Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:10 - ಕನ್ನಡ ಸಮಕಾಲಿಕ ಅನುವಾದ

10 ಪೆಟ್ಟಿಗೆಯಲ್ಲಿ ಬಹಳ ಹಣ ಉಂಟೆಂದು ಅವರು ಕಂಡಾಗಲೆಲ್ಲಾ ಅರಸನ ಲೇಖಕನೂ, ಮಹಾಯಾಜಕನೂ ಬಂದು, ಯೆಹೋವ ದೇವರ ಆಲಯದಲ್ಲಿ ತಂದಿದ್ದ ಹಣವನ್ನು ಎಣಿಸಿ, ಚೀಲಗಳಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನ ಆಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗೆಲ್ಲಾ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪೆಟ್ಟಿಗೆಯಲ್ಲಿ ತಕ್ಕಷ್ಟು ಹಣಕೂಡಿದೆಯೆಂದು ಕಂಡುಬಂದಾಗೆಲ್ಲಾ, ರಾಜಲೇಖಕನು ಹಾಗು ಮಹಾಯಾಜಕನು ಬಂದು ಅದನ್ನು ಚೀಲಗಳಲ್ಲಿ ಹಾಕಿ, ತೂಕಮಾಡಿ, ಸರ್ವೇಶ್ವರನ ಆಲಯದ ಹಣವು ಇಷ್ಟಿಷ್ಟು ಆಯಿತೆಂದು ಬರೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪೆಟ್ಟಿಗೆಯಲ್ಲಿ ತಕ್ಕಷ್ಟು ಹಣಕೂಡಿದೆಯೆಂದು ಕಂಡು ಬಂದಾಗೆಲ್ಲಾ ರಾಜಲೇಖಕನೂ ಮಹಾಯಾಜಕನೂ ಬಂದು ಅದನ್ನು ಚೀಲಗಳಲ್ಲಿ ಹಾಕಿ ತೂಕಮಾಡಿ ಯೆಹೋವನ ಆಲಯದ ಹಣವು ಇಷ್ಟಿಷ್ಟು ಆಯಿತೆಂದು ಬರೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜನರು ದೇವಾಲಯಕ್ಕೆ ಹೋದಾಗ ಆ ಪೆಟ್ಟಿಗೆಯಲ್ಲಿ ಹಣವನ್ನು ಹಾಕಲಾರಂಭಿಸಿದರು. ರಾಜನ ಕಾರ್ಯದರ್ಶಿಯಾಗಲಿ ಪ್ರಧಾನಯಾಜಕನಾಗಲಿ ನೋಡಿದಾಗ ಸಾಕಷ್ಟು ಹಣವು ತುಂಬಿದ್ದರೆ ಅದನ್ನು ಲೆಕ್ಕಹಾಕಿ ಚೀಲಗಳಲ್ಲಿ ತುಂಬಿಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:10
11 ತಿಳಿವುಗಳ ಹೋಲಿಕೆ  

ಅಹೀಟೂಬನ ಮಗ ಚಾದೋಕನೂ ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.


ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕಾಯನ ಮಗನಾದ ಅಕ್ಬೋರನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,


ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.


ಆಗ ನಾಮಾನನು, “ನೀನು ದಯಮಾಡಿ ಆರು ಸಾವಿರ ನಾಣ್ಯಗಳನ್ನಾದರೂ ತೆಗೆದುಕೋ,” ಎಂದು ಹೇಳಿ ಗೇಹಜಿಯನ್ನು ಬಲವಂತ ಮಾಡಿದನು. ಹಾಗೆಯೇ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಎರಡು ಚೀಲಗಳಲ್ಲಿ ಕಟ್ಟಿಸಿ, ಅದರ ಸಂಗಡ ಎರಡು ಜೊತೆ ಬಟ್ಟೆಗಳನ್ನು ಕೊಟ್ಟು, ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು. ಅವರು ಗೇಹಜಿಯ ಮುಂದೆ ಹೊತ್ತುಕೊಂಡು ಹೋದರು.


ಶೆವನು ಕಾರ್ಯದರ್ಶಿಯಾಗಿದ್ದನು. ಚಾದೋಕನೂ ಅಬಿಯಾತರನೂ ಯಾಜಕರಾಗಿದ್ದರು.


ಅವರು ಎಣಿಸಿದ ಹಣವನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಅದರೊಂದಿಗೆ, ಅವರು ಯೆಹೋವ ದೇವರ ದೇವಸ್ಥಾನದಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ,


ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಕಛೇರಿಗೆ ತಂದಾಗಲೆಲ್ಲಾ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ, ಅರಸನ ಕಾರ್ಯದರ್ಶಿಯೂ, ಮುಖ್ಯಯಾಜಕನ ಪರಿಚಾರಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ, ತೆಗೆದುಕೊಂಡು ತಿರುಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.


ಅರಸನಾದ ಯೋಷೀಯನು ಬಾಳನಿಗೋಸ್ಕರವೂ, ಅಶೇರನಿಗೋಸ್ಕರವೂ, ಆಕಾಶದ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಸಮಸ್ತ ಸಲಕರಣೆಗಳನ್ನು ಯೆಹೋವ ದೇವರ ಆಲಯದಿಂದ ಹೊರಗೆ ತೆಗೆದುಕೊಂಡು ಬರಬೇಕೆಂದು ಮಹಾಯಾಜಕನಾದ ಹಿಲ್ಕೀಯನಿಗೂ, ಮುಖ್ಯಯಾಜಕರಿಗೂ, ದ್ವಾರಪಾಲಕರಿಗೂ ಆಜ್ಞಾಪಿಸಿದನು. ಅರಸನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಕಣಿವೆಯ ಬಯಲಿನಲ್ಲಿ ಸುಡಿಸಿ, ಅವುಗಳ ಬೂದಿಯನ್ನು ಬೇತೇಲಿಗೆ ತರುವಂತೆ ಮಾಡಿದನು.


ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮೊಮ್ಮಗನೂ ಕೋರೇಯನ ಮರಿಮಗನಾದ ಶಲ್ಲೂಮನೂ, ಅವನ ತಂದೆಯ ಮನೆಯವರಾಗಿರುವ ತನ್ನ ಸಹೋದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲಿದ್ದು, ದೇವದರ್ಶನ ಗುಡಾರದ ಬಾಗಿಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಯೆಹೋವ ದೇವರ ಗುಡಾರದ ದ್ವಾರಗಳ ಕಾವಲಿನವರಾಗಿದ್ದರು.


ಅವರು ಕಲ್ಲುಕುಟಿಕರಿಗೂ, ಬಡಗಿಯವರಿಗೂ, ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ, ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತೆಗೆದುಕೊಂಡು ಬರಲು ಸೀದೋನ್ಯರಿಗೂ, ಟೈರಿನವರಿಗೂ ಅನ್ನಪಾನಗಳನ್ನೂ, ಎಣ್ಣೆಯನ್ನೂ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು