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಯೆಹೋವ ದೇವರು ಸಮುಯೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.


ಏಳನೆಯ ವರ್ಷದಲ್ಲಿ ಯೆಹೋಯಾದಾವನು ಶತಾಧಿಪತಿಯಾದವರನ್ನೂ, ಕಾರಿ ಎಂಬ ಸಿಪಾಯಿಗಳ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯಿಸಿ, ತನ್ನ ಬಳಿಗೆ ಯೆಹೋವ ದೇವರ ಆಲಯಕ್ಕೆ ಕರೆದುಕೊಂಡು ಬಂದನು. ಅವರ ಸಂಗಡ ಒಡಂಬಡಿಕೆಯನ್ನು ಮಾಡಿ, ಯೆಹೋವ ದೇವರ ಆಲಯದಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು, ಅನಂತರ ಅವನಿಗೆ ಅರಸನ ಮಗನನ್ನು ತೋರಿಸಿದನು.


ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.


ಗುಲಾಮರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಅರಸನಾದ ಚಿದ್ಕೀಯನು ಯೆರೂಸಲೇಮಿನ ಎಲ್ಲಾ ಜನರೊಂದಿಗೆ ಒಡಂಬಡಿಕೆಯನ್ನು ಮಾಡಿದ ನಂತರ ಯೆಹೋವ ದೇವರಿಂದ ಯೆರೆಮೀಯನಿಗೆ ಈ ಮಾತು ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು