Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:18 - ಕನ್ನಡ ಸಮಕಾಲಿಕ ಅನುವಾದ

18 ಆಗ ಯೆಹೂದದ ಅರಸನಾದ ಯೋವಾಷನು ತನ್ನ ಪೂರ್ವಜರಾದ ಯೆಹೋಷಾಫಾಟ, ಯೆಹೋರಾಮ್, ಅಹಜ್ಯ ಎಂಬ ಯೆಹೂದದ ಅರಸರು ಅರ್ಪಿಸಿದ ಸಮಸ್ತ ಪ್ರತಿಷ್ಠಿತವಾದವುಗಳನ್ನೂ ತಾನೇ ಸ್ವತಃ ಅರ್ಪಿಸಿದ ಪ್ರತಿಷ್ಠಿತವಾದವುಗಳನ್ನೂ ಯೆಹೋವ ದೇವರ ಆಲಯದ ಬೊಕ್ಕಸದಲ್ಲಿಯೂ, ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತೆಗೆದುಕೊಂಡು ಅರಾಮಿನ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟನೂ, ಯೆಹೋರಾಮನೂ, ಅಹಜ್ಯನೂ, ಯೆಹೂದ ರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಪ್ರತಿಷ್ಠೆಗಾಗಿ ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಜುದೇಯದ ಅರಸ ಯೆಹೋವಾಷನು ಇದನ್ನು ಕೇಳಿ, ತಾನು ಮತ್ತು ತನ್ನ ಪೂರ್ವಿಕರಾದ ಯೆಹೋಷಾಫಾಟ್, ಯೆಹೋರಾಮ್, ಅಹಜ್ಯಾ ಎಂಬ ಯೆಹೂದರಾಜರು ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳನ್ನು ಹಾಗು ಸರ್ವೇಶ್ವರನ ಆಲಯದ ಮತ್ತು ಅರಮನೆ ಭಂಡಾರಗಳಲ್ಲಿ ಇದ್ದ ಬಂಗಾರದ ವಸ್ತುಗಳನ್ನು ಸಿರಿಯಾದವರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಜೆರುಸಲೇಮನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟ್, ಯೆಹೋರಾಮ್, ಅಹಜ್ಯ ಎಂಬ ಯೆಹೂದರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರೆಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:18
11 ತಿಳಿವುಗಳ ಹೋಲಿಕೆ  

ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಮಿಕ್ಕ ಸಮಸ್ತ ಬೆಳ್ಳಿಬಂಗಾರವನ್ನು ತೆಗೆದು, ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ, ದಮಸ್ಕದಲ್ಲಿ ವಾಸವಾಗಿರುವ ಹೆಜ್ಯೋನನ ಮಗನೂ, ಟಬ್ರಿಮ್ಮೋನನ ಮಗನೂ ಆದ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿದನು.


ಆಗ ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಬೆಳ್ಳಿಬಂಗಾರವನ್ನು ತೆಗೆದು, ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ ಅವನಿಗೆ,


ಆಹಾಜನು ಯೆಹೋವ ದೇವರ ಆಲಯದಲ್ಲಿಯೂ, ಅರಮನೆಯ ಖಜಾನೆಯಲ್ಲಿಯೂ ಇದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಸ್ಸೀರಿಯದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.


ಯೋವಾಷನು ಯಾಜಕರಿಗೆ, “ಯೆಹೋವ ದೇವರ ಆಲಯಕ್ಕೆ ಪವಿತ್ರ ಅರ್ಪಣೆಗಳಾಗಿ ತರಲಾದ ಜನಗಣತಿಯಲ್ಲಿ ಸಂಗ್ರಹಿಸಿದ ಹಣ, ವೈಯಕ್ತಿಕ ಪ್ರತಿಜ್ಞೆಗಳಿಂದ ಪಡೆದ ಹಣ ಮತ್ತು ದೇವಾಲಯಕ್ಕೆ ಸ್ವಯಂಪ್ರೇರಣೆಯಿಂದ ತಂದ ಹಣವನ್ನು ಸಂಗ್ರಹಿಸಿರಿ ಎಂದನು.


ಅವನು ಯೆಹೋವ ದೇವರ ಆಲಯ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ದೋಚಿಕೊಂಡನು, ಇದಲ್ಲದೆ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ಒಳಗೊಂಡಂತೆ ಅವನು ಸಮಸ್ತವನ್ನೂ ದೋಚಿಕೊಂಡು ಹೋದನು.


ಯೋವಾಷನ ಇತರ ಕಾರ್ಯಗಳು, ಅವನು ಮಾಡಿದ್ದೆಲ್ಲವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಯೆಹೋವ ದೇವರ ಆಲಯದಲ್ಲಿ, ಅರಮನೆಯ ಬೊಕ್ಕಸಗಳಲ್ಲಿ ಸಿಕ್ಕಿದ ಸಕಲ ಬೆಳ್ಳಿಬಂಗಾರವನ್ನೂ ಎಲ್ಲಾ ಸಲಕರಣೆಗಳನ್ನೂ ಯುದ್ಧದಲ್ಲಿ ಬಂಧಿತರಾದವರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು.


ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ, ನನ್ನ ಅತ್ಯುತ್ತಮ ಸಂಪತ್ತನ್ನೂ ನಿಮ್ಮ ದೇವಸ್ಥಾನಗಳಿಗೆ ತೆಗೆದುಕೊಂಡು ಹೋಗಿದ್ದಿರಿ.


ಆಗ ಹಜಾಯೇಲನು, “ನನ್ನ ಒಡೆಯನು ಅಳುವುದೇಕೆ?” ಎಂದನು. ಅದಕ್ಕವನು, “ಏಕೆಂದರೆ ಇಸ್ರಾಯೇಲರಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ. ನೀನು ಅವರ ಕೋಟೆಗಳಿಗೆ ಬೆಂಕಿ ಹತ್ತಿಸಿ, ಅವರ ಯೌವನಸ್ಥರನ್ನು ಖಡ್ಗದಿಂದ ಕೊಂದು, ಅವರ ಕೂಸುಗಳನ್ನು ತುಂಡು ತುಂಡುಗಳಾಗಿ ಮಾಡಿ, ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವೆ,” ಎಂದ ಉತ್ತರಕೊಟ್ಟನು.


ಯೆಹೋಯಾದಾವನ ಮರಣದ ತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು