Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:19 - ಕನ್ನಡ ಸಮಕಾಲಿಕ ಅನುವಾದ

19 ಆದರೆ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಆಗ ಅರಾಮ್ಯರನ್ನು ನಾಶಮಾಡುವವರೆಗೂ ಹೊಡೆಯುತ್ತಿದ್ದೆ. ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಮಾತ್ರ ಹೊಡೆಯುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ದೈವಪುರುಷನು ಅವನ ಮೇಲೆ ಸಿಟ್ಟುಗೊಂಡು, “ನೀನು ಐದಾರು ಸಾರಿ ಬಾಣಬಿಡಬೇಕಾಗಿತ್ತು. ಹಾಗೆ ಮಾಡಿದ್ದರೆ ಸಿರಿಯಾದವರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯ ದೊರಕುತ್ತಿತ್ತು. ನೀನು ಮೂರು ಸಾರಿ ಮಾತ್ರ ಬಾಣಬಿಟ್ಟದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು - ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವಮನುಷ್ಯನು (ಎಲೀಷನು) ಯೋವಾಷನ ಮೇಲೆ ಕೋಪಗೊಂಡು, “ನೀನು ಐದು ಅಥವಾ ಆರು ಸಲ ಹೊಡೆಯಬೇಕಾಗಿತ್ತು! ಆಗ ನೀನು ಅರಾಮ್ಯರನ್ನು ನಾಶಗೊಳಿಸುವವರೆಗೆ ಸೋಲಿಸಿ ಬಿಡಬಹುದಾಗಿತ್ತು! ಆದರೆ ಈಗ ನೀನು ಅರಾಮ್ಯರನ್ನು ಮೂರು ಸಲ ಮಾತ್ರ ಸೋಲಿಸುವೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:19
13 ತಿಳಿವುಗಳ ಹೋಲಿಕೆ  

ಆಗ ಯೆಹೋವಾಹಾಜನ ಮಗ ಯೋವಾಷನು ಯುದ್ಧದಲ್ಲಿ ತನ್ನ ತಂದೆ ಯೆಹೋವಾಹಾಜನ ಕೈಯಿಂದ ಹಜಾಯೇಲನು ತೆಗೆದುಕೊಂಡಿದ್ದ ಪಟ್ಟಣಗಳನ್ನು ಅವನ ಮಗ ಬೆನ್ಹದದನ ಕೈಯಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ, ಇಸ್ರಾಯೇಲಿನ ಪಟ್ಟಣಗಳನ್ನು ತಿರುಗಿ ತೆಗೆದುಕೊಂಡನು.


ಯೇಸು ಅದನ್ನು ಕಂಡಾಗ ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ.


ಅಲ್ಲಿ ಯೇಸು ಕೆಲವು ರೋಗಿಗಳ ಮೇಲೆ ಕೈಗಳನ್ನಿಟ್ಟು ಅವರನ್ನು ಗುಣಪಡಿಸಿದ್ದಲ್ಲದೆ ಬೇರೆ ಯಾವ ಅದ್ಭುತಗಳನ್ನೂ ಮಾಡಲಿಲ್ಲ.


ಆಗ ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ನೋಡಿ, ಅವರ ಹೃದಯಕಾಠಿಣ್ಯಕ್ಕಾಗಿ ದುಃಖಪಟ್ಟು, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದು ಹೇಳಿದರು. ಅವನು ಕೈಚಾಚಿದಾಗ, ಅವನ ಕೈ ಸಂಪೂರ್ಣವಾಗಿ ಗುಣವಾಯಿತು.


ಆಗ ದೇವರ ಮನುಷ್ಯನು ಇಸ್ರಾಯೇಲಿನ ಅರಸನಿಗೆ, “ಅಂಥಾ ಸ್ಥಳವನ್ನು ಹಾದುಹೋಗದೆ ಜಾಗ್ರತೆಯಾಗಿ ಇರು. ಏಕೆಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆ,” ಎಂದು ಹೇಳಿ ಕಳುಹಿಸಿದನು.


ಜನರಿಗೆ ಅದನ್ನು ತಿನ್ನುವುದಕ್ಕೆ ಬಡಿಸಿದರು. ಅವರು ಆಹಾರವನ್ನು ತಿನ್ನುತ್ತಿರುವಾಗ, “ದೇವರ ಮನುಷ್ಯನೇ, ಗಡಿಗೆಯಲ್ಲಿ ಮರಣ,” ಎಂದು ಕೂಗಿದರು. ಅವರು ಅದರಲ್ಲಿದ್ದದ್ದನ್ನು ತಿನ್ನಲಾರದೆ ಹೋದರು.


ಆಗ ಅವನು, “ಮುಂದಿನ ವರ್ಷ ಈ ಸಮಯದಲ್ಲಿ ನಿನ್ನ ಕೈಯಲ್ಲಿ ಒಬ್ಬ ಮಗನನ್ನು ಎತ್ತಿಕೊಂಡಿರುವೆ,” ಎಂದನು. ಅದಕ್ಕವಳು, “ಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಿಗೆ ನೀನು ಸುಳ್ಳು ಹೇಳಬೇಡ,” ಎಂದಳು.


ಆಗ ಮೋಶೆಯು ಬಹಳವಾಗಿ ಕೋಪಿಸಿಕೊಂಡು ಯೆಹೋವ ದೇವರಿಗೆ, “ಅವರ ಬಲಿಯನ್ನು ನೀವು ಗೌರವಿಸಬೇಡಿ, ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ. ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ,” ಎಂದು ಹೇಳಿದನು.


ಅನಂತರ ಮೋಶೆಯು ಶ್ರದ್ಧೆಯಿಂದ ಪಾಪ ಪರಿಹಾರದ ಬಲಿಯ ಹೋತವನ್ನು ಹುಡುಕಿದಾಗ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಪುತ್ರರಾದ ಎಲಿಯಾಜರ್ ಮತ್ತು ಈತಾಮಾರನ ಮೇಲೆ ಕೋಪಗೊಂಡು, ಹೇಳಿದ್ದೇನೆಂದರೆ,


ದೇವರ ಮನುಷ್ಯನಾದ ಎಲೀಷನ ಸೇವಕನಾಗಿರುವ ಗೇಹಜಿಯು, “ನನ್ನ ಯಜಮಾನನು ಈ ಅರಾಮ್ಯನಾದ ನಾಮಾನನು ತೆಗೆದುಕೊಂಡು ಬಂದದ್ದನ್ನು ಅವನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಯೆಹೋವ ದೇವರ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ, ಅವನ ಕೈಯಿಂದ ಏನಾದರೂ ತೆಗೆದುಕೊಳ್ಳುವೆನು,” ಅಂದುಕೊಂಡನು.


ಅವನು, “ಬಾಣಗಳನ್ನು ತೆಗೆದುಕೋ,” ಎಂದನು. ಅರಸನು ತೆಗೆದುಕೊಂಡನು. ಎಲೀಷನು ಇಸ್ರಾಯೇಲಿನ ಅರಸನಿಗೆ, “ನೆಲದ ಮೇಲೆ ಹೊಡೆ,” ಎಂದನು. ಆಗ ಅವನು ಮೂರು ಸಾರಿ ಮಾತ್ರ ಹೊಡೆದು ನಿಂತನು.


“ಯೆಹೋವ ದೇವರು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ರಕ್ತದಿಂದ ತನ್ನ ಖಡ್ಗವನ್ನು ಹಿಂದೆಗೆಯುವವನಿಗೆ ಶಾಪವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು