Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಎಲೀಷನು ಮರಣಕರ ವ್ಯಾಧಿಯಿಂದ ಬಳಲುತ್ತಿದ್ದಾಗ, ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು, ಅವನ ಮೇಲೆ ಬಿದ್ದು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥಗಳೂ ಕುದುರೆ ಸವಾರರು ಆಗಿದ್ದವನೇ!” ಎಂದು ಹೇಳುತ್ತಾ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಕಾಲದಲ್ಲಿ ಎಲೀಷನು ಮರಣಕರವಾದ ರೋಗಕ್ಕೆ ಗುರಿಯಾದನು. ಇಸ್ರಾಯೇಲರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥರಥಾಶ್ವಬಲಗಳಾಗಿದ್ದವನೇ” ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಎಲೀಷನು ಮಾರಕರೋಗದಿಂದ ನರಳುತ್ತಿದ್ದನು. ಇಸ್ರಯೇಲರ ಅರಸ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥಾರಥಾಶ್ವಬಲಗಳಾಗಿ ಇದ್ದವರೇ,” ಎಂದು ಗೋಳಿಡುತ್ತಾ ಅಧೋಮುಖನಾಗಿ ಬಿದ್ದು ಅತ್ತು ಪ್ರಲಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಎಲೀಷನು ಮರಣಕರ ರೋಗದಲ್ಲಿ ಬಿದ್ದನು. ಇಸ್ರಾಯೇಲ್ಯರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ - ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲ್ಯರಿಗೆ ರಥರಥಾಶ್ವಬಲಗಳಾಗಿದ್ದವನೇ ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಎಲೀಷನು ಕಾಯಿಲೆ ಬಿದ್ದನು. ತರುವಾಯ, ಈ ಕಾಯಿಲೆಯಿಂದ ಎಲೀಷನು ಸತ್ತುಹೋದನು. ಇಸ್ರೇಲಿನ ರಾಜನಾದ ಯೋವಾಷನು ಎಲೀಷನ ಬಳಿಗೆ ಹೋದನು. ಯೋವಾಷನು ಎಲೀಷನಿಗಾಗಿ ಗೋಳಾಡಿದನು. ಯೋವಾಷನು, “ನನ್ನ ತಂದೆಯೇ, ನನ್ನ ತಂದೆಯೇ, ದೇವರು ಬಂದು ನಿನ್ನನ್ನು ತೆಗೆದುಕೊಂಡು ಹೋಗಲು ಇದು ಸಕಾಲವೇ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:14
19 ತಿಳಿವುಗಳ ಹೋಲಿಕೆ  

ಏಕೆಂದರೆ ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮಗೆ ಮುಟ್ಟಿತೆಂದು ತಿಳಿದು ತುಂಬಾ ವ್ಯಸನಪಡುತ್ತಿದ್ದಾನೆ.


ಎಲೀಷನು ಅದನ್ನು ಕಂಡು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥ ಮತ್ತು ಸಾರಥಿಯಾದ್ದಾತನೇ!” ಎಂದು ಕೂಗಿದನು. ಮತ್ತೆ ಅವನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡುತುಂಡಾಗಿ ಹರಿದನು.


ಆದ್ದರಿಂದ ಅವನ ಸಹೋದರಿಯರು, “ಸ್ವಾಮೀ, ಇಗೋ, ನೀವು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ,” ಎಂದು ಯೇಸುವಿಗೆ ಹೇಳಿ ಕಳುಹಿಸಿದರು.


ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.


ಕೆಲವು ಕಾಲದ ನಂತರ ಯೋಸೇಫನಿಗೆ, “ನಿನ್ನ ತಂದೆ ಅಸ್ವಸ್ಥನಾಗಿದ್ದಾನೆ,” ಎಂಬ ಸುದ್ದಿ ಬಂದಿತು. ಆಗ ಅವನು ತನ್ನ ಇಬ್ಬರು ಪುತ್ರರಾದ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಕರೆದುಕೊಂಡು ತಂದೆಯ ಬಳಿಗೆ ಬಂದನು.


ಏಕೆಂದರೆ, ಯೋಹಾನನು ನೀತಿವಂತನು ಮತ್ತು ಪವಿತ್ರ ಮನುಷ್ಯನು ಎಂದು ತಿಳಿದು ಹೆರೋದನು ಭಯಪಟ್ಟು ಅವನನ್ನು ಸುರಕ್ಷಿತವಾಗಿಟ್ಟಿದ್ದನು. ಯೋಹಾನನು ಹೇಳಿದ್ದನ್ನು ಹೆರೋದನು ಕೇಳಿದಾಗಲೆಲ್ಲಾ ಅವನಿಗೆ ಗಲಿಬಿಲಿಯಾಗುತ್ತಿತ್ತು. ಆದರೂ ಅವನ ಮಾತನ್ನು ಕೇಳಲು ಇಷ್ಟಪಡುತ್ತಿದ್ದನು.


ನೀತಿವಂತನು ನಾಶವಾಗುವನು ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಭಕ್ತಿಯುಳ್ಳ ಮನುಷ್ಯರು ಕಣ್ಮರೆಯಾಗುವರು. ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾದರು ಎಂಬುದನ್ನು ಯಾರೂ ಯೋಚಿಸರು.


“ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.


ನಿಮ್ಮ ಪಿತೃಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?


“ಗೋಡೆಯನ್ನು ಕಟ್ಟಿ ನಾಡನ್ನು ನಾನು ಹಾಳುಮಾಡದಂತೆ ನಾಡಿನ ಪರವಾಗಿ ಪೌಳಿಗೋಡೆಯ ಬಿರುಕಿನಲ್ಲಿ ನಿಲ್ಲುವ ಒಬ್ಬ ಮನುಷ್ಯನನ್ನು ಅವರೊಳಗೆ ನಾನು ಹುಡುಕಿದೆನು. ಆದರೆ ಯಾರೂ ಸಿಕ್ಕಲಿಲ್ಲ.


ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಪ್ರಗತಿಯಾಗುತ್ತದೆ, ಆದರೆ ದುಷ್ಟರ ಬಾಯಿಂದ ಅದು ನಾಶವಾಗುತ್ತದೆ.


ಯೆಹೋವ ದೇವರೇ, ರಕ್ಷಿಸಿರಿ, ಏಕೆಂದರೆ ದೇವಭಕ್ತರು ಮುಗಿದು ಹೋಗುತ್ತಿದ್ದಾರೆ; ಜನರಲ್ಲಿ ನಂಬಿಗಸ್ತರು ಇಲ್ಲದೆ ಹೋಗುತ್ತಿದ್ದಾರೆ.


ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ, “ನನ್ನ ತಂದೆಯೇ, ನಾನು ಸಂಹರಿಸಲೋ, ಸಂಹರಿಸಲೋ?” ಎಂದನು.


ಯೋವಾಷನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಅವನು ಯೆಹೂದದ ಅರಸನಾದ ಅಮಚ್ಯನ ವಿರುದ್ಧ ಯುದ್ಧ ಮಾಡಿದ ಅವನ ಪರಾಕ್ರಮವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಯೋವಾಷನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು, ಇವನ ಶವವನ್ನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸರ ಸ್ಮಶಾನದಲ್ಲಿ ಸಮಾಧಿಮಾಡಿದರು. ಯಾರೊಬ್ಬಾಮನು ಅವನ ಸಿಂಹಾಸನ ಮೇಲೆ ಕುಳಿತುಕೊಂಡನು.


ಎಲೀಷನು ಅವನಿಗೆ, “ಒಂದು ಬಿಲ್ಲನ್ನೂ ಬಾಣಗಳನ್ನೂ ತೆಗೆದುಕೋ,” ಎಂದನು. ಅವನು ತೆಗೆದುಕೊಂಡನು.


ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ತರುವಾಯ, ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಪಿತೃಗಳೊಂದಿಗೆ ಸೇರಿದನು.


ಆಗ ಯೋಸೇಫನು ತನ್ನ ತಂದೆಯ ಶವದ ಮೇಲೆ ಬಿದ್ದು, ಅವನಿಗಾಗಿ ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು