Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:12 - ಕನ್ನಡ ಸಮಕಾಲಿಕ ಅನುವಾದ

12 ಉಪ್ಪಾರ, ಕಲ್ಲುಕುಟಿಗರಿಗೆ ಕೊಟ್ಟರು. ಇದಲ್ಲದೆ ಯೆಹೋವ ದೇವರ ಆಲಯವನ್ನು ದುರಸ್ತಿ ಮಾಡುವುದಕ್ಕೆ ಮರ, ಕೆತ್ತಿದ ಕಲ್ಲುಗಳನ್ನು ತೆಗೆದುಕೊಳ್ಳುವುದಕ್ಕೂ, ಆಲಯ ದುರಸ್ತಿ ಮಾಡಲು ಬೇಕಾದ ಸಮಸ್ತ ಖರ್ಚಿಗೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮರ, ಕೆತ್ತಿದ ಕಲ್ಲುಗಳನ್ನು ಕೊಂಡುಕೊಳ್ಳುವುದಕ್ಕೂ, ಆಲಯವನ್ನು ದುರಸ್ತಿ ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿಯೂ ಉಪಯೋಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮರ, ಕೆತ್ತಿದ ಕಲ್ಲು, ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಉಪಯೋಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇವರ ಸಂಬಳಕ್ಕಾಗಿಯೂ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವದಕ್ಕಾಗಿಯೂ ಆಲಯದ ಜೀರ್ಣೋದ್ಧಾರದ ಬೇರೆ ಎಲ್ಲಾ ವೆಚ್ಚಕ್ಕಾಗಿಯೂ ಉಪಯೋಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಕಲ್ಲುಕುಟಿಕರಿಗೂ ಶಿಲ್ಪಿಗಳಿಗೂ ಸಂಬಳ ಕೊಡುತ್ತಿದ್ದರು. ಅವರು ಆ ಹಣದಿಂದ ಮರವನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಂಡರು; ಯೆಹೋವನ ಆಲಯವನ್ನು ಸರಿಪಡಿಸಲು ಇತರ ಕೆಲಸಗಳಿಗೆ ಆ ಹಣವನ್ನು ಬಳಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:12
7 ತಿಳಿವುಗಳ ಹೋಲಿಕೆ  

ತರುವಾಯ ಶಿಷ್ಯರಲ್ಲಿ ಕೆಲವರು ದೇವಾಲಯದ ಕುರಿತು ಅದು ಸುಂದರವಾದ ಕಲ್ಲುಗಳಿಂದಲೂ ದೇವರಿಗೆ ಪ್ರತಿಷ್ಠೆಯ ಕೊಡುಗೆಗಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡುತ್ತಿದ್ದರು.


ಅರಸನಿಗೆ ತಿಳಿಯಬೇಕಾದದ್ದೇನೆಂದರೆ, ನಾವು ಯೆಹೂದರ ದೇಶದಲ್ಲಿರುವ ಮಹಾ ದೇವರ ಆಲಯಕ್ಕೆ ಹೋದೆವು. ಅದನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನು ಇಡುತ್ತಿದ್ದಾರೆ. ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಿಂದ ವೇಗವಾಗಿ ವೃದ್ಧಿಯಾಗುತ್ತದೆ.


ಅವರು ಕಲ್ಲುಕುಟಿಕರಿಗೂ, ಬಡಗಿಯವರಿಗೂ, ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ, ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತೆಗೆದುಕೊಂಡು ಬರಲು ಸೀದೋನ್ಯರಿಗೂ, ಟೈರಿನವರಿಗೂ ಅನ್ನಪಾನಗಳನ್ನೂ, ಎಣ್ಣೆಯನ್ನೂ ಕೊಟ್ಟರು.


ಇದಲ್ಲದೆ ಸೊಲೊಮೋನನಿಗೆ ಹೊರೆ ಹೊರುವವರು ಎಪ್ಪತ್ತು ಸಾವಿರವೂ, ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಬತ್ತು ಸಾವಿರವೂ ಇದ್ದರು.


ಅವರು ಎಣಿಸಿದ ಹಣವನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಅದರೊಂದಿಗೆ, ಅವರು ಯೆಹೋವ ದೇವರ ದೇವಸ್ಥಾನದಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು