Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:4 - ಕನ್ನಡ ಸಮಕಾಲಿಕ ಅನುವಾದ

4 ಏಳನೆಯ ವರ್ಷದಲ್ಲಿ ಯೆಹೋಯಾದಾವನು ಶತಾಧಿಪತಿಯಾದವರನ್ನೂ, ಕಾರಿ ಎಂಬ ಸಿಪಾಯಿಗಳ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯಿಸಿ, ತನ್ನ ಬಳಿಗೆ ಯೆಹೋವ ದೇವರ ಆಲಯಕ್ಕೆ ಕರೆದುಕೊಂಡು ಬಂದನು. ಅವರ ಸಂಗಡ ಒಡಂಬಡಿಕೆಯನ್ನು ಮಾಡಿ, ಯೆಹೋವ ದೇವರ ಆಲಯದಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು, ಅನಂತರ ಅವನಿಗೆ ಅರಸನ ಮಗನನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಳನೆಯ ವರ್ಷದಲ್ಲಿ, ಯೆಹೋಯಾದಾವನು ಕಾರಿಯರ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಆಪ್ತನಾಗಿದ್ದು ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡ ನಂತರ ರಾಜಕುಮಾರನನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಳನೆಯ ವರ್ಷದಲ್ಲಿ ಯೆಹೋಯಾದಾವನು ‘ಕಾರಿ’ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಸರ್ವೇಶ್ವರನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಪ್ಪಂದವನ್ನು ಮಾಡಿಕೊಂಡನಂತರ ರಾಜಕುಮಾರನನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಏಳನೆಯ ವರುಷದಲ್ಲಿ ಯೆಹೋಯಾದಾವನು ಕಾರಿ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಏಳನೆ ವರ್ಷದಲ್ಲಿ, ಪ್ರಧಾನ ಯಾಜಕನಾದ ಯೆಹೋಯಾದಾವನು ಕೆರೇತ್ಯರ ಸೇನಾಧಿಪತಿಗಳನ್ನು ಮತ್ತು ಕಾವಲುಗಾರರನ್ನು ಕರೆಸಿಕೊಂಡನು. ಯೆಹೋಯಾದಾವನು ಅವರನ್ನೆಲ್ಲ ಯೆಹೋವನ ಆಲಯದಲ್ಲಿ ಒಟ್ಟಾಗಿ ಸೇರಿಸಿದನು. ನಂತರ ಯೆಹೋಯಾದಾವನು ಅವರೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಯೆಹೋಯಾದಾವನು ಆಲಯದಲ್ಲಿ ಅವರು ವಾಗ್ದಾನ ಮಾಡುವಂತೆ ಬಲತ್ಕಾರಗೊಳಿಸಿದನು. ನಂತರ ಅವನು ಅವರಿಗೆ ರಾಜನ ಮಗನನ್ನು (ಯೆಹೋವಾಷನನ್ನು) ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:4
24 ತಿಳಿವುಗಳ ಹೋಲಿಕೆ  

ಅವನು ಶತಾಧಿಪತಿಗಳನ್ನೂ, “ಕಾರಿ” ಎಂಬ ಸಿಪಾಯಿಗಳ ಅಧಿಕಾರಿಗಳನ್ನೂ, ಕಾವಲುಗಾರರನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕಾವಲುಗಾರರ ಬಾಗಿಲ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಬಂದು, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.


ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಶತಾಧಿಪತಿಗಳು ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಯೆಹೋಯಾದಾವನ ಬಳಿಗೆ ಕರೆದುಕೊಂಡು ಬಂದರು.


ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ತಮ್ಮ ಪೂರ್ಣಹೃದಯದಿಂದಲೂ, ತಮ್ಮ ಪೂರ್ಣಪ್ರಾಣದಿಂದಲೂ ಹುಡುಕಬೇಕೆಂದೂ


ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ಯೆಹೋವ ದೇವರಿಗೂ, ಅರಸನಿಗೂ, ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಹಾಗೆಯೇ ಅರಸನಿಗೂ, ಜನರಿಗೂ ಮಧ್ಯದಲ್ಲಿ ಒಡಂಬಡಿಕೆ ಮಾಡಿಸಿದನು.


ಆಗ ದಳಪತಿಯು ತನ್ನ ಅಧಿಕಾರಿಗಳೊಂದಿಗೆ ಹೋಗಿ ಅಪೊಸ್ತಲರನ್ನು ಕರೆದುಕೊಂಡು ಬಂದನು. ಜನರು ತಮಗೆ ಕಲ್ಲೆಸೆದಾರೆಂಬ ಭಯ ಅವರಿಗಿದ್ದುದರಿಂದ ಅಪೊಸ್ತಲರನ್ನು ಬಲವಂತಮಾಡದೆ ಕರೆದುಕೊಂಡು ಬಂದನು.


ಈ ವರದಿಯನ್ನು ಕೇಳಿದಾಗ, ದೇವಾಲಯದ ಕಾವಲುಗಾರರ ದಳಪತಿಯೂ ಮುಖ್ಯಯಾಜಕರೂ ಇದರಿಂದ ಏನಾಗುವುದೋ ಎಂದು ಕಳವಳಪಟ್ಟರು.


ತಮ್ಮ ಸಹೋದರರಾದ ತಮ್ಮ ಶ್ರೇಷ್ಠರ ಸಂಗಡ ಕೂಡಿಕೊಂಡು ದೇವರ ಸೇವಕ ಮೋಶೆಯ ಕೈಯಿಂದ ಕೊಟ್ಟ ದೇವರ ನಿಯಮದಂತೆ ನಡೆಯುತ್ತೇವೆಂದೂ, ನಮ್ಮ ಕರ್ತ ಆಗಿರುವ ಯೆಹೋವ ದೇವರ ಆಜ್ಞೆಗಳನ್ನೂ, ಅವರ ನ್ಯಾಯಗಳನ್ನೂ, ಅವರ ಕಟ್ಟಳೆಗಳನ್ನೂ, ಎಲ್ಲವನ್ನೂ ಕೈಗೊಂಡು ಮಾಡುತ್ತೇವೆಂದೂ ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು;


“ಇದೆಲ್ಲದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ. ನಮ್ಮ ಪ್ರಧಾನರೂ, ಲೇವಿಯರೂ, ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ,” ಎಂದು ಪ್ರಾರ್ಥಿಸಿದರು.


ಅದಕ್ಕವರು, “ನಾವು ಹಿಂದಕ್ಕೆ ಕೊಡುತ್ತೇವೆ. ಅವರಿಂದ ಏನೂ ಕೇಳುವುದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ,” ಎಂದರು. ಆಗ ನಾನು ಯಾಜಕರನ್ನು ಕರೆದು, ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತೆಗೆದುಕೊಂಡೆನು.


ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಉಗ್ರಕೋಪವು ನಮ್ಮನ್ನು ಬಿಟ್ಟುಹೋಗುವ ಹಾಗೆ, ನಾನು ಅವರ ಸಂಗಡ ಒಡಂಬಡಿಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.


ಅವರ ಸಹೋದರರೂ ತಮ್ಮ ಕುಟುಂಬಗಳಲ್ಲಿ ಯಜಮಾನರು 1,760 ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿಗಳಾಗಿದ್ದರು.


ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.


ನಿನ್ನ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ, ರಾಜ್ಯವೂ ಒಂದೂ ಇಲ್ಲ. ಅವರು, ‘ಎಲೀಯನು ನಮ್ಮಲ್ಲಿ ಇಲ್ಲ,’ ಎಂದು ಹೇಳಿದಾಗ, ಅಹಾಬನು ಆ ರಾಜ್ಯಕ್ಕೂ, ಜನಾಂಗಕ್ಕೂ ಆಣೆ ಇಡಿಸಿಕೊಂಡನು.


ಅವರಿಬ್ಬರೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಹೋರೆಷದಲ್ಲಿಯೇ ಉಳಿದನು. ಆದರೆ ಯೋನಾತಾನನು ತನ್ನ ಮನೆಗೆ ಹೋದನು.


ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದನನ್ನು ಪ್ರೀತಿಮಾಡಿದ್ದರಿಂದ, ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು.


ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.


ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಶ್ಚಯವಾಗಿ ನಿಮಗೆ ಸಹಾಯ ಮಾಡುವರು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಬೇಕು,” ಎಂದು ಪ್ರಮಾಣ ಮಾಡಿಸಿದನು.


ಯೋವಾಬನು ಇಸ್ರಾಯೇಲಿನ ಸಮಸ್ತ ಸೈನ್ಯದ ಅಧಿಪತಿಯಾಗಿದ್ದನು. ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು.


ಹೀಗೆ ಅವನು ಯೆಹೋಷೆಬಳ ಸಂಗಡ ಆರು ವರ್ಷ ಯೆಹೋವ ದೇವರ ಆಲಯದಲ್ಲಿ ಗುಪ್ತವಾಗಿದ್ದನು, ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.


ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಸಮಾಲೋಚಕರಾಗಿದ್ದರು.


ಆದಕಾರಣ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ಪ್ರವೇಶದ್ವಾರದ ಕರ್ತವ್ಯದಲ್ಲಿದ್ದ ಕಾವಲುಗಾರರ ಅಧಿಪತಿಗಳ ಕೈಯಲ್ಲಿ ಒಪ್ಪಿಸಿದನು.


ಆದ್ದರಿಂದ ಅರಸನಾದ ಯೋವಾಷನು ಯಾಜಕನಾದ ಯೆಹೋಯಾದಾವನನ್ನು, ಇತರ ಯಾಜಕರನ್ನು ಕರೆದು ಅವರಿಗೆ, “ನೀವು ದೇವಾಲಯದ ಒಡಕುಗಳನ್ನು ಏಕೆ ದುರಸ್ತಿ ಮಾಡಿಸುತ್ತಿಲ್ಲ? ಇನ್ನು ಮೇಲೆ ನೀವು ನಿಮಗೆ ಪರಿಚಯವಿರುವ ಖಜಾಂಚಿಯವರಿಂದ ಹಣವನ್ನು ತೆಗೆದುಕೊಳ್ಳದೆ ದೇವಾಲಯದ ಒಡಕುಗಳನ್ನು ದುರಸ್ತಿ ಮಾಡಿಸಲು ಅದನ್ನು ಒಪ್ಪಿಸಿಕೊಡಿರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು