Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:16 - ಕನ್ನಡ ಸಮಕಾಲಿಕ ಅನುವಾದ

16 ಅವನು ಇಸ್ರಾಯೇಲಿನ ಅರಸನಿಗೆ, “ನಿನ್ನ ಕೈಯಲ್ಲಿ ಬಿಲ್ಲನ್ನು ತೆಗೆದುಕೋ,” ಅವನು ಅದನ್ನು ತೆಗೆದುಕೊಂಡಾಗ ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಎಲೀಷನು ಇಸ್ರಾಯೇಲರ ಅರಸನಿಗೆ, “ಬಿಲ್ಲನ್ನು ಹಿಡಿದುಕೋ” ಎಂದು ಆಜ್ಞಾಪಿಸಿದನು. ಅವನು ಹಿಡಿದುಕೊಳ್ಳಲು ತನ್ನ ಕೈಯನ್ನು ಅವನ ಕೈಮೇಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ, “ಬಿಲ್ಲನ್ನು ಹಿಡಿದುಕೋ,” ಎಂದು ಆಜ್ಞಾಪಿಸಿದನು. ಅವನು ಹಿಡಿದುಕೊಳ್ಳಲು ತನ್ನ ಕೈಯನ್ನು ಅವನ ಕೈ ಮೇಲೆ ಇಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಅವನಿಗೆ - ಬಿಲ್ಲನ್ನು ಹಿಡಿದುಕೋ ಎಂದು ಆಜ್ಞಾಪಿಸಿದನು. ಅವನು ಹಿಡಿದುಕೊಳ್ಳಲು ತನ್ನ ಕೈಯನ್ನು ಅವನ ಕೈ ಮೇಲೆ ಇಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಎಲೀಷನು ಇಸ್ರೇಲಿನ ರಾಜನಿಗೆ, “ಬಿಲ್ಲಿನ ಮೇಲೆ ನಿನ್ನ ಕೈಯನ್ನು ಇಡು” ಎಂದು ಹೇಳಿದನು. ಯೋವಾಷನು ತನ್ನ ಕೈಯನ್ನು ಬಿಲ್ಲಿನ ಮೇಲಿಟ್ಟನು. ನಂತರ ಎಲೀಷನು ತನ್ನ ಕೈಗಳನ್ನು ರಾಜನ ಕೈಗಳ ಮೇಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:16
5 ತಿಳಿವುಗಳ ಹೋಲಿಕೆ  

ನನ್ನ ಬಲವಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ. ದೇವರು ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವಿದ್ಯೆಯನ್ನು ಕಲಿಸಿದ್ದಾರೆ.


ಅವನು ಮಗುವಿನ ಮೇಲೆ ಮಲಗಿಕೊಂಡು, ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ, ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ, ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನ ಮೇಲೆ ಬೋರಲು ಬಿದ್ದುದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು.


ಆದರೆ ಅವನ ಬಿಲ್ಲು ಸ್ಥಿರವಾಗಿ ನಿಲ್ಲುವುದು. ಅವನ ಬಲವಾದ ತೋಳುಗಳು ಚುರುಕಾಗಿ ನಿಂತವು. ಇದಕ್ಕೆ ಕಾರಣ ಯಾಕೋಬನಿಗೆ ಸರ್ವಶಕ್ತರಾಗಿರುವ ದೇವರ ಹಸ್ತವೇ; ಇದಕ್ಕೆ ಕಾರಣ ಇಸ್ರಾಯೇಲನ ಬಂಡೆಯಾಗಿರುವ ಕುರುಬ.


ಎಲೀಷನು ಅವನಿಗೆ, “ಒಂದು ಬಿಲ್ಲನ್ನೂ ಬಾಣಗಳನ್ನೂ ತೆಗೆದುಕೋ,” ಎಂದನು. ಅವನು ತೆಗೆದುಕೊಂಡನು.


“ಪೂರ್ವದಲ್ಲಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಎಲೀಷನು, “ಎಸೆ,” ಅನ್ನಲು, ಅವನು ಎಸೆದನು. “ಯೆಹೋವ ದೇವರ ವಿಜಯದ ಬಾಣವೇ, ಅರಾಮಿನಿಂದ ತಪ್ಪಿಸುವ ವಿಜಯದ ಬಾಣವೇ, ಅಫೇಕಿನಲ್ಲಿ ಅರಾಮ್ಯರನ್ನು ನಾಶಮಾಡುವವರೆಗೂ ನೀನು ಅವರನ್ನು ಹೊಡೆಯುವೆ,” ಎಂದು ಎಲೀಷನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು